ಬಿಜೆಪಿ ಸೇರ್ಪಡೆಯಾಗಲು ಶಾಸಕ ಸ್ಥಾನಕ್ಕೆ ಹಾಲಾಡಿ ರಾಜೀನಾಮೆ
Team Udayavani, Jan 30, 2018, 1:57 PM IST
ಕುಂದಾಪುರ : ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಜೆಪಿ ಸೇರ್ಪಡೆಯಾಗಲು ಇದ್ದ ಪಕ್ಷಾಂತರ ಕಾಯಿದೆ ತೊಡಕನ್ನು ನಿವಾರಿಸಲು ಶಾಸಕ ಸ್ಥಾನಕ್ಕೆ ಅವಧಿ ಮುಗಿಯುವ ಮುನ್ನವೇ ರಾಜೀನಾಮೆ ಸಲ್ಲಿಸುತ್ತಿದ್ದಾರೆ.
ಶ್ರೀನಿವಾಸ್ ಶೆಟ್ಟಿ ಅವರು ಮಂಗಳವಾರ ಸ್ಪೀಕರ್ ಕೋಳಿವಾಡ ಅವರ ಭೇಟಿಗಾಗಿ ರಾಣೆಬೆನ್ನೂರಿಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ.
ಶ್ರೀನಿವಾಸ್ ಶೆಟ್ಟಿ ಅವರು ಫೆಬ್ರವರಿ 4 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಮರು ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.
ಸಜ್ಜನ ರಾಜಕಾರಣಿ,ಪ್ರಭಾವಿ ಸಮುದಾಯದ ನಿಷ್ಕಳಂಕ ಮುಖಂಡರೆನಿಸಿಕೊಂಡು ಅಪಾರ ಅಭಿಮಾನಿಗಳನ್ನು ಹೊಂದಿರುವ ಹಾಲಾಡಿ ಅವರನ್ನು ಬಿಜೆಪಿ ಕರಾವಳಿ ಭಾಗದಲ್ಲಿ ಭರ್ಜರಿ ಪ್ರಚಾರದಲ್ಲಿ ಬಳಸಿಕೊಳ್ಳುವ ಸಾಧ್ಯತೆಗಳಿವೆ.
ಈಗಾಗಲೇ ಅವರು ಕುಂದಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.