ಗುರು ಕೊಡ್ಗಿ ಆಶೀರ್ವಾದ ಪಡೆದ ಶಿಷ್ಯ ಹಾಲಾಡಿ
Team Udayavani, Apr 13, 2018, 8:40 AM IST
ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ತಮ್ಮ ರಾಜಕೀಯ ಗುರು ಎ.ಜಿ. ಕೊಡ್ಗಿ ಅವರನ್ನು ಗುರುವಾರ ಅವರ ಮನೆಗೆ ತೆರಳಿ ಭೇಟಿಯಾದರು, ಜತೆಯಾಗಿ ಬೆಳಗಿನ ಉಪಾಹಾರ ಸೇವಿಸಿದರು. ಬಿಜೆಪಿಯು ಕುಂದಾಪುರದಿಂದ ಸ್ಪರ್ಧಿಸಲು ಟಿಕೆಟು ನೀಡಿದೆ ಎಂದು ಹಾಲಾಡಿಯವರು ಎ.ಜಿ. ಕೊಡ್ಗಿ ಅವರಲ್ಲಿ ಹೇಳಿದ್ದು, ‘ಸಂತೋಷ, ಒಳ್ಳೆಯದಾಗಲಿ’ ಎಂದು ಕೊಡ್ಗಿಯವರು ಹಾರೈಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭ ಎ.ಜಿ. ಕೊಡ್ಗಿ ಅವರ ಪುತ್ರ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕಿರಣ್ ಕೊಡ್ಗಿ ಉಪಸ್ಥಿತರಿದ್ದರು.
ಹಾಲಾಡಿಯವರಿಗೆ ಟಿಕೇಟು ನೀಡುವುದಕ್ಕೆ ತನ್ನ ವಿರೋಧವಿದೆ ಎನ್ನುವುದಾಗಿ ಕೆಲ ದಿನಗಳ ಹಿಂದೆ ಕೊಡ್ಗಿಯವರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಸುದ್ದಿಯಾಗಿತ್ತು. ಅದಲ್ಲದೆ ತನಗೆ ಸಚಿವ ಸ್ಥಾನ ತಪ್ಪಲು ಕೊಡ್ಗಿಯವರು ಕಾರಣ ಎಂಬ ಹಾಲಾಡಿಯವರ ಮುನಿಸು ಈಗಲೂ ಮುಂದುವರಿದಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು. ಜಾಲತಾಣದಲ್ಲಿ ಈ ಕುರಿತು ಸಾಕಷ್ಟು ಚರ್ಚೆಯಾಗಿತ್ತು. ಈಗ ಸ್ವತಃ ಹಾಲಾಡಿಯವರೇ ಕೊಡ್ಗಿಯವರನ್ನು ಭೇಟಿ ಮಾಡಿದ್ದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಹಾಲಾಡಿ ಅವರು, ನಾನು ಈಗಲೂ ಕೊಡ್ಗಿಯವರನ್ನು ಗುರು ಎಂದೇ ಗೌರವಿಸುತ್ತೇನೆ. ನನಗೆ ಅವರ ಆಶೀರ್ವಾದ ಇದ್ದೇ ಇದೆ. ಚುನಾವಣೆಗೆ ಸ್ಪರ್ಧಿಸುವುದು ಸಂತೋಷ ಎನ್ನುವುದಾಗಿ ತಿಳಿಸಿದ್ದಾರೆ ಎಂದು ‘ಉದಯವಾಣಿ’ಗೆ ತಿಳಿಸಿದ್ದಾರೆ.
ಪಕ್ಷಕ್ಕಾಗಿ ದುಡಿಯುವುದು ಧರ್ಮ: ಹಾಲಾಡಿ
ಉಡುಪಿ: ‘ಕಳೆದ ಬಾರಿ ಪಕ್ಷೇತರನಾಗಿ ಸ್ಪರ್ಧೆ ಆಕಸ್ಮಿಕ ಘಟನೆ. ಆದರೆ ಈ ಬಾರಿ ಬಿಜೆಪಿ ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಪಕ್ಷ ಆಯ್ಕೆ ಮಾಡಿದ ಅನಂತರ ಸಾಮಾನ್ಯ ಕಾರ್ಯಕರ್ತ ಕೂಡ ಅಭ್ಯರ್ಥಿ ಪರ ಕೆಲಸ ಮಾಡುವುದು ಧರ್ಮ’ ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ. ಗುರುವಾರ ಉಡುಪಿಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಕುಂದಾಪುರದಲ್ಲಿ ಬಿಜೆಪಿಯ ಕೆಲವು ಪದಾಧಿಕಾರಿಗಳ ಅಸಮಾಧಾನವನ್ನು ರಾಜ್ಯದ ಮುಖಂಡರು ಶಮನಿಸುವ ವಿಶ್ವಾಸವಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ಎಲ್ಲರ ಸಹಕಾರವೂ ಬೇಕು’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.