ಹೆಚ್ಚುತ್ತಿದೆ ಎಚ್‌1 ಎನ್‌1, ಡೆಂಗ್ಯೂ ಜ್ವರ; ಜಾಗೃತಿ ಅಗತ್ಯ


Team Udayavani, Jul 19, 2017, 4:45 AM IST

Mosquito-600.jpg

ಉಡುಪಿ: ಜಿಲ್ಲೆಯಾದ್ಯಂತ ಸಾಂಕ್ರಾಮಿಕ ರೋಗಗಳ ಭೀತಿ ಆರಂಭಗೊಂಡಿದ್ದು, ಎಚ್‌1 ಎನ್‌1, ಡೆಂಗ್ಯೂ ಜ್ವರ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅದರಲ್ಲೂ ಕೆಲವು ಎಚ್‌1 ಎನ್‌ 1 ಪ್ರಕರಣಗಳು ಮಾರಾಣಾಂತಿಕವಾಗಿ ಪರಿಣಮಿಸಿದ್ದು, ಜನರು ಜಾಗೃತಿ ವಹಿಸುವುದು ಅತ್ಯಗತ್ಯವಾಗಿದೆ. ಜಿಲ್ಲೆಯಲ್ಲಿ ಈವರೆಗೆ 243 ಎಚ್‌1ಎನ್‌1 ಹಾಗೂ 218 ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಂಡಿದ್ದು, ಎಚ್‌1 ಎನ್‌ 1 6 ಮಂದಿ ಮೃತಪಟ್ಟಿದ್ದಾರೆ. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಎಚ್‌ 1 ಎನ್‌ 1 ರೋಗಗಳು ಹರಡುವ ಸಾಧ್ಯತೆ ಹೆಚ್ಚಿದ್ದು, ಜಿಲ್ಲೆಯಲ್ಲಿ ಮಲೇರಿಯಾ ಹೆಚ್ಚಿದ್ದರೂ, ಸ್ಪಲ್ಪ ಮಟ್ಟಿಗಿನ ನಿಯಂತ್ರಣದಲ್ಲಿದೆ. ಆದರೆ ಎಚ್‌ 1 ಎನ್‌ 1 ಹಾಗೂ ಡೆಂಗ್ಯೂ ಪ್ರಕರಣ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ.
 
ಉಡುಪಿಯಲ್ಲಿ ಹೆಚ್ಚು
ಕಳೆದ ಜನವರಿಯಿಂದ ಈವರೆಗೆ ಉಡುಪಿ ಜಿಲ್ಲೆಯ 3 ತಾಲೂಕುಗಳ ಪೈಕಿ ಉಡುಪಿ ತಾಲೂಕಿನಲ್ಲಿಯೇ ಡೆಂಗ್ಯೂ ಹಾಗೂ ಎಚ್‌1 ಎನ್‌ 1 ಪ್ರಕರಣಗಳ ಸಂಖ್ಯೆ ಹೆಚ್ಚು ಕಾಣಿಸಿಕೊಂಡಿದೆ. ಉಡುಪಿಯಲ್ಲಿ ಎಚ್‌1 ಎನ್‌1 – 197 ಪ್ರಕರಣ ಅದರಲ್ಲಿ 4 ಸಾವು, ಡೆಂಗ್ಯೂ 189- ಪ್ರಕರಣ (ನಗರ- 139, ಗ್ರಾಮೀಣ- 50) ಕಾಣಿಸಿಕೊಂಡಿದೆ. ಕುಂದಾಪುರದಲ್ಲಿ ಎಚ್‌1 ಎನ್‌1 – 27 ಪ್ರಕರಣ ಅದರಲ್ಲಿ 2 ಸಾವು, ಡೆಂಗ್ಯೂ – 20 ಪ್ರಕರಣ,  ಹಾಗೂ ಕಾರ್ಕಳದಲ್ಲಿ ಎಚ್‌1 ಎನ್‌ 1 – 27 ಪ್ರಕರಣ, ಡೆಂಗ್ಯೂ- 9 ಪ್ರಕರಣ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದಲ್ಲಿ ಯಾವುದೇ ಸಾವು ಪ್ರಕರಣ ದಾಖಲಾಗಿಲ್ಲ. ಇನ್ನುಳಿದಂತೆ ಮಲೇರಿಯಾ ಕೂಡ ನಿಯಂತ್ರಣದಲ್ಲಿದ್ದು, ಯಾವುದೇ ಚಿಕೂನ್‌ ಗುನ್ಯಾ ಪ್ರಕರಣ ಸಹ ಕಾಣಿಸಿಕೊಂಡಿಲ್ಲ. 

ಇತ್ತೀಚಿಗೆ ಉಡುಪಿಯ ಉಪ್ಪೂರು ಕೆ.ಜಿ. ರೋಡ್‌ನ‌ ಮಹಿಳೆಯೋರ್ವರು ಮೃತಪಟ್ಟಿದ್ದು, ಬಹುತೇಕ ಎಚ್‌1 ಎನ್‌1ನಿಂದಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ವಲಸೆ ಕಾರ್ಮಿಕರು, ಜನನಿಬಿಡ ಪ್ರದೇಶವಾಗಿರುವುದರಿಂದ ಉಡುಪಿ ತಾಲೂಕಿನ ನಗರಭಾಗದಲ್ಲಿಯೇ ಹೆಚ್ಚಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದೆ. ಮಳೆಗಾಲವಾಗಿದ್ದು, ಈಗ ಸಾಂಕ್ರಾಮಿಕ ರೋಗಗಳ ಕುರಿತು ಹೆಚ್ಚಿನ ಜಾಗರೂಕತೆ ವಹಿಸಬೇಕಾದ ಅಗತ್ಯವಿದೆ. ಮಲೇರಿಯಾ, ಡೆಂಗ್ಯೂ, ಎಚ್‌ 1ಎನ್‌ 1, ಚಿಕೂನ್‌ ಗುನ್ಯಾದಂತಹ ಸಾಂಕ್ರಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳ ಜತೆಗೆ ಜನರೂ ಜಾಗೃತಿ ವಹಿಸುವುದು ಅತ್ಯಗತ್ಯ.

‘ರೋಗ ಪೀಡಿತರು ಎಚ್ಚರ ವಹಿಸಿ’
ಎಚ್‌1 ಎನ್‌ 1 ಉಸಿರಾಟದ ಮೂಲಕ ಹರಡುವ ರೋಗವಾಗಿರುವುದರಿಂದ ಈ ರೋಗ ಪೀಡಿತರು ಸೂಕ್ತ ಚಿಕಿತ್ಸೆ ಪಡೆಯಿರಿ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಲ್ಲ ರೀತಿಯ ಚಿಕಿತ್ಸೆ ಲಭ್ಯವಿದೆ. ಶ್ವಾಸಕೋಶ ಸಂಬಂಧಿ ಕಾಯಿಲೆಯಾಗಿರುವುದರಿಂದ ಶೀಘ್ರ ಗುಣಪಡಿಸುವುದು ಕಷ್ಟ. ಕೆಮ್ಮುವಾಗ ಕೈ ಅಡ್ಡ ಇಟ್ಟು ಅಥವಾ ಮಾಸ್ಕ್ ಧರಿಸಿ. ಕಚೇರಿ ಕೆಲಸಕ್ಕೆ ಹೋಗುವವರಿದ್ದರೆ, ಬೇರೆಯವರಿಗೂ ಹರಡುವ ಸಾಧ್ಯತೆಯಿಂದ ರಜೆ ಹಾಕುವುದು ಒಳ್ಳೆಯದು. ನಗರ ಪ್ರದೇಶದಲ್ಲಿ ಜನನಿಬಿಡ ಪ್ರದೇಶವಾಗಿರುವುದರಿಂದ ಹೆಚ್ಚಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ವಾಸುದೇವ ಹೇಳಿದರು. 

‘ನಿಯಂತ್ರಣಕ್ಕೆ ತುರ್ತು ಕ್ರಮ’
ಮಳೆಗಾಲದಲ್ಲಿ ಸೊಳ್ಳೆಗಳಿಂದ ಸಾಂಕ್ರಾಮಿಕ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು, ಜ್ವರ, ಶೀತ, ಕೆಮ್ಮು ಕಾಣಿಸಿಕೊಂಡರೆ ಮನೆಯಲ್ಲಿಯೇ ಔಷಧಿ ಮಾಡುವು ದಕ್ಕಿಂತ ತತ್‌ಕ್ಷಣ ವೈದ್ಯರಿಂದ ಚಿಕಿತ್ಸೆ ಪಡೆಯಿರಿ. ಮಲೇರಿಯಾ, ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಸಕಾರಾತ್ಮಕ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುತ್ತಿದ್ದು, ಸದ್ಯ ನಿಯಂತ್ರಣದಲ್ಲಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಪ್ರೇಮಾನಂದ ತಿಳಿಸಿದ್ದಾರೆ.

ಜನರು ವಹಿಸಬೇಕಾದ ಎಚ್ಚರ
ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಸಾಂಕ್ರಾಮಿಕ ರೋಗಗಳಿಗೆ ಔಷಧಿ ಲಭ್ಯವಿದ್ದು, ಚಿಕಿತ್ಸೆ ಪಡೆಯಿರಿ. ಯಾವುದೇ ಜ್ವರವಿರಲಿ, ಗಂಭೀರವಾಗಿದ್ದರೆ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ. 

ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಿ, ಚರಂಡಿಗಳಲ್ಲಿ ಕಸ, ಕಡ್ಡಿಗಳನ್ನು ಎಸೆಯಬೇಡಿ. ನೀರು ಹರಿದು ಹೋಗುವಂತೆ ನೋಡಿಕೊಳ್ಳಿ.

ಮನೆಯ ನೀರು ಸಂಗ್ರಹಣಾ ಸಾಮಗ್ರಿಗಳನ್ನು ಮುಚ್ಚಿಡಿ, ದೊಡ್ಡ ತೊಟ್ಟಿ, ಟ್ಯಾಂಕ್‌ಗಳನ್ನು ವಾರಕ್ಕೊಮ್ಮೆ ತೊಳೆದರೆ ಉತ್ತಮ.

ಸಂಜೆ ವೇಳೆ ಮನೆಯ ಕಿಟಕಿ ಬಾಗಿಲುಗಳನ್ನು ಹಾಕಿ, ಕೀಟ ತಡೆಗಟ್ಟುವ ಜಾಲರಿ ಅಳವಡಿಸಿದರೆ ಒಳ್ಳೆಯದು. 

ಮಳೆಗಾಲದಲ್ಲಿ ಆದಷ್ಟು ಬಿಸಿನೀರನ್ನೇ ಹೆಚ್ಚು ಕುಡಿಯಿರಿ. 

ಬಾವಿ ನೀರು, ಕಾರಂಜಿಗಳು, ಕಟ್ಟಡ ನಿರ್ಮಾಣಕ್ಕಾಗಿ ಸಂಗ್ರಹಿಸಿದ ನೀರು, ಕೆರೆ, ಹೊಂಡ, ತೋಟದ ಬಾವಿ, ಗದ್ದೆಗಳಲ್ಲಿ ಸೊಳ್ಳೆ ಮರಿಗಳನ್ನು ತಿನ್ನುವ ಗ್ಯಾಂಬುಸಿಯ ಹಾಗೂ ಗಪ್ಪಿ ಮೀನುಗಳನ್ನು ಬಿಟ್ಟರೆ ಸೊಳ್ಳೆ ಉತ್ತತ್ತಿಯನ್ನು ನಿಯಂತ್ರಿಸಬಹುದು. 

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

9-

Delhi ಗಣರಾಜ್ಯೋತ್ಸವ; ಹೆಬ್ರಿಯ ಮಹಿಳೆಗೆ ವಿಶೇಷ ಅವಕಾಶ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

7

Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.