ಹಾಲಾಡಿಗೆ ಬೇಕು ಸರ್ಕಲ್‌: ಒಕ್ಕೊರಲ ಆಗ್ರಹ


Team Udayavani, Dec 14, 2018, 1:15 AM IST

haladi-circle-13-12.jpg

ಹಾಲಾಡಿ: ಇಲ್ಲಿನ ಹಾಲಾಡಿ ಪೇಟೆಗೆ ಅಗತ್ಯವಾಗಿ ಸರ್ಕಲ್‌ ಬೇಕೇ ಬೇಕು ಎನ್ನುವ ಒಕ್ಕೊರಲ ಅಭಿಪ್ರಾಯ ಗುರುವಾರ ನಡೆದ ಹಾಲಾಡಿಯ ವಿಶೇಷ ಗ್ರಾಮಸಭೆಯಲ್ಲಿ ವ್ಯಕ್ತವಾಯಿತು.  ಹಾಲಾಡಿ ಸರ್ಕಲ್‌ ನಿರ್ಮಾಣ ಬಗ್ಗೆ ಚರ್ಚೆ ಸಲುವಾಗಿ ನಡೆದ ವಿಶೇಷ ಸಭೆಯಲ್ಲಿ ಸರ್ಕಲ್‌ ಬೇಡಿಕೆಗೆ ಗ್ರಾಮಸ್ಥರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಈ ಸಂಬಂಧ ನಿರ್ಣಯ ಮಾಡಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಕಳುಹಿಸುವ ತೀರ್ಮಾನ ಕೈಗೊಳ್ಳಲಾಯಿತು. 

ಸರ್ಕಲ್‌ ನಿರ್ಮಿಸದಿದ್ದರೆ ತಡೆ
ಹಾಲಾಡಿಯಲ್ಲಿ ಮೊದಲೊಮ್ಮೆ ಸರ್ಕಲ್‌ ನಿರ್ಮಿಸಲಾಗುವುದು ಎಂದು ತಿಳಿಸಿದ್ದೀರಿ. ಆದರೆ ಈಗ ಸರ್ಕಲ್‌ ಇಲ್ಲ ಅನ್ನುತ್ತೀರಿ. ಇಲ್ಲಿಗೆ ಅಗತ್ಯವಾಗಿ ಸರ್ಕಲ್‌ ಬೇಕು. ಇದು ನಮ್ಮ ಪ್ರಮುಖ ಬೇಡಿಕೆಯಾಗಿದೆ. ಒಂದು ವೇಳೆ ಸರ್ಕಲ್‌ ನಿರ್ಮಾಣಕ್ಕೆ ಮುಂದಾಗದಿದ್ದರೆ, ಈಗ ನಡೆಯುತ್ತಿರುವ ರಸ್ತೆ ಕಾಮಗಾರಿಗೂ ಗ್ರಾಮಸ್ಥರೆಲ್ಲ ಒಟ್ಟಾಗಿ ತಡೆಯೊಡ್ಡಲಾಗುವುದು ಎನ್ನುವ ಅಭಿಪ್ರಾಯ ವ್ಯಕ್ತವಾಯಿತು. 

ಪಂಚಾಯತ್‌ ಬದ್ಧ
ಗ್ರಾಮಸ್ಥರ ಬೇಡಿಕೆಗೆ ಪಂಚಾಯತ್‌ ಕೂಡ ಬೆಂಬಲವಾಗಿ ನಿಲ್ಲುತ್ತಿದ್ದು, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಸದುದ್ದೇಶದಿಂದ ಅನುದಾನ ತಂದಿದ್ದಾರೆ. ಈ ಸಂಬಂಧ ಗ್ರಾ.ಪಂ. ನಿರ್ಣಯ ಮಾಡಿ, ಸಭೆಯಲ್ಲಿ ಚರ್ಚೆಯಾದ ವಿಚಾರಗಳೆಲ್ಲದರ ವರದಿಯನ್ನು ಲೋಕೋಪಯೋಗಿ ಇಲಾಖೆಗೆ ಕಳುಹಿಸಲಾಗುವುದು. ಇಲ್ಲಿ ರಸ್ತೆ ಜಾಗದಲ್ಲಿ 2-3 ಅಂಗಡಿ ನಿರ್ಮಿಸಿದವರು ಒಂದು ಕೋಣೆ ಮಾತ್ರವಿಟ್ಟುಕೊಂಡು ಬಾಕಿದ್ದನ್ನು ತೆರವು ಮಾಡಿ, ಈಗ ನಿರಾಶ್ರಿತರಾದವರಿಗೂ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮುಂದಿನ ದಿನಗಳಲ್ಲಿ ಪ್ರಯತ್ನಿಸಲಾಗುವುದು ಎಂದು ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷ ಸರ್ವೋತ್ತಮ ಹೆಗ್ಡೆ ತಿಳಿಸಿದ್ದಾರೆ.

ಪರಿಷ್ಕರಣೆಗೆ ವರದಿ ಸಲ್ಲಿಕೆ : ಭರವಸೆ
ಬ್ಲಾಕ್‌ ಸ್ಪಾಟ್‌ನಲ್ಲಿ ರಸ್ತೆ ಅಭಿವೃದ್ಧಿಪಡಿಸಲು ಬೆಂಗಳೂರಿನಲ್ಲಿ ‘ಪ್ರಾಕ್ಸಂ’ ಕಚೇರಿಯಿದ್ದು, ಅವರೇ ಇಲ್ಲಿನ ಯೋಜನೆಯ ಕರಡು ಸಿದ್ಧಪಡಿಸಿಕೊಟ್ಟಿದ್ದಾರೆ. ಈಗ ಸರ್ಕಲ್‌ ಬೇಡಿಕೆ ಕುರಿತ ಬೇಡಿಕೆಯ ನಿರ್ಣಯದ ವರದಿಯನ್ನು ಮತ್ತೆ ಪ್ರಾಕ್ಸಂಗೆ ಸಲ್ಲಿಸಲಾಗುವುದು. ಆ ಬಳಿಕ ಅವರೇ ಸರ್ವೇಗೆ ಬರುವಾಗ ಊರವರು ತಮ್ಮ ಅಭಿಪ್ರಾಯವನ್ನು ತಿಳಿಸಿ, ಹೆಚ್ಚುವರಿ ಅನುದಾನವೂ ಅಗತ್ಯವಿದೆ. ಸರ್ಕಲ್‌ ಬೇಡಿಕೆಗೆ ಎಲ್ಲ ರೀತಿಯ ಪ್ರಯತ್ನ ಗಳನ್ನು ಮಾಡಲಾಗುವುದು ಎಂದು ಉಡುಪಿಯ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್‌ ಚಂದ್ರಶೇಖರ್‌ ಅವರು ಭರವಸೆ ನೀಡಿದರು.

ರೇಷ್ಮೆ ನಿರೀಕ್ಷಕ ರಾಜೇಂದ್ರ ಮಾರ್ಗದರ್ಶಿ ಅಧಿಕಾರಿಯಾಗಿ ಪಾಲ್ಗೊಂಡಿದ್ದರು. ಜಿ.ಪಂ. ಸದಸ್ಯೆ ಸುಪ್ರೀತಾ ಉದಯ ಕುಲಾಲ್‌, ತಾ.ಪಂ. ಸದಸ್ಯೆ ಸವಿತಾ ಎಸ್‌. ಮೊಗವೀರ, ಸಹಾಯಕ ಇಂಜಿನಿಯರ್‌ ಹರ್ಷವರ್ಧನ್‌, ಶಂಕರನಾರಾಯಣ ಠಾಣಾ ಸಹಾಯಕ ಉಪ ನಿರೀಕ್ಷಕ ಚಂದ್ರಶೇಖರ್‌, ಉಪ ವಲಯ ಅರಣ್ಯಾಧಿಕಾರಿ ರಾಕೇಶ್‌, ಗ್ರಾ.ಪಂ. ಸದಸ್ಯರು, ನೂರಾರು ಮಂದಿ ಗ್ರಾಮಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು. ಪಿಡಿಒ ವಸಂತ್‌ ಸ್ವಾಗತಿಸಿದರು.

ಪತ್ರಿಕೆ ವರದಿ ಪ್ರತಿಧ್ವನಿ
ಮಾ. 8 ರಂದು ಮೊದಲ ಬಾರಿಗೆ ಹಾಲಾಡಿಯಲ್ಲಿ ಸರ್ಕಲ್‌ ಆಗುತ್ತದೆ ಎನ್ನುವ ಕುರಿತು ವರದಿ ಪ್ರಕಟಿಸಿದ್ದು, ಆ ಬಳಿಕವೂ ನಿರಂತರವಾಗಿ ಈ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನವನ್ನು ‘ಉದಯವಾಣಿ’ ಮಾಡಿದ್ದಲ್ಲದೆ, ಸರ್ಕಲ್‌ ಪ್ರಸ್ತಾವ ಕೈಬಿಟ್ಟ ಬಗ್ಗೆಯೂ ಪತ್ರಿಕೆಯಲ್ಲಿ ಪ್ರಕಟವಾದ ವರದಿಯಿಂದಲೇ ಗ್ರಾಮಸ್ಥರೆಲ್ಲ ಒಟ್ಟಾಗಿ ಎಚ್ಚೆತ್ತುಕೊಂಡಿರುವುದು ಎಂದು ಗ್ರಾಮಸ್ಥರಾದ ಸೀತರಾಮ ಗಾಣಿಗ, ರಾಜೀವ ಶೆಟ್ಟಿ, ಸುರೇಶ್‌ ಶೆಟ್ಟಿ ಮತ್ತಿತರರು ಸಭೆಗೆ ತಿಳಿಸಿದರು. 

ಬದಲಿ ವ್ಯವಸ್ಥೆ ಮಾಡಿಕೊಡಲಿ
ನಾವು ಕಳೆದ 45 ವರ್ಷಗಳಿಂದ ಹಾಲಾಡಿ ಪೇಟೆಯಲ್ಲಿ ಚಿಕ್ಕ ಅಂಗಡಿಯಿಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದು, ಇದೇ ನನಗೆ ಜೀವನಾಧಾರವಾಗಿದೆ. ಈಗ ಅಂಗಡಿ ತೆರವು ಮಾಡಿದರೆ ಪರ್ಯಾಯ ವ್ಯವಸ್ಥೆಯಿಲ್ಲ. ನಮ್ಮ ಹೊಟ್ಟೆಪಾಡಿಗೂ ಕಷ್ಟವಾಗುತ್ತದೆ. ರಸ್ತೆಗಾಗಿ ತೆರವು ಮಾಡಿದರೆ ನನಗೆ ಬದಲಿ ವ್ಯವಸ್ಥೆ ಮಾಡಿಕೊಡಲಿ ಎಂದು ವ್ಯಾಪಾರಸ್ಥರಾದ ಅಬೂಬಕ್ಕರ್‌ ಹಾಲಾಡಿ ಅವರು ಮನವಿ ಮಾಡಿದ್ದಾರೆ.

ಚರ್ಚೆಯಾದ ವಿಷಯಗಳು
– ಸರ್ಕಲ್‌ ಕುರಿತು ಅನೇಕ ಮಂದಿ ಗ್ರಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದರು. 
– ವಿದ್ಯುತ್‌ ಲೈನ್‌ ಭಾಗದಲ್ಲಿ ಅನಧಿಕೃತ ಕಟ್ಟಡದ ಪ್ರಸ್ತಾವವಾಯಿತು. ಈ ಸಂಬಂಧ ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆ ಹರಿಸಲಾಗುವುದು ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದರು. 
– ಸೋಮೇಶ್ವರ ರಾಜ್ಯ ಹೆದ್ದಾರಿಯ ರಸ್ತೆ ಮಾರ್ಜಿನ್‌ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ನಿರ್ಮಿಸಿರುವುದರ ಕುರಿತು, ಅದನ್ನು ತೆರವು ಮಾಡಿ, ರಸ್ತೆ ಅಗಲೀಕರಣಕ್ಕೆ ಅನುಕೂಲ ಮಾಡಿ ಕೊಡುವಂತೆ ಕಟ್ಟಡದ ಮಾಲಕರಲ್ಲಿ ಮನವಿ ಮಾಡುವ ಕುರಿತಂತೆ ಅಭಿಪ್ರಾಯ ವ್ಯಕ್ತವಾಯಿತು.

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.