Heavy Rain: ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ
ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಕಾಲೇಜುಗಳಿಗೂ ರಜೆ...
Team Udayavani, Jul 24, 2023, 5:41 PM IST
ಉಡುಪಿ: ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಜುಲೈ 25ರಂದು (ಮಂಗಳವಾರ) ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು, ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.