ಕಾಪು ಹೊಸ ಮಾರಿಗುಡಿಗೆ ಎಚ್. ಡಿ. ದೇವೇಗೌಡ ಭೇಟಿ
Team Udayavani, May 15, 2019, 6:10 AM IST
ಕಾಪು : ಮೂಳೂರಿನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಮಂಗಳವಾರ ಕಾಪು ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ದೇವಿಯ ದರ್ಶನ ಪಡೆದರು.
ಗದ್ದುಗೆಯೇ ಪ್ರಧಾನವಾಗಿರುವ ಕಾಪು ಮಾರಿಯಮ್ಮ ದೇವಿಯ ಸನ್ನಿಧಿಗೆ ಭೇಟಿ ನೀಡಿದ ಅವರು ಕುಟುಂಬದ ಪರವಾಗಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಮಾರಿಗುಡಿಯ ವತಿಯಿಂದ ದೇವೇಗೌಡರನ್ನು ಗೌರವಿಸಲಾಯಿತು.
ಮಾರಿಗುಡಿಯನ್ನು ಸುಮಾರು 35 ಕೋ. ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸುತ್ತಿರುವ ಬಗ್ಗೆ ಜೀರ್ಣೋದ್ಧಾರ ಸಮಿತಿ ರಚಿಸಿದ ದೇಗುಲದ ನವೀಕರಣದ ನಕಾಶೆಯನ್ನು ವೀಕ್ಷಿಸಿದ ಅವರು ಮುಂದೆ ನಡೆಯುವ ಪುನಃಪ್ರತಿಷ್ಟೆ ಮತ್ತು ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಭೋಜೇ ಗೌಡ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾರಿಗುಡಿಯ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಆಡಳಿತಾಧಿಕಾರಿ ಪ್ರವೀಣ್ ನಾಯಕ್, ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಪ್ರಮುಖರಾದ ಡಾ| ದೇವಿಪ್ರಸಾದ್ ಶೆಟ್ಟಿ, ಮಾಧವ ಆರ್. ಪಾಲನ್, ಶೇಖರ್ ಸಾಲ್ಯಾನ್, ಜಯರಾಮ ಆಚಾರ್ಯ, ಎಸ್.ಪಿ. ಬಬೋìಜಾ, ಎಚ್. ಅಬ್ದುಲ್ಲಾ, ಇಬ್ರಾಹಿಂ ಮನಹರ್, ಪುರಸಭಾ ಸದಸ್ಯರಾದ ಹರೀಶ್ ನಾಯಕ್, ಅಶ್ವಿನಿ, ನಾಗೇಶ್ ಸುವರ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.