ಇದು ಹೊಳೆಯಲ್ಲ.. ಗಂಗೊಳ್ಳಿ ಪೇಟೆ ರಸ್ತೆ..
Team Udayavani, Jun 28, 2018, 6:00 AM IST
ಗಂಗೊಳ್ಳಿ: ಗಂಗೊಳ್ಳಿ ಪೇಟೆಯಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆಯಿಲ್ಲದ ಕಾರಣ ನೀರೆಲ್ಲ ರಸ್ತೆಯಲ್ಲೇ ಹರಿದು ಹೋಗುತ್ತಿದೆ. ಇದರಿಂದ ಶಾಲಾ ಮಕ್ಕಳು ಸೇರಿದಂತೆ ದ್ವಿಚಕ್ರ ವಾಹನ ಸವಾರರು ಸೇರಿದಂತೆ ಅನೇಕ ಮಂದಿ ಸಂಚರಿಸಲು ಪರದಾಟ ನಡೆಸಿದರು.
ಬಂದರು ನಗರಿ ಗಂಗೊಳ್ಳಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಬುಧ ವಾರವೂ ನಿರಂತರ ಮಳೆಯಾಗಿದೆ. ಗಂಗೊಳ್ಳಿಯ ಪೇಟೆ ಸೇರಿದಂತೆ ಅನೇಕ ಕಡೆ ಗಳಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಮಾಡದ ಕಾರಣ ಈಗ ಮಳೆ ನೀರೆಲ್ಲ ರಸ್ತೆಯಲ್ಲೇ ಹರಿದು ಹೋಗುತ್ತಿದೆ. ಅದು ಕೂಡ ಅಲ್ಲಲ್ಲಿ ನಿಂತು, ರಸ್ತೆಯೇ ಹೊಳೆಯಂತೆ ಭಾಸವಾಗುತ್ತಿದೆ.
ಗಂಗೊಳ್ಳಿ ಪೇಟೆಯ ಮುಖ್ಯ ರಸ್ತೆ, ಮ್ಯಾಂಗನೀಸ್ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರಿಗೆ ಸಂಚರಿಸಲು, ಪಾದಚಾರಿಗಳಿಗೆ ನಡೆದಾಡಲು ಕಷ್ಟವಾಗುತ್ತಿದೆ.
ಗಂಗೊಳ್ಳಿಯಲ್ಲಿ ಮಳೆಗಾಲ ಆರಂಭ ವಾದರೂ ಚರಂಡಿ ಹೂಳೆತ್ತದಿರುವ, ಚರಂಡಿ ವ್ಯವಸ್ಥೆಯಿಲ್ಲದಿರುವ ಕುರಿತು ಜೂ. 5ರಂದು “ಉದಯವಾಣಿ’ ಪತ್ರಿಕೆ ವರದಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.