ತೆಕ್ಕಟ್ಟೆ: ಡಾ. ಎಂ.ಕುಸುಮಾಕರ ಶೆಟ್ಟಿ ಅವರನ್ನು ಹೃದಯಸ್ಪರ್ಶಿಯಾಗಿ ಭರಮಾಡಿಕೊಂಡ ಗ್ರಾಮಸ್ಥರು
ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೈದ್ಯ
Team Udayavani, Nov 1, 2019, 6:17 PM IST
ತೆಕ್ಕಟ್ಟೆ: ಜನ ಸೇವೆಯಿಂದಲೇ ಜಿಲ್ಲೆಯಲ್ಲಿ ಗುರುತಿಸಿಕೊಂಡಿರುವ ಅತ್ಯಂತ ಸರಳತೆಯಿಂದಲೇ ದಿನದ 24 ಗಂಟೆಗಳ ಕಾಲ ರೋಗಿಗಳ ಆರೈಕೆ ಸಿದ್ಧರಾಗಿರುವ ವೈದ್ಯರು ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಾ ಜನರ ಪ್ರೀತಿಗೆ ಪಾತ್ರರಾದ ಅಪರೂಪದ ವ್ಯಕ್ತಿ ಊರಿನ ಹೆಮ್ಮೆಯ ವೈದ್ಯ ಡಾ.ಎಂ.ಕುಸುಮಾಕರ ಶೆಟ್ಟಿ ಅವರು ತೆಕ್ಕಟ್ಟೆ ಹಾಗೂ ಸುತ್ತಮುತ್ತಲ ಹತ್ತಾರು ಗ್ರಾಮಗಳ ಜನತೆಗೆ ಕಳೆದ 21 ವರ್ಷಗಳಿಂದ ವೈದ್ಯಕೀಯ ಸೇವೆಯನ್ನು ನೀಡುತ್ತಿರುವ ಜನಸೇವಕನಿಗೆ ಈ ಬಾರಿಗೆ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿ ತೆಕ್ಕಟ್ಟೆ ಗ್ರಾಮಕ್ಕೆ ಆಗಮಿಸುತ್ತಿರುವ ಸಂದರ್ಭದಲ್ಲಿ ನೂರಾರು ಮಂದಿ ಗ್ರಾಮಸ್ಥರು ಶುಕ್ರವಾರದಂದು ಸಂಭ್ರಮದಿಂದ ಭರಮಾಡಿಕೊಂಡರು.
ಕಳೆದ 21 ವರ್ಷಗಳಿಂದ ಪ್ರೇಮಾ ಕ್ಲಿನಿಕ್ ಶಾಪ್‌ನ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಹಾಗೂ ಸುತ್ತಮುತ್ತಲ ಹತ್ತಾರು ಗ್ರಾಮಗಳ ಜನತೆಗೆ ವೈದ್ಯಕೀಯ ಸೇವೆಯನ್ನು ಅವರು ಕಳೆದ 21 ವರ್ಷಗಳಿಂದ ನೀಡುತ್ತಾ ಬಂದಿದ್ದಾರೆ. ಕಡ್ರಿ ಗೋವಿಂದ ಶೆಟ್ಟಿ ಹಾಗೂ ಮೊಗೆಬೆಟ್ಟು ಪ್ರೇಮಾ ಶೆಡ್ತಿ ದಂಪತಿಗಳ ಪುತ್ರನಾಗಿರುವ 1977ರಲ್ಲಿ ಅವರಲ್ಲಿ ನೂಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಪಡೆದು , ಬಿದ್ಕಲ್‌ಕಟ್ಟೆ ಸರಕಾರಿ ಪ್ರೌಢಶಾಲೆ ಹಾಗೂ ಭಂಡಾರ್‌ಕಾರ್ ಕಾಲೇಜಿನಲ್ಲಿ ಪದವಿ ಮುಗಿಸಿ, ಕೆಎಎಂಸಿ ಕಾಲೇಜು ಕೊಪ್ಪದಲ್ಲಿ ಟಿಎಎಂಎಸ್ ಪದವಿ ಪಡೆದಿದ್ದಾರೆ. ಪತ್ನಿ ರೇಶ್ಮಾ ಕೆ.ಶೆಟ್ಟಿ, ಪುತ್ರ ಅದ್ವಿತ್ ಶೆಟ್ಟಿ ಹಾಗೂ ಪುತ್ರಿ ಬ್ರಾಹ್ಮಿ ಯೊಂದಿಗೆ ಸುಖೀ ಸಂಸಾರ ನಡೆಸುತ್ತಿದ್ದಾರೆ.
ಪರಿಸರದ ಬಗ್ಗೆ ವಿಶೇಷ ಕಾಳಜಿ : ನಿಸರ್ಗ ಅಧ್ಯಯನದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ
ಡಾ| ಎಂ.ಕುಸುಮಾಕರ ಶೆಟ್ಟಿ ಅವರು ಮೊಗೆಬೆಟ್ಟಿನ ತಮ್ಮ ಮನೆಯ ಪರಿಸರದಲ್ಲಿ ಔಷಧೀಯ ಗಿಡಗಳನ್ನು ನೆಟ್ಟು ಪೋಷಿಸಿದ್ದಾರೆ. ಸಾಂಪ್ರದಾಯಿಕ ಕೃಷಿ ಚಟುವಟಿಕೆಯ ಬಗ್ಗೆ ಅಪಾರ ಆಸಕ್ತಿಯನ್ನು ಹೊಂದಿರುವ ಇವರು ಕೃಷಿಯಲ್ಲಿ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.
ಜನಸೇವೆ : ಜನ ಸೇವೆಯಿಂದಲೇ ಜಿಲ್ಲೆಯಲ್ಲಿ ಗುರುತಿಸಿಕೊಂಡಿರುವ ಇವರು ಅತ್ಯಂತ ಸರಳತೆಯಿಂದಲೇ ದಿನದ 24 ಗಂಟೆಗಳ ಕಾಲ ರೋಗಿಗಳ ಆರೈಕೆ ಸಿದ್ಧರಾಗಿರುವ ವೈದ್ಯರು ಗ್ರಾಮೀಣ ಪ್ರದೇಶಲ್ಲಿ ಕಾರ್ಯನಿರ್ವಹಿಸುತ್ತಾ ಜನರ ಪ್ರೀತಿಗೆ ಪಾತ್ರರಾದ ಅಪರೂಪದ ವ್ಯಕ್ತಿ ನಮ್ಮೂರಿನ ಹೆಮ್ಮೆಯ ವೈದ್ಯ ಡಾ| ಎಂ.ಕುಸುಮಾಕರ ಶೆಟ್ಟಿ . ಗ್ರಾಮೀಣ ಭಾಗದ ಹೊರರೋಗಿಗಳಿಗೆ ಮಾನಸಿಕ ಸ್ಥೈರ್ಯ ನೀಡುವ ಜತೆಗೆ ಔಷದೋಪಚಾರವನ್ನು ನೀಡಿ ಸದಾ ಗ್ರಾಮೀಣ ಜನತೆಗೆ ಉತ್ತಮ ಸೇವೆಯನ್ನು ನಿರಂತರವಾಗಿ ನೀಡುತ್ತಿದ್ದಾರೆ. ಸ್ಥಳೀಯ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ತುರ್ತು ಚಿಕಿತ್ಸೆಗಾಗಿ ಬಂದಾಗ ಅವರಿಗೆ ಉಚಿತ ಚಿಕಿತ್ಸೆಯನ್ನು ಕಳೆದ ಹಲವು ವರ್ಷಗಳಿಂದಲೂ ನೀಡುತ್ತಾ ಬಂದಿದ್ದಾರೆ. ಇವರ ಸೇವೆಯನ್ನು ಕಂಡು ವಿವಿಧ ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸಿದೆ.
ಚಿತ್ರಗಳು : ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.