ಬಸ್ರೂರು: ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದ ಹಾಲಾಡಿ
Team Udayavani, Apr 14, 2018, 9:30 AM IST
ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಶುಕ್ರವಾರ ಬಸ್ರೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ಬಳಿಕ ಪ್ರಚಾರ ಆರಂಭಿಸಿದರು. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅನಂತರ ಹೊಂಬಾಡಿ – ಮಂಡಾಡಿ, ಹಾರ್ದಳ್ಳಿ- ಮಂಡಳ್ಳಿ ಹಾಗೂ ಮೊಳಹಳ್ಳಿ ಗ್ರಾಮಗಳಲ್ಲಿ ಪಕ್ಷದ ಮುಖಂಡರ ಮನೆಗಳಲ್ಲಿ ಕಾರ್ಯಕರ್ತರ ಸಭೆಗಳನ್ನು ನಡೆಸಿ, ಚುನಾವಣೆಯ ಸಿದ್ಧತೆ ಕುರಿತು ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಚರ್ಚಿಸಿದರು.
ಆಯೋಗದ ಹದ್ದಿನಕಣ್ಣು
ಹಾಲಾಡಿಯವರು ದೇವಸ್ಥಾನಕ್ಕೆ ಭೇಟಿ ನೀಡುವ ಮುನ್ನವೇ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್‌ನವರು ಆಗಮಿಸಿದ್ದು, ಅವರು ದೇವಸ್ಥಾನಕ್ಕೆ ಬರುವುದರಿಂದ ಆರಂಭಿಸಿ, ಪೂಜೆ ಸಲ್ಲಿಸಿ, ತೆರಳುವವರೆಗೆ ಹದ್ದಿನಕಣ್ಣು ಇಟ್ಟಿದ್ದರು. ಎಲ್ಲ ಬೆಳವಣಿಗೆಗಳನ್ನು ಅಧಿಕಾರಿಗಳು ವೀಡಿಯೋ ಚಿತ್ರೀಕರಣ ಕೂಡ ಮಾಡಿಸಿದರು. ಪಕ್ಷದ ಪ್ರಮುಖರ ಮನೆಗಳಲ್ಲಿ ನಡೆದ ಕಾರ್ಯಕರ್ತರ ಪ್ರಚಾರ ಸಭೆಗಳಿಗೂ ಅಧಿಕಾರಿಗಳು ಭೇಟಿಯಿತ್ತು, ಸೂಕ್ಷ್ಮವಾಗಿ ಗಮನ ಹರಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಕಿರಣ್ ಕೊಡ್ಗಿ, ಮಂಡಲದ ಅಧ್ಯಕ್ಷ ಸುರೇಶ್ ಶೆಟ್ಟಿ, ಪ್ರ. ಕಾರ್ಯದರ್ಶಿ ಶಂಕರ ಅಂಕದಕಟ್ಟೆ, ನಾಯಕರಾದ ಭಾಸ್ಕರ ಬಿಲ್ಲವ, ಸದಾನಂದ ಬಳ್ಕೂರು, ರಾಮ್ ಕಿಶನ್ ಹೆಗ್ಡೆ, ಅನೇಕ ಮಂದಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಭೆಗೆ ಅನುಮತಿ ನಿರಾಕರಣೆ
ಬಿಜೆಪಿ ಪಕ್ಷದ ಪೂರ್ವ ನಿಗದಿಯಂತೆ ಮಾಜಿ ಶಾಸಕ, ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಅಪ್ಪಣ್ಣ ಹೆಗ್ಡೆ ಅವರ ಮನೆಯಲ್ಲಿ ಪ್ರಚಾರಕ್ಕೆ ಚಾಲನೆ ನೀಡುವ ಸಭೆ ನಿಗದಿಯಾಗಿತ್ತು. ಆದರೆ ಬೆಳಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಇಲ್ಲಿ ನಡೆಯುವ ಸಭೆಯಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ನೀಡುವಂತೆ ಬಿಜೆಪಿ ವತಿಯಿಂದ ಚುನಾವಣಾಧಿಕಾರಿ, ಎಸಿ ಟಿ. ಭೂಬಾಲನ್ ಅವರಿಗೆ ಅರ್ಜಿ ಸಲ್ಲಿಸಿದ್ದರು. ಅಪ್ಪಣ್ಣ ಹೆಗ್ಡೆಯವರು ಯಾವುದೇ ಪಕ್ಷದಲ್ಲಿ ಇಲ್ಲ ಅಂದರೆ ಅವರ ಮನೆಯಲ್ಲಿ ಯಾಕೆ ಕಾರ್ಯಕ್ರಮ ಮಾಡುತ್ತೀರಾ ಎಂದು ಆಕ್ಷೇಪ ವ್ಯಕ್ತಪಡಿಸಿ, ಅಲ್ಲಿ ನಡೆಯುವ ಸಭೆಗೆ ಚುನಾವಣಾಧಿಕಾರಿ ಅನುಮತಿ ನಿರಾಕರಿಸಿದ್ದರು. ಇದರಿಂದ ಹಾಲಾಡಿಯವರು ಕೇವಲ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ತೆರಳಿದರು.
ಭಿನ್ನಮತ ಶಮನಕ್ಕೆ ಕೋಟ ಪ್ರಯತ್ನ
ಹಾಲಾಡಿಯವರಿಗೆ ಟಿಕೆಟ್ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ, ಕಳೆದ ಬಾರಿಯ ಅಭ್ಯರ್ಥಿ ಕಿಶೋರ್ ಕುಮಾರ್ ಅವರ ಮನೆಗೆ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಶುಕ್ರವಾರ ಭೇಟಿ ನೀಡಿ, ಭಿನ್ನಮತ ಮರೆತು ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ನನ್ನ ನಿಲುವುಗಳನ್ನು ಈಗಾಗಲೇ ರಾಜೀನಾಮೆ ನೀಡುವ ವೇಳೆ ಸ್ಪಷ್ಟಪಡಿಸಿದ್ದೇನೆ. ಮುಂದಿನ ತೀರ್ಮಾನದ ಕುರಿತು ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಕೋಟ ಅವರಿಗೆ ತಿಳಿಸಿರುವುದಾಗಿ ಕಿಶೋರ್ ಕುಮಾರ್ ಅವರು ‘ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.