ಬಿಜೆಪಿಯತ್ತ ಹಾಲಾಡಿ ಶ್ರೀನಿವಾಸ ಶೆಟ್ಟಿ  ನಡೆ


Team Udayavani, Jan 31, 2018, 11:26 AM IST

31-24.jpg

ಕುಂದಾಪುರ: ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ತನ್ನ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನ ಸಭಾ ಸ್ಪೀಕರ್‌ ಕೆ.ಬಿ. ಕೋಳಿ  ವಾಡ ಅವರನ್ನು ಹಾವೇರಿಯ ರಾಣೇ ಬೆನ್ನೂರಿ ನಲ್ಲಿರುವ ಪ್ರವಾಸಿ ಮಂದಿರ ದಲ್ಲಿ ಭೇಟಿ ಯಾಗಿ ಸಂಜೆ 6 ಗಂಟೆಗೆ ಗೋಧೂಳಿ ಲಗ್ನದಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು, ಸ್ಪೀಕರ್‌ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಶ್ರೀನಿವಾಸ ಶೆಟ್ಟಿ ಅವರು ಬಿಜೆಪಿ ಸೇರ್ಪಡೆಯಾಗುತ್ತಾರೆಂಬ ಸುದ್ದಿಯಿದ್ದು, ಅದಕ್ಕೀಗ ಈ ರಾಜೀನಾಮೆ ಮತ್ತಷ್ಟು ಪುಷ್ಟಿ ನೀಡಿದೆ. ಫೆ. 2ರಿಂದ ಫೆ. 4ರೊಳಗೆ ಹಾಲಾಡಿಯವರು ಬಿಜೆಪಿ ಸೇರ್ಪಡೆ ಯಾಗಲಿದ್ದಾರೆ ಎನ್ನಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಫೆ. 4ರಂದು ಬೆಂಗಳೂರಿಗೆ ಬರುವ ಸಾಧ್ಯತೆಗಳಿದ್ದು, ಅಂದೇ ಅಲ್ಲಿ ಮರಳಿ ಬಿಜೆಪಿ ಪಕ್ಷಕ್ಕೆ ಸೇರುವ ಸಂಭವ ಕೂಡ ಇದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಜ. 25ರಂದು ಮೈಸೂರಿ ನಲ್ಲಿ ಸಮಾಪನಗೊಂಡ ಪರಿವರ್ತನಾ ರ್ಯಾಲಿ ಯಲ್ಲಿ ಅಮಿತ್‌ ಶಾ ಸಮ್ಮುಖದಲ್ಲಿ ಸೇರ್ಪಡೆ ಗೊಳ್ಳುತ್ತಾರೆನ್ನುವ ಸುದ್ದಿಯಿತ್ತು. 2012ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಶ್ರೀನಿವಾಸ ಶೆಟ್ಟಿ ಅವರಿಗೆ ಸಚಿವ ಸ್ಥಾನ ಕೊಡಿಸುವ ಆಶ್ವಾಸನೆಯೊಂದಿಗೆ ಬೆಂಗಳೂರಿಗೆ ಕರೆಯಿಸಿ, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಅವರ ಬದಲಿಗೆ ಶ್ರೀನಿವಾಸ ಪೂಜಾರಿ ಅವರಿಗೆ ಸಚಿವ ಸ್ಥಾನ ನೀಡ ಲಾಗಿತ್ತು. ಇದರಿಂದ ಅವ ಮಾನಿತ ರಾದ ಶ್ರೀನಿವಾಸ ಶೆಟ್ಟಿ ಅವರು ಬಿಜೆಪಿ ತೊರೆದು, ಕಳೆದ ವಿಧಾನಸಭಾ ಚುನಾ  ವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, 40,000ಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದು ಬಂದಿದ್ದರು.

ಪರಿವರ್ತನಾ ಯಾತ್ರೆ: ಶಕ್ತಿ ಪ್ರದರ್ಶನ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿ ಯೂರಪ್ಪ ನೇತೃತ್ವದಲ್ಲಿ ನ. 13ರಂದು ಕುಂದಾ ಪುರದಲ್ಲಿ ನಡೆದ ಪರಿವರ್ತನಾ ರ್ಯಾಲಿಯಲ್ಲಿ ಹಾಲಾಡಿ ಬೆಂಬಲಿಗರು ಬೃಹತ್‌ ಸಂಖ್ಯೆಯಲ್ಲಿ ಸೇರುವ ಮೂಲಕ ಕೇಂದ್ರ ಸಚಿವರು, ರಾಜ್ಯ ನಾಯಕರ ಮುಂದೆ ಶಕ್ತಿ ಪ್ರದರ್ಶಿಸಿದ್ದರು. ಈ ರ್ಯಾಲಿಯಲ್ಲಿ ಮೂಲ ಬಿಜೆಪಿಗರು ಹಾಗೂ ಹಾಲಾಡಿ ಬೆಂಬಲಿಗರ ಮಧ್ಯೆ ಗದ್ದಲ ಏರ್ಪಟ್ಟಿದ್ದು, ಬಳಿಕ ಬಿಎಸ್‌ವೈ ಅವರೇ ಸಭೆಯಲ್ಲಿ ಬಹಿರಂಗವಾಗಿ ಶ್ರೀನಿವಾಸ ಶೆಟ್ಟಿಯವರೇ ಮುಂದಿನ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ್ದರು.

ಶ್ರೀನಿವಾಸ ಶೆಟ್ಟಿ ಅವರ ಬಿಜೆಪಿ ಸೇರ್ಪಡೆಗೆ ಪಕ್ಷದಲ್ಲೇ ವಿರೋಧವಿದ್ದು, ಕೆಲವರು ಬಿಎಸ್‌ವೈ ಎದುರಲ್ಲೇ ಅಸಮಾಧಾನ ವ್ಯಕ್ತಪಡಿಸಿದ್ದರು. ಅದಲ್ಲದೆ ಸಂಘ ಪರಿವಾರದವರು ಸಹ ಹಾಲಾಡಿ ಬಿಜೆಪಿ ಸೇರ್ಪಡೆ ಹಾಗೂ ಮುಂದಿನ ವಿಧಾನಸಭಾ ಕ್ಷೇತ್ರದ ಟಿಕೆಟ್‌ ನೀಡಲು ಬಲವಾಗಿ ವಿರೋಧಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಸ್ವಇಚ್ಛೆಯಿಂದ ಬಿಜೆಪಿ ಸೇರ್ಪಡೆ
ಪ್ರಧಾನಿ ಮೋದಿ ಹಾಗೂ ಬಿಜೆಪಿ ಸಿದ್ಧಾಂತದ ಮೇಲಿನ ಅಭಿಮಾನ ಮತ್ತೆ ಬಿಜೆಪಿಯತ್ತ ಬರು ವಂತೆ ಮಾಡಿದೆ. ಬೆಂಬಲಿಗರು, ಹಿತೈಷಿಗಳು, ಕಾರ್ಯ ಕರ್ತರ ಸಲಹೆಯೊಂದಿಗೆ, ಬಿಜೆಪಿ ಮುಖಂಡರ ಮನವಿ ಮೇರೆಗೆ ಮೊದಲಿದ್ದ ಬಿಜೆಪಿ ಪಕ್ಷಕ್ಕೆ ಸ್ವಇಚ್ಛೆ ಯಿಂದ ಸೇರ್ಪಡೆಗೊಳ್ಳುತ್ತಿದ್ದೇನೆ. ಫೆ. 4ಕ್ಕಿಂತ ಮೊದಲೇ ಸೇರಲಿದ್ದೇನೆ. ಯಾವುದೇ ದೊಡ್ಡ ಮಟ್ಟದ ಕಾರ್ಯ ಕ್ರಮವಿಲ್ಲದೆ, ಬೆಂಗಳೂರಿನ ಪಕ್ಷದ ಕಚೇರಿಯಲ್ಲಿಯೇ ಸೇರ್ಪಡೆಗೊಳ್ಳುತ್ತಿದ್ದೇನೆ. ಯಾವುದೇ ನಿರೀಕ್ಷೆ, ಫಲಾಪೇಕ್ಷೆ ಬಯಸದೆ ಸಾಮಾನ್ಯ ಕಾರ್ಯ ಕರ್ತ  ನಾಗಿ ಪಕ್ಷದಲ್ಲಿ  ದುಡಿಯುತ್ತೇನೆ.
– ಹಾಲಾಡಿ ಶ್ರೀನಿವಾಸ ಶೆಟ್ಟಿ

ರಾಜೀನಾಮೆ ಅಂಗೀಕಾರ
ಶ್ರೀನಿವಾಸ ಶೆಟ್ಟಿ ಅವರು ನನ್ನ ಎದುರೇ ಸಹಿ ಹಾಕಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿರುವುದರಿಂದ ಹಾಗೂ ರಾಜೀನಾಮೆ ಕೊಡುವುದರ ಹಿಂದೆ ಯಾವುದೇ ಆಸೆ, ಆಮಿಷ, ಒತ್ತಡಕ್ಕೆ ಒಳಗಾಗದೇ ಇರುವು ದನ್ನು ವಿಚಾರಿಸಿ ಮನವರಿಕೆ ಮಾಡಿಕೊಂಡು ರಾಜೀನಾಮೆ ಪತ್ರ ಅಂಗೀಕರಿಸಿದ್ದೇನೆ.
– ಸ್ಪೀಕರ್‌ ಕೆ.ಬಿ. ಕೋಳಿವಾಡ

4 ಬಾರಿ ಶಾಸಕರಾಗಿ ಆಯ್ಕೆ
ಹಾಲಾಡಿ ಶ್ರೀನಿವಾಸ ಶೆಟ್ಟಿ ಮೂರು ಬಾರಿ ಬಿಜೆಪಿಯಿಂದ ಗೆದ್ದು, ಒಂದು ಬಾರಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದರು. 1999ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ನ ಕೆ. ಪ್ರತಾಪ್‌ಚಂದ್ರ ಶೆಟ್ಟಿ ವಿರುದ್ಧ, 2004ರಲ್ಲಿ ಕಾಂಗ್ರೆಸ್‌ನ ಅಶೋಕ ಕುಮಾರ ಹೆಗ್ಡೆ ವಿರುದ್ಧ, 2008ರಲ್ಲಿ  ಕಾಂಗ್ರೆಸ್‌ನ ಜಯಪ್ರಕಾಶ್‌ ಹೆಗ್ಡೆ ವಿರುದ್ಧ  ಬಿಜೆಪಿ ಅಭ್ಯರ್ಥಿ ಯಾಗಿ ಜಯಗಳಿಸಿದ್ದರು. 2013ರಲ್ಲಿ ಬಿಜೆಪಿ ತೊರೆದು ಪಕ್ಷೇತರರಾಗಿ ಸ್ಪರ್ಧಿಸಿ ಕಾಂಗ್ರೆಸ್‌ನ ಮಲ್ಯಾಡಿ ಶಿವರಾಮ ಶೆಟ್ಟಿ ವಿರುದ್ಧ ಭರ್ಜರಿಯಾಗಿ ಜಯ ಗಳಿಸಿದ್ದರು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-asss

Udupi; ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.