ಧಾರಾಕಾರ ಮಳೆ: ತಗ್ಗು ಪ್ರದೇಶಗಳಲ್ಲಿ ನೀರು


Team Udayavani, May 20, 2022, 11:26 AM IST

udupi1

ಉಡುಪಿ: ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಹಲವಾರು ಭಾಗ ಜಲಾವೃತಗೊಂಡು ಕೃತಕ ನೆರೆ ಸೃಷ್ಟಿಯಾಗಿದೆ. ಕಾಪು ವ್ಯಾಪ್ತಿಯಲ್ಲಿ ಅತ್ಯಧಿಕ ಮಳೆ ಸುರಿದಿದೆ.

ಬುಧವಾರ ತಡರಾತ್ರಿ ಗುರುವಾರ ಇಡೀ ದಿನ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿದಿದೆ. ತಗ್ಗು ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಗುರುವಾರ ಬೆಳಗ್ಗೆ 8.30ರ ಹಿಂದೆ 24 ತಾಸುಗಳಲ್ಲಿ ಉಡುಪಿ – 48.6, ಬ್ರಹ್ಮಾವರ – 26.5, ಕಾಪು – 57.1 ಮಿ. ಮೀ. ಸರಾಸರಿ ಮಳೆಯಾಗಿದೆ. ಕಾಪು ತಾಲೂಕಿನ ಪಲಿಮಾರು ಗ್ರಾಮದ ಪುರುಷೋತ್ತಮ ಆಚಾರ್ಯರ ಮನೆಯ ಗೋಡೆಗೆ ಭಾಗಶಃ ಹಾನಿ ಸಂಭವಿಸಿದೆ.

ಉಡುಪಿ ನಗರ ವ್ಯಾಪ್ತಿಯಲ್ಲಿ ಮಲ್ಪೆ, ಬೈಲಕೆರೆ, ಮಠದಬೆಟ್ಟು, ಬನ್ನಂಜೆ, ನಿಟ್ಟೂರು, ಗುಂಡಿಬೈಲು, ಕಲ್ಮಾಡಿ, ಅಂಬಲಪಾಡಿ ಭಾಗದಲ್ಲಿ ಗದ್ದೆ ಪ್ರದೇಶಗಳಲ್ಲಿ ನೀರು ತುಂಬಿಕೊಂಡಿತ್ತು. ಉಡುಪಿ, ಮಣಿಪಾಲ, ಮಲ್ಪೆ ಪೇಟೆಯಲ್ಲಿ ಚರಂಡಿ ಭರ್ತಿಯಾಗಿ ರಸ್ತೆ, ಅಂಗಡಿ ಮುಂಭಾಗದ ರಸ್ತೆ ಮೇಲೆ ಮಳೆ ನೀರು ಹರಿಯಿತು. ಕರಾವಳಿ ಬೈಪಾಸ್‌ನಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೀರ ಅಡಚಣೆ ಉಂಟಾಯಿತು. ಚರಂಡಿಯಿಂದ ಉಕ್ಕೇರಿದ ಮಳೆ ನೀರು ಸರ್ವಿಸ್‌ ರೋಡ್‌ ಮತ್ತು ಫ್ಲೈಓವರ್‌ ಕೆಳಗೆ ಸಾಕಷ್ಟು ಪ್ರಮಾಣದಲ್ಲಿ ಕೃತಕ ನೆರೆಯಂತೆ ಸೃಷ್ಟಿಯಾಗಿ ಅವಾಂತರ ಸೃಷ್ಟಿಯಾಯಿತು.

ಟ್ರಾಫಿಕ್‌ ಜಾಮ್‌

ನಿರಂತರ ಮಳೆಯಿಂದ ನಗರದ ಹಲವೆಡೆ ಟ್ರಾಫಿಕ್‌ ಜಾಮ್‌ ಸಂಭವಿಸಿದ್ದು, ಕೆಎಂ ಮಾರ್ಗ, ಕಲ್ಸಂಕ ವೃತ್ತ ದಲ್ಲಿ ಸಂಚಾರ ದಟ್ಟಣೆಯನ್ನು ಪೊಲೀಸರು ನಿಯಂತ್ರಿಸಿ ದರು. ಉಡುಪಿ ಮೆಸ್ಕಾಂ ಡಿವಿಜನ್‌ನಲ್ಲಿ ಹಲವೆಡೆ ವಿದ್ಯುತ್‌ ಸಂಪರ್ಕ ಕೆಲ ಸಮಯ ಕೈಕೊಟ್ಟಿತು. 9 ವಿದ್ಯುತ್‌ ಕಂಬಗಳು, ಎರಡು ಟಿಸಿಗೆ ಹಾನಿಯಾಗಿದ್ದು, ಮೆಸ್ಕಾಂ ಸಿಬಂದಿ ತುರ್ತು ಕಾಮಗಾರಿ ಕೈಗೊಂಡರು.

ರಸ್ತೆಗಳೆಲ್ಲ ಕೆಸರುಮಯ

ವಾರಾಹಿ ಮತ್ತು ಒಳಚರಂಡಿ ಕಾಮಗಾರಿ ಹಿನ್ನೆಲೆಯಲ್ಲಿ ಪೈಪ್‌ಲೈನ್‌ ತೋಡಿರುವ ಗುಂಡಿಯನ್ನು ತೋಡಿ ಮುಚ್ಚಿದ ಕಡೆ ರಸ್ತೆ ಕೆಸರುಮಯವಾಗಿತ್ತು. ಇದಕ್ಕೆ ಡಾಮರು ಕಾಮಗಾರಿ ನಡೆಸದೆ ಇದ್ದದ್ದು ಕಾರಣವಾಗಿದೆ. ಗುಂಡಿಬೈಲು, ಉಡುಪಿ-ಮಣಿಪಾಲ ಮುಖ್ಯ ರಸ್ತೆಗಳ ಬದಿಯಲ್ಲಿ ಕೆಸರು ನೀರು ಹರಿಯುತ್ತಿತ್ತು. ವಾಹನ ಸವಾರರು, ಪಾದಚಾರಿಗಳು ಇದರಿಂದ ಪರಿತಪಿಸುವಂತಾಯಿತು.

ಗುಂಡಿಬೈಲು: ಪೈಪ್‌ ಒಡೆದು ಅವಾಂತರ

ವಾರಾಹಿ, ಒಳಚರಂಡಿ ಕುಡಿಯುವ ನೀರು ಕಾಮಗಾರಿ ನಡೆಸಿದ್ದ ಜಾಗದಲ್ಲಿ (ಗುಂಡಿಬೈಲು) ದೊಡ್ಡಮಟ್ಟದಲ್ಲಿ ನೀರು ಹರಿದಿದ್ದು, ಸ್ಥಳೀಯರಿಗೆ ಸಮಸ್ಯೆಯಾಗಿ ಪರಿಣಮಿಸಿತ್ತು. ಬಳಿಕ ಪರಿಶೀಲನೆ ನಡೆಸಿದಾಗ ವಾರಾಹಿ ಕುಡಿಯುವ ನೀರಿನ ಪೈಪ್‌ಲೈನ್‌ಗೆ ಹಾನಿಯಾಗಿ ದೊಡ್ಡಮಟ್ಟದಲ್ಲಿ ನೀರು ಸೋರಿಕೆಯಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದರು. ಸ್ಥಳಕ್ಕೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಡಿ. ಶೆಟ್ಟಿ, ಸದಸ್ಯೆ ಗೀತಾ ಶೇಟ್‌ ಭೇಟಿ ನೀಡಿ ಪರಿಶೀಲಿಸಿದರು. ಮಣ್ಣನ್ನು ಅಗೆದು ತುರ್ತು ಕಾಮಗಾರಿ ನಡೆಸಿ ಸಂಜೆಯೊಳಗೆ ದುರಸ್ತಿಪಡಿಸಲಾಯಿತು.

ಟಾಪ್ ನ್ಯೂಸ್

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

sand

Kaup: ಕೈಪುಂಜಾಲು; ಅಕ್ರಮ ಮರಳು ಸಂಗ್ರಹ; ಪ್ರಕರಣ ದಾಖಲು

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.