ಉಡುಪಿ: ಮಲೇರಿಯಾ ಇಳಿಕೆ; ಡೆಂಗ್ಯೂ ಏರಿಕೆ
ಜೂನ್ ವರೆಗೆ ಮಲೇರಿಯಾ 35, ಡೆಂಗ್ಯೂ 79 ಪ್ರಕರಣ ಪತ್ತೆ
Team Udayavani, Jul 6, 2019, 9:44 AM IST
ಉಡುಪಿ: ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯನ್ನು ಸಾಧಿಸಿರುವ ಜಿಲ್ಲೆಯಲ್ಲಿ ಕಳೆದ ಸಾಲಿಗೆ ಹೋಲಿಸಿದರೆ ಮಲೇರಿಯಾ ಪ್ರಕರಣಗಳಲ್ಲಿ ಇಳಿಕೆಯಾಗಿದೆ ಹಾಗೂ ಡೆಂಗ್ಯೂ ಪ್ರಕರಣಗಳ ಏರಿಕೆಯಾಗಿದೆ.
2019 ಜೂನ್ ವರೆಗಿನ ಆರೋಗ್ಯ ಇಲಾಖೆಯ ಸಮೀಕ್ಷೆಯಲ್ಲಿ ಡೆಂಗ್ಯೂ 79 ಹಾಗೂ ಮಲೇರಿಯಾ 35 ಪ್ರಕರಣಗಳು ಪತ್ತೆಯಾಗಿವೆ. 2012ನೇ ಸಾಲಿನಲ್ಲಿ 2,217, 2013ರಲ್ಲಿ 2,205, 2014ರಲ್ಲಿ 1,639, 2015ರಲ್ಲಿ 1,363, 2016ರಲ್ಲಿ 1,168, 2017ರಲ್ಲಿ 513, 2018ರಲ್ಲಿ 221, 2019ರಲ್ಲಿ ಜೂನ್ ವರೆಗೆ 35 ಪ್ರಕರಣಗಳು ಪತ್ತೆಯಾಗಿವೆ. ಈ ಬಾರಿ ಒಟ್ಟು 89,346 ಶಂಕಿತ ವ್ಯಕ್ತಿಗಳ ರಕ್ತವನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಸುಮಾರು 35 ಮಂದಿಗೆ ಮಲೇರಿಯಾ ಇರುವುದು ಖಚಿತವಾಗಿದೆ.
ಜಿಲ್ಲೆಯಲ್ಲಿ 2018ರಲ್ಲಿ ಒಟ್ಟು 228 ಪ್ರಕರಣಗಳು ವರದಿಯಾಗಿದ್ದವು. ಈ ವರ್ಷ ಸುಮಾರು 1,320 ಶಂಕಿತ ವ್ಯಕ್ತಿಗಳ ರಕ್ತವನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಸುಮಾರು 79 ಮಂದಿ ಡೆಂಗ್ಯೂಗೆ ತುತ್ತಾಗಿದ್ದಾರೆ. ಕಳೆದ ವರ್ಷ ಇದೇ ಸಮಯಕ್ಕೆ ಸುಮಾರು 50 ಪ್ರಕರಣ ಪತ್ತೆಯಾಗಿತ್ತು.
ಸೊಳ್ಳೆ ಪರದೆಗೆ ಬೇಡಿಕೆ
53,069 ಸೊಳ್ಳೆ ಪರದೆ ಸರಬರಾಜು ಆಗಿದ್ದು, ಅದರಲ್ಲಿ ಸಿಂಗಲ್ ಬೆಡ್ 2,559, ಡಬಲ್ ಬೆಡ್ 22,000, ಫ್ಯಾಮಿಲಿ 8910 ಸೇರಿದಂತೆ ಒಟ್ಟು 38,469 ಸೊಳ್ಳೆ ಪರದೆ ವಿತರಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮ
ಮಲೇರಿಯಾ ಹಾಗೂ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗುವ ಪ್ರದೇಶವನ್ನು ಗುರುತಿಸಲಾಗಿದೆ. ಆ ಪ್ರದೇಶಕ್ಕೆ ಆರೋಗ್ಯ ಇಲಾಖೆಯ ಸಿಬಂದಿಗಳು ಭೇಟಿ ನೀಡಿ ಮಲೇರಿಯಾ ಹಾಗೂ ಡೆಂಗ್ಯೂ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದ್ದಾರೆ.
ದ.ಕ.: ಒಂದು ತಿಂಗಳಿನಲ್ಲಿ 50 ಡೆಂಗ್ಯೂ ಪ್ರಕರಣ
ಮಂಗಳೂರು: ಜನವರಿಯಿಂದ ಜುಲೈ 4ರ ವರೆಗೆ ಸುಮಾರು 200ರಷ್ಟು ಡೆಂಗ್ಯೂ ಪ್ರಕರಣಗಳು ದ.ಕ. ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಕಳೆದೊಂದು ತಿಂಗಳಿನಲ್ಲಿ ಸುಮಾರು 50 ಪ್ರಕರಣ ದಾಖಲಾಗಿವೆ ಎಂದು ದ.ಕ. ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಮಂಗಳೂರಿನಲ್ಲಿ ಪ್ರಸ್ತುತ ಡೆಂಗ್ಯೂ ಕಡಿಮೆಯಾಗಿದೆ. ಆದರೆ ಕಡಬ, ಕೋಡಿಂಬಾಳ, ಗುತ್ತಿಗಾರು ಭಾಗಗಳಲ್ಲಿ ಪ್ರಕರಣಗಳು ವರದಿಯಾಗುತ್ತಿದ್ದು, ನಿತ್ಯ ಒಂದೆರಡು ಮಂದಿ ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗು ತ್ತಿದ್ದಾರೆ. ಎಲ್ಲರೂ ಗುಣಮುಖರಾಗುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಸರ್ವೇಕ್ಷಣಾ ಧಿಕಾರಿ (ಪ್ರಭಾರ) ಡಾ| ನವೀನ್ ಕುಮಾರ್ ತಿಳಿಸಿದ್ದಾರೆ.
11 ಮಲೇರಿಯಾ ಪ್ರಕರಣ
ಜಿಲ್ಲೆಯಲ್ಲಿ ಮಲೇರಿಯಾ ನಿಯಂತ್ರಣದಲ್ಲಿದೆ. ಸುರತ್ಕಲ್‌ನ ಲಿಂಗಪ್ಪಯ್ಯ ಕಾಡಿನಲ್ಲಿ ಕಳೆದ ತಿಂಗಳು 23 ಪ್ರಕರಣ ಕಂಡು ಬಂದರೆ, ಈ ತಿಂಗಳ 4ನೇ ತಾರೀಕಿನವರೆಗೆ 11 ಪ್ರಕರಣ ದಾಖಲಾಗಿದೆ. ಇಲ್ಲಿ ಮಲೇರಿಯಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಪೂರಕ ಕ್ರಮ ಕೈಗೊಳ್ಳುತ್ತಿದೆ. ನಿರಂತರ ಫಾಗಿಂಗ್ ನಡೆಸ ಲಾಗುತ್ತಿದೆ. ಆದರೆ, ಜನರೂ ಜಾಗೃತರಾಗಬೇಕು. ಮನೆಯ ಟೆರೇಸ್, ಸುತ್ತಮುತ್ತ ನೀರು ನಿಲ್ಲದಂತೆ ನೋಡಿ ಕೊಳ್ಳಬೇಕು. ಸೊಳ್ಳೆ ಉತ್ಪತ್ತಿಯಾಗದಂತೆ, ಹರಡದಂತೆ ಜಾಗ್ರತೆ ವಹಿಸಬೇಕು. ಮಲಗುವಾಗ ಸೊಳ್ಳೆ ಪರದೆ ಉಪಯೋಗಿಸಬೇಕೆಂದು ಡಾ| ನವೀನ್ ಕುಮಾರ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.