Gurme Suresh Shetty: ಕಡಲ್ಕೊರೆತ ತಡೆಗೋಡೆ ರಚನೆಗೆ ಗುರ್ಮೆ ಸುರೇಶ್ ಶೆಟ್ಟಿ ಆಗ್ರಹ
Team Udayavani, Feb 22, 2024, 10:03 PM IST
ಬೆಂಗಳೂರು: ಕಾಪು ವಿಧಾನಸಭಾ ಕ್ಷೇತ್ರದ ಕಡಲ್ಕೊರೆತ ಪ್ರದೇಶಗಳಲ್ಲಿ ತಡೆಗೋಡೆ ರಚನೆಗೆ ಕ್ರಮ ಕೈಗೊಳ್ಳುವಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿಧಾನಸಭೆಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.
ಕಾಪು, ಮೂಳೂರು, ಎರ್ಮಾಳು, ಪಡುಬಿದ್ರಿ, ಹೆಜಮಾಡಿ, ಕೈಪುಂಜಾಲು, ಮಟ್ಟು, ಉದ್ಯಾವರ ಪರಿಸರದ ವಿವಿಧೆಡೆ ಪ್ರತಿ ವರ್ಷ ಕಡಲ್ಕೊರೆತರ ಆಗುತ್ತಿದ್ದು, ಮೀನುಗಾರಿಕೆ ರಸ್ತೆ, ವಾಸದ ಮನೆ, ಜಮೀನು ಮತ್ತು ತೆಂಗಿನ ಮರಗಳಿಗೆ ಹಾನಿಯುಂಟಾಗುತ್ತಿದೆ. ಈ ಬಗ್ಗೆ ಎರಡು ಬಾರಿ ಪ್ರಸ್ತಾವನೆ ಸಲ್ಲಿಸಿದ್ದೇನೆ. ಮೂಳೂರಿಗೆ ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮೀನುಗಾರಿಕೆ ಸಚಿವ ಮಂಕಾಳ ಎಸ್. ವೈದ್ಯ, ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದರು. ಆದರೆ ಈವರೆಗೂ ಕಾಮಗಾರಿ ಆರಂಭಗೊಂಡಿಲ್ಲ ಎಂದು ಸರಕಾರದ ಗಮನ ಸೆಳೆದರು.
ಇದಕ್ಕೆ ಉತ್ತರಿಸಿದ ಬಂದರು ಮತ್ತು ಮೀನುಗಾರಿಕೆ ಸಚಿವ ಮಂಕಾಳು ವೈದ್ಯ ಅವರು, ಉಡುಪಿ ಜಿಲ್ಲೆಯ ಕಡಲ್ಕೊರೆತ ಪ್ರದೇಶಗಳಿಗೆ ತೆರಳಿ ಹಾನಿ ಪರಿಶೀಲಿಸಿದ್ದು, ಅವಶ್ಯವಿರುವಲ್ಲಿ ತುರ್ತು ಕಾಮಗಾರಿ ನಡೆಸುವಂತೆ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶಾಸಕರ ಪ್ರಸ್ತಾವನೆಯನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.