ಕಾಮನ್‌ವೆಲ್ತ್‌ ಗೇಮ್ಸ್‌ ನಲ್ಲಿ ಕಂಚಿನ ಪದಕ : “ಯುವಜನತೆಗೆ ಗುರುರಾಜ್‌ ಸ್ಫೂರ್ತಿ’


Team Udayavani, Aug 8, 2022, 9:27 AM IST

ಕಾಮನ್‌ವೆಲ್ತ್‌ ಗೇಮ್ಸ್‌ ನಲ್ಲಿ ಕಂಚಿನ ಪದಕ : “ಯುವಜನತೆಗೆ ಗುರುರಾಜ್‌ ಸ್ಫೂರ್ತಿ’

ಉಡುಪಿ : ಇಂಗ್ಲಂಡ್‌ನ‌ ಬರ್ಮಿಂಗ್‌ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ವೇಟ್ ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ಜಿಲ್ಲೆಗೆ ಆಗಮಿಸಿದ ಕುಂದಾಪುರದ ಗುರುರಾಜ ಪೂಜಾರಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ನೇತೃತ್ವದಲ್ಲಿ ಅದ್ದೂರಿ ಯಾಗಿ ಸ್ವಾಗತಿಸಲಾಯಿತು.

ಬಳಿಕ ನಡೆದ ಅಭಿನಂದನ ಕಾರ್ಯಕ್ರಮ ದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಎಡಿಸಿ ವೀಣಾ ಬಿ.ಎನ್‌., ಪೌರಾಯುಕ್ತ ಡಾ| ಉದಯ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ ಸಮ್ಮಾನಿಸಿದರು.

ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅವಧಿಯಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ ನಲ್ಲಿ ಪದಕ ಪಡೆಯುವ ಮೂಲಕ ಗುರುರಾಜ ಅವರು ಉಡುಪಿ ಜಿಲ್ಲೆಯ ಸಂಭ್ರಮವನ್ನು ಹೆಚ್ಚಿಸಿದ್ದು, ದೇಶದಲ್ಲಿ ಜಿಲ್ಲೆಯ ಹೆಸರನ್ನು ಪ್ರಖ್ಯಾತಗೊಳಿಸಿದ್ದಾರೆ. ಗ್ರಾಮೀಣ ಪ್ರದೇಶದ ಪ್ರತಿಭೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಹ ಉನ್ನತ ಸಾಧನೆಗಳನ್ನು ಮಾಡಲು ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿರುವ ಇವರ ಸಾಧನೆ ಜಿಲ್ಲೆಯ ಯುವಜನತೆಗೆ ಹಾಗೂ ಕ್ರೀಡಾಪಟುಗಳಿಗೆ ಸದಾ ಸ್ಫೂರ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಸರಕಾರದ ಪ್ರೋತ್ಸಾಹ ಸಾಲದು
ರಾಜ್ಯ ಸರಕಾರ ಕ್ರೀಡೆಗೆ ಮತ್ತಷ್ಟು ಪ್ರೋತ್ಸಾಹ ನೀಡಬೇಕು. ಹರಿಯಾಣ, ಪಂಜಾಬ್‌ ಸರಕಾರಗಳು ಕಂಚು ವಿಜೇತರಾದವರಿಗೂ 40-50 ಲ.ರೂ.ಗಳನ್ನು ಘೋಷಣೆ ಮಾಡಿವೆ. ಆದರೆ ಕರ್ನಾಟಕ ಸರಕಾರ ನನಗೆ 8 ಲ.ರೂ. ಮಾತ್ರ ಘೋಷಿಸಿದೆ. ಇದರ ತರಬೇತಿ ಬಹಳ ದುಬಾರಿಯಾಗಿದ್ದು, ತಿಂಗಳಿಗೆ 30ರಿಂದ 40 ಸಾವಿರ ರೂ. ಬೇಕಾಗುತ್ತದೆ. ಪ್ರಸ್ತುತ ಚಂಡೀಗಢದಲ್ಲಿ ಏರ್‌ಫೋರ್ಸ್‌ ನಲ್ಲಿ ಉದ್ಯೋಗದಲ್ಲಿದ್ದು, ನಮ್ಮ ರಾಜ್ಯದಲ್ಲಿ ಉದ್ಯೋಗಾವಕಾಶ ಕಲ್ಪಿಸಿದರೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಗುರುರಾಜ್‌ ಹೇಳಿದರು. ಪ್ರಶಸ್ತಿಯನ್ನು ಪತ್ನಿಗೆ ಅರ್ಪಿಸಿದ ಅವರು ಕ್ರೀಡಾಪಟುಗಳು ನಿರ್ದಿಷ್ಟ ಗುರಿ ಯೊಂದಿಗೆ ಕಠಿನ ಪರಿಶ್ರಮ ಪಟ್ಟರೆ ಉನ್ನತ ಸಾಧನೆ ಮಾಡಲು ಸಾಧ್ಯ ಎಂದರು.

ಗುರುರಾಜರ ತಂದೆ, ಪತ್ನಿ, ಅಜ್ಜರಕಾಡು ಕ್ರೀಡಾ ವಸತಿ ಶಾಲೆಯ ಕ್ರೀಡಾಪಟುಗಳು, ನೇಶನ್‌ ಫ‌ಸ್ಟ್‌ ತಂಡದ ಸದಸ್ಯರು ಇದ್ದರು.

ಟಾಪ್ ನ್ಯೂಸ್

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

complaint

Udupi: ಕಾರ್ಮಿಕನ ಬೈಕ್‌ ಕಳ್ಳತನ; ಪ್ರಕರಣ ದಾಖಲು

sand

Karkala: ಪರವಾನಿಗೆ ಇಲ್ಲದೆ ಮರಳು ಲೂಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.