ಉಡುಪಿ: ಧೂಳು ಸಹಿತ ಮಳೆ ?!

Team Udayavani, Aug 4, 2018, 12:01 PM IST

male.png

ಉಡುಪಿ: ಉಡುಪಿ ಮತ್ತು ಸುತ್ತಲಿನ ಕೆಲವೆಡೆ ಶುಕ್ರವಾರ ಧೂಳು ಸಹಿತ ಮಳೆ ಬಿದ್ದಿರುವ ಬಗ್ಗೆ ಮಾಹಿತಿ ದೊರೆತಿದೆ. ಮಧ್ಯಾಹ್ನ 3 ಗಂಟೆಗೆ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿದ ಅನಂತರ ಹಲವರಿಗೆ ಕಂದು, ಹಳದಿ, ಬಿಳಿ ಬಣ್ಣದ ಕೆಸರಿನ ನೀರು ಬೈಕ್‌, ಕಾರು ಹಾಗೂ ಇತರ ವಸ್ತುಗಳ ಮೇಲೆ ಬಿದ್ದ ಅನುಭವವಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು “ಉದಯವಾಣಿ’ಗೆ ಹಲವು ಮಂದಿ ಮಾಹಿತಿ ನೀಡಿದ್ದಾರೆ. “ಮಧ್ಯಾಹ್ನ  3 ಗಂಟೆ ವೇಳೆಗೆ ನಿಲ್ಲಿಸಿದ ಕಾರು, ಬೈಕ್‌ಗಳ ಮೇಲೆ ಕೆಸರು ನೀರು ಬಿದ್ದಿದೆ. ಅಂಗಳದಲ್ಲಿ ಪಾತ್ರೆ ಇಟ್ಟಾಗ ಅದಕ್ಕೂ ಕೆಸರು ನೀರು ಬಿದ್ದಿದೆ’ ಎಂದು ನಿಟ್ಟೂರಿನ ವೀಡಿಯೋಗ್ರಾಫ‌ರ್‌ ಸುಂದರ್‌ ತಿಳಿಸಿದ್ದಾರೆ. ಹಿರಿಯಡಕದ ಕೆಲವರೂ ಈ ಕುರಿತು ತಿಳಿಸಿದ್ದಾರೆ.

ಬ್ರಹ್ಮಗಿರಿಯಲ್ಲಿರುವ ಪ್ರಸ್‌ಕ್ಲಬ್‌ ಎದುರು ನಿಲ್ಲಿಸಿದ್ದ ವಾಹನಗಳ ಮೇಲೆ ಮಳೆದ ಬಂದ ಅನಂತರ ಹಳದಿ, ಬಿಳಿ ಮಿಶ್ರಿತ ಬಣ್ಣದ ಧೂಳು ಇತ್ತು. ಇದನ್ನು ಬಿಳಿ ಮಳೆ ಎಂದು ಕರೆಯಬಹುದು ಎಂದು  ಸ್ಥಳೀಯರೊಬ್ಬರು ತಿಳಿಸಿದ್ದಾರೆ. ಧೂಳು ಸಹಿತ ಮಳೆಯಾಗಿರುವ ಬಗ್ಗೆ ಕೆಲವು ಗೆಳೆಯರು ಮಾಹಿತಿ ನೀಡಿದ್ದಾರೆ ಎಂದು ಉಡುಪಿಯ ಸುದರ್ಶನ್‌ ಬೇಕರಿ ಮಾಲಕ ಸಂದೀಪ್‌ ಪ್ರತಿಕ್ರಿಯಿಸಿದ್ದಾರೆ.

ಹೆಲ್ಮೆಟ್‌ ಮೇಲೆ ಬಿಳಿ ಕಲೆ
ಸ್ಕೂಟಿಯಲ್ಲಿ ಸಂಜೆ ಕಾಲೇಜಿನಿಂದ ಬಂದ ಅನಂತರ ಹೆಲ್ಮೆಟ್‌ ಗಮನಿಸಿದಾಗ ಅದರ ಮೇಲೆ ಕೂಡ ಬಿಳಿ ಬಣ್ಣದ ಚುಕ್ಕೆಗಳು ಮಸುಕಾಗಿ ಇರುವುದು ಗಮನಿಸಿದೆ. ಒಂದು ಬಾರಿ ಮಾತ್ರ ನನಗೆ ಮಳೆ ಸಿಕ್ಕಿತ್ತು ಎಂದು ಉಪನ್ಯಾಸಕಿಯೊಬ್ಬರು ತಿಳಿಸಿದ್ದಾರೆ. 

ದ.ಕ.-ಉಡುಪಿ: ಸಾಧಾರಣ ಮಳೆ 
ಕುಂದಾಪುರ, ಸಿದ್ದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಪಡುಬಿದ್ರಿ, ಶಿರ್ವ, ಕಾಪು ಪರಿಸರದಲ್ಲಿ ಸಾಧಾರಣ, ಪಡುಕೋಣೆ, ಮರವಂತೆ ಯಲ್ಲಿ ಉತ್ತಮ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಸಂಜೆ ವೇಳೆ ಮೋಡ ಮುಸುಕಿತ್ತು. ವೇಣೂರು, ಮಚ್ಚಿನ, ಮದ್ದಡ್ಕ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳದಲ್ಲಿ ಮಳೆಯಾಗಿದೆ.

ಟಾಪ್ ನ್ಯೂಸ್

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.