ಹೆಬ್ರಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಮತ್ತೆ ಸಂಕಷ್ಟ
Team Udayavani, May 24, 2022, 7:25 AM IST
ಮಣಿಪಾಲ: ತೀರ್ಥಹಳ್ಳಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ 169ಎ ವಿಭಾಗದ ಹೆಬ್ರಿ-ಮಲ್ಪೆ ಚತುಷ್ಪಥ ರಸ್ತೆ ವಿಸ್ತರಣೆಯ 355.72 ಕೋ.ರೂ. ಯೋಜನೆಯ ಟೆಂಡರ್ ಪ್ರಕ್ರಿಯೆ ಗೊಂದಲದಿಂದ ಕೂಡಿದ್ದೂ, ಯೋಜನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ಈ ಹೆದ್ದಾರಿ ಅಭಿವೃದ್ಧಿ ಯೋಜನೆಯನ್ನು ಕೇಂದ್ರ ಸರಕಾರ ಕಳೆದ ಡಿಸೆಂಬರ್‌ನಲ್ಲಿ ಘೋಷಿಸಿತ್ತು. ಹೆಬ್ರಿಯಿಂದ-ಪರ್ಕಳ ವರೆಗೆ ಮತ್ತು ಮಲ್ಪೆಯಿಂದ-ಕರಾವಳಿ ಜಂಕ್ಷನ್ ವರೆಗೆ ಎರಡು ವಿಭಾಗದಲ್ಲಿ ಕಾಮಗಾರಿ ನಡೆಯಲಿದ್ದು, 28.3 ಕಿ.ಮೀ. ಉದ್ದದ ರಸ್ತೆ ಇದಾಗಿದೆ. ಈಗಾಗಲೇ ಕುಂಜಿಬೆಟ್ಟು-ಪರ್ಕಳದ ವರೆಗೆ 400 ಮೀ. ಹೊರತುಪಡಿಸಿ 8 ಕಿ.ಮೀ. ಪೂರ್ಣಗೊಂಡಿದೆ. ಹಣಕಾಸು ಮಂಜೂರಾತಿಗೆ ವಿಳಂಬವಾದ ಕಾರಣ ಕಾಮಗಾರಿ ಆರಂಭವೂ ವಿಳಂಬವಾಗಿತ್ತು. ಇದೀಗ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ.
ತಾಂತ್ರಿಕ ಸಮಸ್ಯೆಯಿಂದ ಟೆಂಡರ್ ರದ್ದು?
ಹೆದ್ದಾರಿ ನಿರ್ಮಾಣ ಗುತ್ತಿಗೆ ಸಂಸ್ಥೆಯೊಂದು ಟೆಂಡರ್‌ನಲ್ಲಿ ಭಾಗವಹಿಸಿದ್ದು, 2 ಬಾರಿಯೂ ತಾಂತ್ರಿಕ ಸಮಸ್ಯೆಯಿಂದ ಟೆಂಡರ್ ಪ್ರಕ್ರಿಯೆ ನಡೆದಿಲ್ಲ. ಮತ್ತೆ ಟೆಂಡರ್ ಪ್ರಕ್ರಿಯೆಗೆ ಒಂದೆರಡು ತಿಂಗಳು ಸಮಯ ತೆಗೆದುಕೊಳ್ಳಬಹುದು ಈಗಾಗಲೇ ಟೆಂಡರ್ ಪ್ರಕ್ರಿಯೆ ಅವ್ಯವಸ್ಥೆಯಿಂದಾಗಿ 4 ತಿಂಗಳು ತಡವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕೆಳ ಪರ್ಕಳ:
ಮತ್ತೆ ತಡೆಯಾಜ್ಞೆ
ಕೆೆಳ ಪರ್ಕಳದಲ್ಲಿ ತಿರುವು ರಸ್ತೆ ಇರುವುದನ್ನು ನೇರ ರಸ್ತೆಯಾಗಿ ರೂಪಿಸ ಲಾಗುತ್ತಿದ್ದು, ಈ ಕಾಮಗಾರಿ ನಡೆಯುತ್ತಿರುವ ಖಾಸಗಿ ಕಟ್ಟಡವಿರುವ ನಿರ್ದಿಷ್ಟ ಜಾಗದಲ್ಲಿ ಕಾಮಗಾರಿ ನಿರ್ವಹಿಸದಂತೆ ನ್ಯಾಯಾಲಯವು ಮತ್ತೆ ತಡೆಯಾಜ್ಞೆ ನೀಡಿದೆ. ಸೂಕ್ತ ಪರಿಹಾರ ವ್ಯವಸ್ಥೆಯನ್ನು ಮಾಡಿಲ್ಲ ಮತ್ತು ತ್ರೀಡಿ ನೋಟಿಫಿಕೇಶನ್ ಪ್ರಕ್ರಿಯೆ ವೇಳೆ ನೋಟಿಸ್ ನೀಡದೆ ಕಾಮಗಾರಿ ಕೈಗೆತ್ತಿಕೊಂಡಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಖಾಸಗಿ ಕಟ್ಟಡಕ್ಕೆ ಸಂಬಂಧ ಪಟ್ಟವರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ನ್ಯಾಯಾ ಲಯವು ಮುಂದಿನ ವಿಚಾರಣೆ ವರೆಗೆ ಖಾಸಗಿ ಕಟ್ಟಡ ವ್ಯಾಪ್ತಿಗೆ ಒಳಪಡುವ ಜಾಗದಲ್ಲಿ ಕಾಮಗಾರಿ ನಿರ್ವಹಿಸದಂತೆ ತಡೆಯಾಜ್ಞೆ ನೀಡಿದೆ. ಆ ಜಾಗವನ್ನು ಹೊರತು ಪಡಿಸಿ ಉಳಿದ ಜಾಗದಲ್ಲಿ 400 ಮೀಟರ್ ಉದ್ದದ ರಸ್ತೆ ಕಾಮಗಾರಿ, ಮಳೆ ನೀರು ಹರಿಯುವ ತೋಡಿನ ಕಾಮಗಾರಿ ಸಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.