ಕಾಪುದಪ್ಪೆಗ್ ಆಟಿದ ಮಾರಿಪೂಜೆ: ಕಾಲಾವಧಿ ಆಟಿ ಮಾರಿಪೂಜೆ ಗೌಜಿ
Team Udayavani, Jul 27, 2022, 2:35 PM IST
ಕಾಪು: ತುಳುನಾಡಿನಲ್ಲಿ ವೈಭವೋಪೇತವಾಗಿ ನಡೆಯುವ ಏಳು ಪ್ರಸಿದ್ಧ ಜಾತ್ರೆಗಳಲ್ಲಿ ಕಾಪುವಿನ ಮಾರಿಪೂಜೆಯೂ ಒಂದಾಗಿದ್ದು ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಮೂರನೇ (ಕಲ್ಯ) ಮಾರಿಯಮ್ಮ ದೇವಸ್ಥಾನದಲ್ಲಿ ಜು. 26 ಮತ್ತು 27 ರಂದು ಕಾಲಾವಧಿ ಆಟಿ ಮಾರಿಪೂಜೆ ನಡೆಯಿತು.
ಮಂಗಳವಾರ ಸಂಜೆ ಪ್ರಾರಂಭಗೊಂಡು ಬುಧವಾರ ಸಂಜೆಯವರೆಗೆ ಎರಡು ದಿನಗಳ ಕಾಲ ಜರಗುವ ಮಾರಿಪೂಜೆಯ ಸಂದರ್ಭದಲ್ಲಿ ವಿವಿಧೆಡೆಗಳಿಂದ ಬರುವ ಭಕ್ತಾಧಿಗಳು ಮೂರೂ ಮಾರಿಗುಡಿಗಳೂ ತೆರಳು ಮಾರಿಯಮ್ಮ ದೇವಿಗೆ ವಿವಿಧ ಹರಕೆ – ಕಾಣಿಕೆ – ಸೇವೆಗಳನ್ನು ಸಮರ್ಪಿಸುತ್ತಾರೆ. ಭಕ್ತರು ದೇವಿಯ ಗಣಗಳಿಗೆ ಸ್ವಯಂ ಪ್ರೇರಣೆಯಿಂದ ರಕ್ತಾಹಾರ ರೂಪದ ಸೇವೆಯನ್ನು ಸಮರ್ಪಿಸುವ ಮೂಲಕ ತಮ್ಮ ನಂಬಿಕೆಯನ್ನು ಅನಾವರಣಗೊಳಿಸುತ್ತಾರೆ.
ಆಟಿ ಮಾರಿಪೂಜೆಯ ಪ್ರಯುಕ್ತ ಮಂಗಳವಾರ ರಾತ್ರಿ ಶ್ರೀ ಹಳೇ ಮಾರಿಗುಡಿಗೆ ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಮೂರನೇ ಮಾರಿಗುಡಿ ದೇವಸ್ಥಾನಕ್ಕೆ ಕಾಪು ಶ್ರೀ ಜನಾರ್ದನ ದೇವಸ್ಥಾನದಿಂದ ಮಾರಿಯಮ್ಮ ದೇವಿಯ ಬಿಂಬ ಮತ್ತು ಚಿನ್ನಾಭರಣಗಳನ್ನು ಮೆರವಣಿಗೆಯ ಮೂಲಕ ತಂದು ಪ್ರತಿಷ್ಠಾಪಿಸಲಾಗುತ್ತದೆ. ಆ ಬಳಿಕ ಮೂರು ಮಾರಿಗುಡಿಗಳ ಗದ್ದುಗೆಯಲ್ಲಿ ಮಾರಿಯಮ್ಮ ದೇವಿಯ ಬಿಂಬವನ್ನು ಪ್ರತಿಷ್ಟಾಪಿಸಿ ಅಲಂಕಾರ ಮಾಡಿ, ರಾತ್ರಿ ದರ್ಶನ ಸೇವೆ ನಡೆಯುತ್ತದೆ.
ಇದನ್ನೂ ಓದಿ: ಪ್ರವೀಣ್ ಅಂತಿಮ ಯಾತ್ರೆ : ಸಚಿವರು, ಬಿಜೆಪಿ ನಾಯಕರ ವಿರುದ್ಧವೇ ಆಕ್ರೋಶ
ಬುಧವಾರ ಸಂಜೆ ಮೂರೂ ಮಾರಿಗುಡಿಗಳಲ್ಲಿಯೂ ಮಾರಿಯಮ್ಮ ದೇವಿಯ ದರ್ಶನ ಸೇವೆ ನಡೆದು, ದರ್ಶನಾವೇಶದೊಂದಿಗೆ ಮಾರಿಯಮ್ಮ ದೇವಿಯನ್ನು ಗದ್ದುಗೆಯಿಂದ ಕೆಳಗಿಳಿಸಲಾಗುತ್ತದೆ. ಗದ್ದುಗೆಯಿಂದ ಕೆಳಗಿಳಿಸಿದ ಬಿಂಬವನ್ನು ಮಲ್ಲಾರಿನ ನಿರ್ದಿಷ್ಟ ಪ್ರದೇಶಕ್ಕೆ ಕೊಂಡೊಯ್ದು ವಿಸರ್ಜಿಸುವ ಮೂಲಕ ಕಾಲಾವಧಿ ಸುಗ್ಗಿ ಮಾರಿ ಪೂಜಾ ಮಹೋತ್ಸವಕ್ಕೆ ತೆರೆ ಎಳೆಯಲಾಗುತ್ತದೆ.
ಕಾಪು ಶ್ರೀ ಹಳೇ ಮಾರಿಗುಡಿಯ ಆಡಳಿತ ಮೊಕ್ತೇಸರ ಪ್ರಸಾದ್ ಜಿ. ಶೆಣೈ, ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಮತ್ತು ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಮೂರನೇ ಮಾರಿಗುಡಿಯ ಕಾರ್ಯ ನಿರ್ವಹಣಾಧಿಕಾರಿ ಸುಧೀರ್ ಕುಮಾರ್ ಶೆಟ್ಟಿ ಮಾರ್ಗದರ್ಶನದಲ್ಲಿ ಮಾರಿಗುಡಿಗೆ ಆಗಮಿಸುವ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಿಕೊಡಲಾಗಿತ್ತು
ಸುಗ್ಗಿ, ಆಟಿ, ಜಾರ್ದೆ ಮಾರಿಪೂಜೆ : ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಶ್ರೀ ಮೂರನೇ (ಕಲ್ಯ) ಮಾರಿಯಮ್ಮ ದೇವಸ್ಥಾನದ ಗದ್ದುಗೆಯಲ್ಲಿ ಅಲಂಕೃತಗೊಂಡು ಆರಾಧನೆಗೊಳ್ಳುತ್ತಿರುವ ಕಾಪುದಪ್ಪೆ ಮಾರಿಯಮ್ಮ ದೇವಿಯ ಸನ್ನಿಧಿಯಲ್ಲಿ ಮಾರಿಪೂಜೆ ಸೇವೆಯು ಅತೀ ದೊಡ್ಡ ಮತ್ತು ಪ್ರಧಾನ ಸೇವೆಯಾಗಿದೆ. ವಾರ್ಷಿಕವಾಗಿ ಸುಗ್ಗಿ, ಆಟಿ ಮತ್ತು ಜಾರ್ದೆ ತಿಂಗಳಲ್ಲಿ ಮೂರು ಮಾರಿಪೂಜೆಗಳು ನಡೆಯುತ್ತವೆ. ಅದರೊಂದಿಗೆ ವರ್ಷಪೂರ್ತಿ ಆಯ್ದ ದಿನಗಳಲ್ಲಿ ಭಕ್ತರು ಮಾರಿಪೂಜೆಯ ಸೇವೆಯನ್ನು ಹರಕೆಯ ರೂಪದಲ್ಲಿ ಮಾರಿಯಮ್ಮ ದೇವಿಯ ಸನ್ನಿಧಾನದಲ್ಲಿ ಸಮರ್ಪಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.