“ಗುರುಪೂಜೆ, ಗುರುದರ್ಶನದಿಂದ ಭಕ್ತಾದಿಗಳ ಆಶೋತ್ತರ ಈಡೇರಿಕೆ’

Team Udayavani, Jul 11, 2017, 1:45 AM IST

guru-pooje.jpg

ಕಾಪು : ಗುರುವಿನ ಸಾಮಿಪ್ಯದಿಂದ ಪರಿವರ್ತನೆ ಸಾಧ್ಯ. ಗುರು ಪೌರ್ಣಮಿಯಂದು ಗುರುಗಳನ್ನು ಸ್ಮರಿಸಿ, ಅವರನ್ನು ಗೌರವಿಸಿ, ನಮ್ಮ ಪ್ರಾರ್ಥನೆಯನ್ನು ಸಲ್ಲಿಸಿದಲ್ಲಿ ಭಕ್ತಾಧಿಗಳ ಆಶೋತ್ತರಗಳು ಈಡೇರುತ್ತವೆ ಎಂಬ ನಂಬಿಕೆಯಿದೆ.

ಗುರುಪೂಜೆಯಿಂದಾಗಿ ಸಮಸ್ತ ಸದ್ಭಕ್ತರಿಗೆ ಶ್ರೇಯಸ್ಸುಂಟಾಗಲಿ ಎಂದು ಕಟಪಾಡಿ ಶ್ರೀಮತ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹೇಳಿದರು.

ಪಡುಕುತ್ಯಾರು ಶ್ರೀಮತ್‌ ಆನೆಗುಂದಿ ಮಠದ ಸಭಾಂಗಣದಲ್ಲಿ ಹೇಮಲಂಬಿ ನಾಮ ಸಂವತ್ಸರದಲ್ಲಿ ಅವರು ಜು. 9ರಿಂದ ಪ್ರಾರಂಭಿಸಿದ ಚಾತುರ್ಮಾಸ್ಯ ವ್ರತಾಚರಣೆಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಗುರುಗಳ ಅನುಗ್ರಹದಿಂದ ಜೀವನ ಸಾರ್ಥಕ್ಯ ಪಡೆಯುತ್ತದೆ. ಗುರುವಿಗೇ ಗುರುವೇ ಸಾಟಿ. ಗುರು ಸಾನ್ನಿಧ್ಯಕ್ಕೆ ಬಂದಾಗ ಎಲ್ಲರೂ ಎಲ್ಲವನ್ನೂ ಮರೆತು ಭಗವಂತನ ಕಡೆ ಒಲವು ತೋರಿದಲ್ಲಿ ಮನುಷ್ಯ ಸದ್ಗುಣವಂತನಾಗಲು ಸಾಧ್ಯ. ನಿತ್ಯಪೂಜೆ, ಭಜನೆ, ಉಪಾಸನೆಯ ಜೊತೆಗೆ ಗುರುಗಳ ಮಾರ್ಗದರ್ಶನದಲ್ಲಿ ಮುನ್ನಡೆದು, ಪರಿವರ್ತನೆಯ ಹಾದಿಯಲ್ಲಿ ಮುಂದಡಿಯಿಡುವಂತೆ ಅವರು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ತ್ರಾಸಿ ಸುಧಾಕರ ಆಚಾರ್ಯ ಮಾತನಾಡಿ, ಸಮಾಜದ ಜನರು ಸೇರಿಕೊಂಡು ಮಾಡುವ ಕಾರ್ಯಕ್ರಮದ ಜತೆಗೆ ಹಿಂದು ಸಮಾಜದ ಸಮಸ್ತರು ಕೈಜೋಡಿಸಿ ಚಾತುರ್ಮಾಸ್ಯ ವ್ರತಾಚರಣೆ ನಡೆಯುತ್ತಿರುವುದು ಸಂತಸದಾಯಕವಾಗಿದೆ. ಮುಂದೆ ಪೂರ್ಣ ಪ್ರಮಾಣದ ಶ್ರೀ ಮಠ ನಿಮಾಣಕ್ಕೆ ಸಮಸ್ತರು ಕೈ ಜೋಡಿಸುವಂತೆ ವಿನಂತಿಸಿದರು.

ಚಾತುರ್ಮಾಸ್ಯ ವೃತ ನಿರ್ವಹಣಾ ಸಮಿತಿಯ ಗೌರವಾಧ್ಯಕ್ಷ ಕೆ. ಕೇಶವ ಆಚಾರ್ಯ ಮಂಗಳೂರು ಮಾತನಾಡಿ, ಶೀÅಗಳು ಹಿಂದಿನ 12 ಚಾತುರ್ಮಾಸ್ಯ ವ್ರತಾಚರಣೆಗಳಿಗಿಂತ ಭಿನ್ನವಾಗಿ ಪ್ರಥಮ ಬಾರಿಗೆ ಶ್ರೀ ಮಠದಲ್ಲಿ ಚಾತುರ್ಮಾಸ್ಯವನ್ನು ಕೈಗೊಳ್ಳುತ್ತಿದ್ದಾರೆ. ಸಮಸ್ತ  ಹಿಂದುಗಳು ಜತೆಯಾಗಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸು, ಶ್ರೀ ಮಠದ ಅಭಿವೃದ್ಧಿ ಕಾರ್ಯಗಳಲ್ಲಿ ಸಹಭಾಗಿಗಳಾಗುವಂತೆ ಕರೆ ನೀಡಿದರು. ಪುರ ಪ್ರವೇಶೋತ್ಸವ ಸಾರ್ವಜನಿಕ ಸ್ವಾಗತ ಸಮಿತಿಯ ಗೌರವ ಉಪಾಧ್ಯಕ್ಷ ಕಟಪಾಡಿ ಶಂಕರ ಪೂಜಾರಿ, ಪ್ರಧಾನ ಕಾರ್ಯದರ್ಶಿ ಕೆ. ಮುರಲೀಧರ ಪೈ, ಸಂಘಟನಾ ಕಾರ್ಯದರ್ಶಿ ಕುತ್ಯಾರು ಪ್ರಸಾದ್‌, ಮಾತƒ ಮಂಡಳಿ ಅಧ್ಯಕ್ಷೆ ಶಿಲ್ಪಾ ಜಿ. ಸುವರ್ಣ, ಗಂಗಾಧರ ಸುವರ್ಣ, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿಯ ಪದಾಧಿಕಾರಿಗಳು,  ಶ್ರೀಮತ್‌ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಪದಾಧಿಕಾರಿಗಳು, ವಿಶ್ವಸ್ಥರು, ವಿವಿಧ ಸಮಿತಿಗಳ ಮುಖ್ಯಸ್ಥರು, ಭಕ್ತಾಧಿಗಳು ಉಪಸ್ಥಿತರಿದ್ದರು.

ಪ್ರತಿಷ್ಠಾನದ ಗೌ| ಪ್ರ| ಕಾರ್ಯದರ್ಶಿ ಲೋಕೇಶ್‌ ಎಂ. ಬಿ. ಆಚಾರ್‌ ಕಂಬಾರು ಸ್ವಾಗತಿಸಿದರು. ಮಾಜಿ ಪ್ರಧಾನ ಕಾರ್ಯದರ್ಶಿ ವೈ. ಧರ್ಮೇಂದ್ರ ಆಚಾರ್ಯ ಕಾಸರಗೋಡು ಪ್ರಸ್ತಾವನೆ ಗೆ„ದರು. ಪ್ರ. ಕಾರ್ಯದರ್ಶಿ ನಾಗರಾಜ ಆಚಾರ್ಯ ಕಾಡಬೆಟ್ಟು ವಂದಿಸಿದರು. ಕೋಶಾಧಿಕಾರಿ ಪಿ. ವಿ. ಗಂಗಾಧರ ಆಚಾರ್ಯ ಉಡುಪಿ, ಕಾರ್ಯದರ್ಶಿ ಸುರೇಶ್‌ ಆಚಾರ್ಯ ಕಾರ್ಕಳ, ಕೆ. ಜಿ. ಆಚಾರ್ಯ ಹೆಬ್ರಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.