Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶೀಲನೆ ಸಭೆ
Team Udayavani, Jun 18, 2024, 11:17 PM IST
ಮಣಿಪಾಲ: ಹೆಜಮಾಡಿಯಲ್ಲಿ ಬಂದರು ಕಾಮಗಾರಿ ವಿಳಂಬವಾಗುತ್ತಿದೆ. ಡ್ರಜ್ಜಿಂಗ್ ಹಾಗೂ ಬ್ರೇಕ್‌ವಾಟರ್ ಕಾಮಗಾರಿ ಮುಗಿದಿದ್ದರೂ ಭೂಸ್ವಾಧೀನ ಪ್ರಕ್ರಿಯೆ ಸರಿಯಾಗಿ ಆಗದೆ ಇರುವುದರಿಂದ ಇಡೀ ಕಾಮಗಾರಿಗೆ ಹಿನ್ನಡೆಯಾಗುತ್ತಿದೆ. ಆದ್ದರಿಂದ ತತ್‌ಕ್ಷಣವೇ ಭೂ ಸ್ವಾಧೀನ ಪ್ರಕ್ರಿಯೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಮಂಗಳವಾರ ಜರಗಿದ ಹೆಜಮಾಡಿ ಬಂದರು ಕಾಮಗಾರಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಜಮಾಡಿ ಬಂದರು ಅಭಿವೃದ್ಧಿಗೆ 188 ಕೋ. ರೂ. ಅನುದಾನ ಮಂಜೂರಾಗಿ ಶೇ.60ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಬಂದರಿನ ಭೂ ಸ್ವಾಧೀನ ಪ್ರಕ್ರಿಯೆ ಇನ್ನೂ ಆಗಿಲ್ಲ. ಹೀಗಾಗಿ ಅಧಿಕಾರಿಗಳು ಕೂಡಲೇ ಭೂ ಸ್ವಾಧೀನ ಪ್ರಕ್ರಿಯೆ ನಡೆಸಿ, ಅಲ್ಲಿರುವ ಮರಗಳನ್ನು ಕಡಿಯಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದರು.
ಅನುದಾನ ಬರುತ್ತಿರುವುದು ವಿಳಂಬವಾಗಿರುವ ಬಗ್ಗೆ ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಯಾದ ಅಜಯ್ ನಾಗಭೂಷಣ್ ಅವರಿಗೆ ಸಭೆಯಿಂದಲೇ ದೂರವಾಣಿ ಕರೆ ಮಾಡಿ, ಅನುದಾನ ಆದಷ್ಟು ಬೇಗ ಬಿಡುಗಡೆ ಮಾಡಬೇಕು. ಯಾವುದೇ ಹಣಕಾಸಿನ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಸೂಚಿಸಿದರು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್., ಸಹಾಯಕ ಆಯುಕ್ತೆ ರಶ್ಮಿ, ಕಂದಾಯ, ಬಂದರು, ಅರಣ್ಯ ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು, ಮೀನುಗಾರ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.