ಗುಜ್ಜಾಡಿ: ರಸ್ತೆ ಬದಿ ಕಸ ಎಸೆಯುವುದಕ್ಕೆ ಬಿದ್ದಿಲ್ಲ ಕಡಿವಾಣ
ಸಿಸಿ ಟಿವಿ ಅಳವಡಿಸಿದರೂ ಕ್ಯಾರೇ ಅನ್ನದ ಮಂದಿ ;ಕಾರು, ಬೈಕ್‌ಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆತ
Team Udayavani, Jan 21, 2020, 5:32 AM IST
ಗುಜ್ಜಾಡಿ: ಮುಳ್ಳಿಕಟ್ಟೆಯಿಂದ ಗುಜ್ಜಾಡಿಗೆ ಹೋಗುವ ಮುಖ್ಯ ರಸ್ತೆಯ ಇಕ್ಕೆಲಗಳ ಉದ್ದಕ್ಕೂ ತ್ಯಾಜ್ಯದ ರಾಶಿಯೇ ಕಂಡುಬರುತ್ತಿದೆ. ಕಸ ಎಸೆಯಬೇಡಿ ಎಂದು ಪಂಚಾಯತ್ ಎಚ್ಚರಿಕೆಯ ನಾಮಫಲಕ ಹಾಕಿದರೂ, ಬೈಕ್, ಕಾರು, ಮತ್ತಿತರ ವಾಹನಗಳಲ್ಲಿ ಬರುವ ಜನ ರಸ್ತೆ ಬದಿ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯವನ್ನು ಎಸೆದು ಹೋಗುತ್ತಾರೆ.
ಪಂಚಾಯತ್ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಸಮರ್ಪಕವಾದ ವ್ಯವಸ್ಥೆಯಿಲ್ಲದ ಕಾರಣ ಗ್ರಾಮಸ್ಥರು ಹಾಗೂ ಹೊರಗಿನಿಂದ ಬರುವ ಜನರು ಮುಳ್ಳಿಕಟ್ಟೆ- ನಾಯಕವಾಡಿ ರಸ್ತೆ, ತ್ರಾಸಿ – ನಾಯಕವಾಡಿ ರಸ್ತೆಗಳ ಎರಡೂ ಬದಿ, ಚರಂಡಿಗಳಿಗೆ ಕಸ ಎಸೆಯುತ್ತಿದ್ದಾರೆ. ಕೇವಲ ಗುಜ್ಜಾಡಿ ಗ್ರಾಮದ ಜನರು ಮಾತ್ರವಲ್ಲದೆ ಗಂಗೊಳ್ಳಿ ಹಾಗೂ ಇನ್ನಿತರ ಕಡೆಗಳಿಂದ ವಾಹನಗಳಲ್ಲಿ ರಾತ್ರಿ ವೇಳೆ ಬಂದು ಕಸ ಎಸೆದು ಹೋಗುತ್ತಿದ್ದಾರೆ ಎನ್ನುವುದು ಗುಜ್ಜಾಡಿ ಪಂಚಾಯತ್ ಅಧಿಕಾರಿಗಳ ಆರೋಪ.
ಪಂಚಾಯತ್ ಮನವಿ
ರಸ್ತೆ ಬದಿ ಕಸ ತಂದು ಎಸೆಯಬೇಡಿ ಎಂದು ಗುಜ್ಜಾಡಿ ಗ್ರಾಮ ಪಂಚಾಯತ್ ಅನೇಕ ಬಾರಿ ಸೂಚನಾ ಫಲಕ ಅಳವಡಿಸಿ, ಮನವಿ ಮಾಡಿಕೊಂಡಿದೆ. ಆದರೆ ಈ ಮನವಿಗೆ ಮನ್ನಣೆಯೇ ನೀಡದೇ ರಾತ್ರಿ ಹೊತ್ತಲ್ಲಿ ಬಂದು ಕಸ ಎಸೆದು ಹೋಗುತ್ತಿರುವುದು ಕಂಡು ಬರುತ್ತಿದೆ. ಒಂದು ಕಡೆ ಸಿಸಿಟಿವಿ ಕೂಡ ಅಳವಡಿಸಲಾಗಿದೆ. ಆದರೂ ಅದನ್ನು ಕ್ಯಾರೇ ಅನ್ನುತ್ತಿಲ್ಲ. ಕಸ ಎಸೆಯುವುದನ್ನು ನಿಯಂತ್ರಿಸುವುದೇ ಪಂಚಾಯತ್‌ಗೆ ಸವಾಲಿನ ಸಂಗತಿಯಾಗಿದೆ.
ವಿಲೇವಾರಿ ಘಟಕಕ್ಕೆ ಆಗ್ರಹ
ಉಡುಪಿ ಜಿಲ್ಲೆಯಲ್ಲಿ ಕಳೆದೊಂದು ವರ್ಷದಿಂದ ಅನೇಕ ಗ್ರಾ.ಪಂ.ಗಳು, ಜಿ.ಪಂ. ಅನುದಾನದ ನೆರವಿನಿಂದ ಕಸ ವಿಲೇವಾರಿ ಸಮಸ್ಯೆ ನಿವಾರಿಸುವ ಸಲುವಾಗಿ ಘನ ತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಿದೆ. ಕಸ ವಿಲೇವಾರಿ ಜತೆಗೆ, ಅದನ್ನು ಗೊಬ್ಬರವಾಗಿ ಪರಿವರ್ತಿಸಿದರೆ ಪಂಚಾಯತ್‌ಗೂ ಆದಾಯ ಬರುತ್ತದೆ. ಗುಜ್ಜಾಡಿಯಲ್ಲೂ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಿದರೆ, ಕಸದ ವಿಲೇವಾರಿ ಸಮಸ್ಯೆ ನಿವಾರಣೆಯಾಗಲಿದೆ ಎಂಬುದು ಇಲ್ಲಿನ ಗ್ರಾಮಸ್ಥರ ಆಗ್ರಹವಾಗಿದೆ.
ಉದಯವಾಣಿ ವರದಿ
ಗುಜ್ಜಾಡಿ ಗ್ರಾಮಕ್ಕೆ ಅನುದಾನ ಇದ್ದರೂ, ತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಲು ಜಾಗದ ಸಮಸ್ಯೆ ಕುರಿತು ಪತ್ರಿಕೆ ಡಿ. 2 ರಂದು ವಿಶೇಷ ವರದಿ ಮೂಲಕ ಗಮನಸೆಳೆದಿತ್ತು. ಗುಜ್ಜಾಡಿ ಗ್ರಾಮದಲ್ಲಿ ಮಂಕಿ, ಕಳಿಹಿತ್ಲು, ಜನತಾ ಕಾಲನಿ, ಸಂಗಮೇಶ್ವರ ದೇವಸ್ಥಾನ ವಾರ್ಡ್ , ಬೆಣೆYರೆ ಸೇರಿ ಒಟ್ಟು 5 ವಾರ್ಡ್, ಒಟ್ಟು 6,042 ಜನರಿದ್ದು, ಒಟ್ಟು 1,300ಕ್ಕೂ ಹೆಚ್ಚು ಕಟ್ಟಡಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.