ಹೆಜಮಾಡಿ ಬಂದರು ಪ್ರದೇಶ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ಭೇಟಿ
Team Udayavani, Jun 18, 2019, 6:02 AM IST
ಪಡುಬಿದ್ರಿ: ಬಹು ನಿರೀಕ್ಷಿತ ಹೆಜಮಾಡಿ ಮೀನುಗಾರಿಕಾ ಬಂದರು ಯೋಜನೆಯ ಅನುಷ್ಠಾನದ ನಿಟ್ಟಿನಲ್ಲಿ ವಿವಿಧ ಇಲಾಖಾಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.
ಯೋಜನೆಯ ಪ್ರಥಮ ಹಂತವಾಗಿ ಕೇಂದ್ರ ಸರಕಾರವು 13.86 ಕೋಟಿ ರೂ. ಬಿಡುಗಡೆ ಮಾಡಿದ್ದು, ಅಷ್ಟೇ ಅನುದಾನ ರಾಜ್ಯ ಸರಕಾರ ಬಿಡುಗಡೆ ಮಾಡಬೇಕಿದೆ. ಕೇಂದ್ರ ಸರಕಾರದ ಅನುದಾನದ ಮೂಲಕ ಪ್ರಥಮ ಹಂತದ ಕಾಮಗಾರಿ ನಡೆಸುವ ನಿಟ್ಟಿನಲ್ಲಿ ಕುಂದಾಪುರ ಸಹಾಯಕ ಕಮಿಶನರ್ ಮಧುಕೇಶ್ವರ್, ಬಂದರು ಮತ್ತು ಮೀನುಗಾರಿಕಾ ಅಧಿಕಾರಿ ಜಯರಾಜ್, ಉಡುಪಿ ಕೃಷಿ ಇಲಾಖಾಧಿಕಾರಿ ಮೋಹನ್ ರಾಜ್, ತೋಟಗಾರಿಕಾ ಅಧಿಕಾರಿ ಕಂದಾಯ ಪರಿವೀಕ್ಷಕ ರವಿಶಂಕರ್, ಮೀನುಗಾರಿಕಾ ಉಪ ನಿರ್ದೇಶಕ ಪಾರ್ಶ್ವನಾಥ್, ಸಹಾಯಕ ನಿರ್ದೇಶಕರಾದ ಶಿವಕುಮಾರ್ ಮತ್ತು ಕಿರಣ್, ಸರ್ವೇಯರ್ ಶಿವಣ್ಣ ಮುಂತಾದವರು ಸ್ಥಳೀಯ ಮೀನುಗಾರ ಮುಖಂಡರೊಂದಿಗೆ ಯೋಜನಾ ಸ್ಥಳಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
ಮೀನುಗಾರರ ಮುಖಂಡರಾದ ವಿಜಯ ಎಸ್. ಬಂಗೇರ ಮತ್ತು ವಿನೋದ್ ಕೋಟ್ಯಾನ್ ಇಲಾಖಾಧಿಕಾರಿ ಗಳಲ್ಲಿ ಸ್ಥಳೀಯ ಮೀನುಗಾರರ ಬಹುದಿನದ ಬೇಡಿಕೆಯಾದ ಹೆಜಮಾಡಿ ಬಂದರು ಯೋಜನೆಯನ್ನು ಆದಷ್ಟು ಶೀಘ್ರ ಅನುಷ್ಠಾನಗೊಳಿಸುವಂತೆ ವಿನಂತಿಸಿದರು.
ಬಂದರು ನಿರ್ಮಾಣ ಸ್ಥಳ ಪರಿಶೀಲನೆ ನಡೆಸಿದ್ದು, ಈ ಕೂಡಲೇ ಜಮೀನು ವರ್ಗಾವಣೆ ಪ್ರಕ್ರಿಯೆ ನಡೆಸಿ ಕೊಡುವುದಾಗಿ ಸಹಾಯಕ ಕಮೀಷನರ್ ಮಧುಕೇಶ್ವರ್ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.