ಧಾರಾಕಾರ ಮಳೆ: ಕೃಷಿ ಚಟುವಟಿಕೆ ಸ್ಥಗಿತ; ಉಕ್ಕಿ ಹರಿಯುತ್ತಿರುವ ನದಿಗಳು
Team Udayavani, Jun 15, 2018, 6:50 AM IST
ಅಜೆಕಾರು: ಪಶ್ಚಿಮ ಘಟ್ಟ ಭಾಗದಲ್ಲಿ ಜೂ.13ರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿ ಹಳ್ಳಕೊಳ್ಳಗಳು ತುಂಬಿ ಮಳೆಯ ನೀರು ಕೃಷಿ ಭೂಮಿಗೆ ನುಗ್ಗಿದೆ.
ಪಶ್ಚಿಮ ಘಟ್ಟದ ತಪ್ಪಲಿನ ಗ್ರಾಮಗಳಾದ ಮಾಳ, ಕೆರ್ವಾಶೆ, ಶಿರ್ಲಾಲು, ಅಂಡಾರು, ಮುಟ್ಲುಪಾಡಿ ಗ್ರಾಮಗಳ ರೈತರ ಕೃಷಿ ಭೂಮಿ ನೆರೆಯಿಂದ ಆವೃತವಾಗಿದೆ.
ಮನೆಗೆ ನುಗ್ಗಿದ ನೀರು
ಗ್ರಾಮೀಣ ಭಾಗದಲ್ಲಿ ಭಾರೀ ಮಳೆಗೆ ಕೃಷಿ ಭೂಮಿಗೆ ನೀರು ನುಗ್ಗಿದರೆ ಪಟ್ಟಣ ಪ್ರದೇಶಗಳಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಮನೆಗೆ ನುಗ್ಗಿದೆ.
ಮರ್ಣೆ ಪಂ. ವ್ಯಾಪ್ತಿಯ ಅಜೆಕಾರು ಪೇಟೆಯ ಲತಾ ಟೆಲ್ಲಿಸ್‌ರವರ ಮನೆಗೆ ಚರಂಡಿಯ ನೀರು ನುಗ್ಗಿ ಆತಂಕ ಸೃಷ್ಟಿಯಾಗಿತ್ತು. ಚರಂಡಿಯಲ್ಲಿ ಕಸ ತ್ಯಾಜ್ಯ ತುಂಬಿರುವುದರಿಂದ ಭಾರೀ ಮಳೆಗೆ ನೀರು ಚರಂಡಿಯ ಮೇಲೆ ಬಂದು ಮನೆಯೊಳಗೆ ನುಗ್ಗಿದೆ.
ವಿಷಯ ಗಮನಕ್ಕೆ ಬರುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಅಧ್ಯಕ್ಷ ದಿನೇಶ್ ಕುಮಾರ್ ಅಧಿಕಾರಿಗಳ ಗಮನಕ್ಕೆ ತಂದು ಚರಂಡಿಯಲ್ಲಿ ಸರಾಗವಾಗಿ ನೀರು ಹರಿಯುವಂತೆ ವ್ಯವಸ್ಥೆ ಮಾಡಿ ಮನೆಗೆ ನೀರು ನುಗ್ಗದಂತೆ ಕ್ರಮ ಕೈಗೊಂಡಿದ್ದಾರೆ.
ತುಂಬಿ ಹರಿದ ಸುವರ್ಣಾ ನದಿ
ಎಣ್ಣೆಹೊಳೆ ಮೂಲಕ ಹಾದು ಹೋಗುವ ಸುವರ್ಣಾ ನದಿಯು ತುಂಬಿ ಹರಿದಿದ್ದು ನದಿ ಪಾತ್ರದ ಕೃಷಿ ಭೂಮಿ, ತೋಟ ಜಲಾವೃತಗೊಂಡಿದೆ. ಎಣ್ಣೆಹೊಳೆ ಪೇಟೆಯ ಬಸ್ ನಿಲ್ದಾಣದವರೆಗೂ ನೀರು ತುಂಬಿ ಅಪಾಯಕಾರಿಯಾಗಿ ನದಿಯಲ್ಲಿ ನೀರು ಹರಿದಿದೆ.
ಗದ್ದೆಗಳಿಗೆ, ಅಡಿಕೆ, ಬಾಳೆ ತೋಟಗಳಿಗೆ ನೀರು ನುಗ್ಗಿ ಹಾನಿ
ನದಿಗಳು ತುಂಬಿ ಹರಿಯುತ್ತಿದ್ದು, ಈ ನದಿಗಳ ನೀರು ಅಕ್ಕಪಕ್ಕದ ಗದ್ದೆಗಳಿಗೆ ಹಾಗೂ ಅಡಿಕೆ, ಬಾಳೆ ತೋಟಗಳಿಗೆ ನುಗ್ಗಿ ಹಾನಿ ಉಂಟಾಗಿದೆ. ಮಳೆಯ ನೀರಿನ ಸೆಳೆತಕ್ಕೆ ಭತ್ತದ ಗದ್ದೆಗಳ ಅಂಚು ಕೊಚ್ಚಿಕೊಂಡು ಹೋಗಿದ್ದರೆ ಅಡಿಕೆ ತೋಟಕ್ಕೆ ಹಾಕಿದ ಹಸಿರೆಲೆ ಗೊಬ್ಬರ ನೀರು ಪಾಲಾಗಿದೆ. ಭತ್ತದ ಗದ್ದೆಗಳಲ್ಲಿ ನೀರು ತುಂಬಿ ಬೃಹತ್ ನದಿಯಂತೆ ಭಾಸವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಭಾರತೀಯ ಸಂಸ್ಕೃತಿ ಮತ್ತು ಭಗವದ್ಗೀತೆ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
Dec. 29: ಪಡುಬಿದ್ರಿಯಲ್ಲಿ ಅಂತರ್‌ರಾಜ್ಯ ಬಂಟ ಕ್ರೀಡೋತ್ಸವ – ಎಂಆರ್‌ಜಿ ಟ್ರೋಫಿ
Udupi: ಕಲ್ಸಂಕ ಜಂಕ್ಷನ್; ಹಗಲು-ರಾತ್ರಿ ಟ್ರಾಫಿಕ್ ಕಿರಿಕಿರಿ
Padubidri: ಪಲಿಮಾರು ಉಪ್ಪು ನೀರು ತಡೆ ಅಣೆಕಟ್ಟು ನಾಲ್ಕೇ ವರ್ಷದಲ್ಲಿ ಜೀರ್ಣಾವಸ್ಥೆಗೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಭಾರತೀಯ ಸಂಸ್ಕೃತಿ ಮತ್ತು ಭಗವದ್ಗೀತೆ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.