“ಮಗುವಿಗೆ ತಾಯಿ  ಗರ್ಭದಲ್ಲಿರುವಾಗಲೇ ಸಂಸ್ಕಾರ ಸಿಗಬೇಕು’

Team Udayavani, Mar 19, 2017, 3:46 PM IST

1803mle1.jpg

ಮಲ್ಪೆ: ಹುಟ್ಟುವ ಮಕ್ಕಳಿಗೆ ಗರ್ಭದಲ್ಲಿರುವಾಗಲೇ ತಾಯಿ ಸಂಸ್ಕಾರವನ್ನು ಕೊಡುವಂತಾದರೆ ಮಾತ್ರ ಮುಂದೆ ಆ ತಂದೆ ತಾಯಿ ವೃದ್ದಾಶ್ರಮ ಸೇರುವುದನ್ನು ತಪ್ಪಿಸಲು ಸಾಧ್ಯವಿದೆ ಎಂದು ಉಡುಪಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ನುಡಿದರು. 

ಅವರು ಶನಿವಾರ ಕೊಡವೂರು ಮೂಡುಬೆಟ್ಟು ಶ್ರೀ ಕೃಷ್ಣ ವೃದ್ಧಾಶ್ರಮದ ನೂತನ ಕಟ್ಟಡದ ಶಿಲಾನ್ಯಾಸಗೈದು ಆಶೀರ್ವಚನ ನೀಡಿದರು.

ತಂದೆ ತಾಯಿಗಳನ್ನು ವೃದ್ಧಾಶ್ರಮಕ್ಕೆ ಕಳಿಸಿಕೊಡುವಲ್ಲಿ ಮಕ್ಕಳನ್ನು ದೂರುವು ದಕ್ಕಿಂತ ಅದಕ್ಕೆ ಮೂಲ ಕಾರಣ ಅವರ ತಂದೆ ತಾಯಿಗಳು. ಹೆತ್ತವರು ತಮ್ಮ ಮಕ್ಕಳಿಗೆ ಆರಂಭದಲ್ಲಿಯೇ ಒಳ್ಳೆಯ ಸಂಸ್ಕಾರವನ್ನು ನೀಡಿದ್ದರೆ ಹೆತ್ತವರಿಗೆ ಈ ರೀತಿಯ ಪರಿಸ್ಥಿತಿ ಎದುರಾಗುವುದಿಲ್ಲ. ಲೌಕಿಕ ಶಿಕ್ಷಣದಿಂದಾಗಿ ಇಂದು ಸಂಬಂಧಗಳು ಕಳಚಿಕೊಳ್ಳುತ್ತಿವೆ. ಮನಪರಿವರ್ತನದ ಮೂಲಕ ಈ ಆಶ್ರಮವು ಬೆಳೆಯುವಂತಾಗಲಿ ಎಂದರು. 

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಮೀನುಗಾರಿಕಾ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಮಾತನಾಡಿ ನಮ್ಮನ್ನು ಹೆತ್ತು ಸಲಹಿಸಿದ ತಂದೆ ತಾಯಿಯನ್ನು ಸಾಕುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಅದನ್ನು ಚಾಚೂ ತಪ್ಪದೆ ನಾವೆಲ್ಲರೂ ನಿರ್ವಹಿಸಬೇಕು ಎಂಬ ಸಂದೇಶ ಇಂದಿನ ಕಾರ್ಯಕ್ರಮದ ಮೂಲಕ ಇಡೀ ಲೋಕಕ್ಕೆ ತಿಳಿಯುವಂತಾಗಲಿ ಎಂದ ಅವರು ಕಟ್ಟಡ ನಿರ್ಮಾಣಕ್ಕೆ ಸರಕಾರದಿಂದ ಗರಿಷ್ಠ ಮೊತ್ತದ  ಅನುದಾನವನ್ನು ದೊರಕಿಸಿಕೊಡವಲ್ಲಿ ಪ್ರಯತ್ನಿಸಲಾಗುವುದು ಎಂದರು.

ವಿದೇಶದಲ್ಲಿ ಮಕ್ಕಳು, ಸ್ವದೇಶದಲ್ಲಿ ಹೆತ್ತವರು
ವಿದೇಶದಲ್ಲಿ ಮಕ್ಕಳಿಗೆ 18 ವರ್ಷ ದಾಟಿದ ಅನಂತರ ಅವರು ಸ್ವತಂತ್ರವಾಗಿ ಬೆಳೆಯಬೇಕು ಎಂದು ಅವರ ಹೆತ್ತವರೇ ತಮ್ಮ ಮಕ್ಕಳನ್ನು ಹೊರಗೆ ಹಾಕ್ತಾರೆ, ಆದರೆ ನಮ್ಮ ಭಾರತ ದೇಶದಲ್ಲಿ ಮಕ್ಕಳೇ ತಮ್ಮ ತಂದೆತಾಯಿಗಳನ್ನು ಹೊರಗೆ ಹಾಕುವ ಪರಿಸ್ಥಿತಿ ಎದುರಾಗಿದೆ. ಎಲ್ಲರೂ ಒಟ್ಟಿಗೆ ಜೀವನವನ್ನು ನಡೆಸುವ ಅಗತ್ಯವಿದೆ. ಹೆತ್ತವರು ಮಾಡುವ ಏನು ತೊಂದರೆಗಳಿವೆಅದನ್ನು ನಿವಾರಿಸಿಕೊಂಡು ಹೋಗುವ ಹೊಣೆಗಾರಿಕೆ ಮಕ್ಕಳ ಮೇಲಿದೆ ಎಂದು ಸಚಿವರು ಹೇಳಿದರು. 

ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ| ನಿ. ಬೀ. ವಿಜಯ ಬಲ್ಲಾಳ್‌, ಉದ್ಯಮಿ ರಾಘವೇಂದ್ರ ಆಚಾರ್ಯ, ಉಡುಪಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ನಗರಸಭಾ ಸದಸ್ಯ ಹಾರ್ಮಿಸ್‌ ನರೋನ್ಹಾ , ಹಿರಿಯ ನಾಗರಿಕ ಇಲಾಖೆಯ ಇಲಾಖಾಧಿಕಾರಿ ನಿರಂಜನ ಭಟ್‌, ಮಾರ್ಗದರ್ಶಕರಾದ ಡಾ| ಶತಾವಧಾನಿ ಉಡುಪಿ ರಾಮನಾಥ ಆಚಾರ್ಯ, ಕಡೆಕಾರು ಶೀÅಶಭಟ್‌, ಶೀÅಧರ ಭಟ್‌, ದೇವಿ ಪ್ರಸಾದ್‌ ಶೆಟ್ಟಿ, ಉದಯ ಕುಮಾರ್‌ ಶೆಟ್ಟಿ, ವಿಷ್ಣುಮೂರ್ತಿ, ರಘುವೀರ್‌ ಬಲ್ಲಾಳ್‌, ಶೀÅಶ ಕೊಡವೂರು, ಗಣೇಶ್‌ ಮಧ್ಯಸ್ಥ ಕಲ್ಮಾಡಿ ಉಪಸ್ಥಿತರಿದ್ದರು. ಹಿರಿಯಡ್ಕ ರಾಧಾಕೃಷ್ಣ  ಭಟ್‌ ಸ್ವಾಗತಿಸಿದರು. ಸಂಸ್ಥೆಯ ಸ್ಥಾಪಕ ಕೊರಂಗ್ರಪಾಡಿ ಕೃಷ್ಣಮೂರ್ತಿ ಆಚಾರ್ಯ ವಂದಿಸಿದರು ಸುಬ್ರಹ್ಮಣ್ಯ ಬಾಸ್ರಿ ಕಾರ್ಯಕ್ರಮ ನಿರೂಪಿಸಿದರು. 
 
ಟಾಪ್ ನ್ಯೂಸ್

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.