ಭಟ್ಕಳಮಕ್ಕಿ ಜಿರ್ಬ ಜೆಡ್ಡು ನಿವಾಸಿಗಳಿಗೆ ರಸ್ತೆ ಸಂಪರ್ಕ
Team Udayavani, Sep 10, 2017, 7:15 AM IST
ಕುಂದಾಪುರ: ಹಳ್ಳಿಹೊಳೆ ಭಟ್ಕಳಮಕ್ಕಿ ಜಿರ್ಬ ಜೆಡ್ಡು ನಿವಾಸಿಗಳಿಗೆ ರಸ್ತೆ ಸಂಪರ್ಕ ಒದಗಿಸುವಂತೆ ಕೋರಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಕಮಿಷನರ್ ಅವರಿಗೆ ಮನವಿಯನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ಕುಂದಾಪುರ ತಹಶೀಲ್ದಾರ್ ಜಿ.ಎಂ. ಬೋರ್ಕರ್ ಅವರು ಹಳ್ಳಿಹೊಳೆಗೆ ಭೇಟಿ ನೀಡಿ ರಸ್ತೆ ಸಂಪರ್ಕ ಒದಗಿಸಬೇಕಾದ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಅವರು ಬಡ ದಲಿತ ಕುಟುಂಬದ ಪೋಲಿಯೋ ರೋಗ ಪೀಡಿತ ಹನ್ನೊಂದು ವರ್ಷದ ಬಾಲಕ ಹಾಗೂ ಎರಡು ಕಾಲಿನ ಸ್ವಾಧೀನವನ್ನು ಕಳೆದುಕೊಂಡು ಬದುಕುತ್ತಿರುವ ವಯೋವೃದ್ಧ ದಲಿತ ಮಹಿಳೆಯ ಯೋಗಕ್ಷೇಮ ವಿಚಾರಿಸಿದರು. ಈ ಭಾಗದ ಜನರಿಗೆ ರಸ್ತೆ ಸಂಪರ್ಕವೇ ಇಲ್ಲದಿರುವುದರಿಂದ ಕಾಮಗಾರಿ ಅಧìಕ್ಕೆ ನಿಂತಿರುವ ಗ್ರಾ.ಪಂ.ನಿಂದ ಮಂಜೂರಾದ ಮನೆ, ಅನಾರೋಗ್ಯ ಪೀಡಿತರ ಚಿಕಿತ್ಸೆಗೆ ಹೋಗಲು ಎದುರಿಸುತ್ತಿರುವ ಸಮಸ್ಯೆ ಹಾಗೂ ಈ ಪರಿಸರದ ಜನರು ದಿನ ನಿತ್ಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕರ್ನಾಟಕ ರಾಜ್ಯ ದ.ಸಂ.ಸ.ಯ ಉಡುಪಿ ಜಿಲ್ಲಾ ಸಂಘಟನಾ ಸಂಚಾಲಕ ವಾಸುದೇವ ಮುದೂರು ಅವರು ತಹಸೀಲ್ದಾರರ ಗಮನಕ್ಕೆ ತಂದರು.
ಸಮಸ್ಯೆಗಳ ನೈಜ ಪರಿಸ್ಥಿಯನ್ನು ಮನಗಂಡ ತಹಶೀಲ್ದಾರರು ಸಹಾಯಕ ಕಮಿಷನರೊಂದಿಗೆ ಚರ್ಚಿಸಿ ಅತೀ ಶೀಘ್ರದಲ್ಲಿ ರಸ್ತೆ ಸಂಪರ್ಕ ಒದಗಿಸಲು ಕಾನೂನಾತ್ಮಕವಾದ ಎಲ್ಲಾ ರೀತಿಯ ಪ್ರಯತ್ನ ಕೈಗೊಳ್ಳುವುದಾಗಿ ತಿಳಿಸಿದರು. ಈಗಾಗಲೆ ಸಹಾಯಕ ಕಮಿಷನರ್ ನೇತೃತ್ವದಲ್ಲಿ ರಸ್ತೆ ಸಂಪರ್ಕ ಒದಗಿಸಲು ಸರ್ವೆ ನಡೆಸಿ ಸ್ಥಳ ಗುರುತಿಸಲಾಗಿದೆ. ರಸ್ತೆ ನಿರ್ಮಿಸಲು ಆಕ್ಷೇಪಣೆ ವ್ಯಕ್ತಪಡಿಸುತ್ತಿರುವವರ ಜಮೀನಿನೊಂದಿಗೆ ಸರಕಾರಿ ಹೆಚ್ಚುವರಿ ಜಮೀನು ಇರುವುದು ಸರ್ವೆ ಅಳತೆಯಿಂದ ಗೊತ್ತಾಗಿದ್ದು ಮಾನವೀಯ ನೆಲೆಯಲ್ಲಿ ಸಹಕರಿಸುವಂತೆ ತಿಳಿಸಲಾಗಿದೆ. ಒಪ್ಪದಿದ್ದಲ್ಲಿ ಕಾನೂನು ರೀತಿ ಕ್ರಮ ಜರುಗಿಸಿ ಸಾರ್ವಜನಿಕರಿಗೆ ರಸ್ತೆ ಸಂಪರ್ಕ ಒದಗಿಸಲಾಗುವುದು ಎಂದರು ತಿಳಿಸಿದರು.
ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಸರ್ವೆ ಸೂಪರ್ ವೈಸರ್ ಪುರುಷೋತ್ತಮ್, ಭೂ ಮಾಪಕ ರಜನೀಷ್, ತಹಶೀಲ್ದಾರ್ ಸಹಾಯಕ ಸುಬ್ರಹ್ಮಣ್ಯ, ಸ್ಥಳಿಯ ಹೋರಾಟಗಾರ ಶೇಖರ, ರಂಜನ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.