ಹೆಮ್ಮಾಡಿ ಮಹಿಳೆ ಕೊಲೆ: ಓರ್ವ ಸೆರೆ
Team Udayavani, Mar 12, 2019, 1:00 AM IST
ಕುಂದಾಪುರ: ಹೆಮ್ಮಾಡಿ ಸಮೀಪದ ಕಟ್‌ಬೆಲೂ¤ರಿನ ಸುಳೆÕಯ ಮನೆಯಲ್ಲಿ ಗುಲಾಬಿ (55) ಅವರನ್ನು ಕೊಲೆಗೈದ ಆರೋಪದಲ್ಲಿ ಜಡ್ಕಲ್ ಗ್ರಾಮದ ಸೆಳ್ಕೊàಡು ನಿವಾಸಿ ರವಿರಾಜ್ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಫೆ. 28ರಂದು ರಾತ್ರಿ ಗುಲಾಬಿ ಸಾವನ್ನಪ್ಪಿದ್ದು, ಮಾ. 5ರಂದು ಕೊಲೆಯೆಂದು ದೃಢಪಟ್ಟಿತ್ತು. ತನಿಖೆ ನಡೆಸಿದ ಕುಂದಾಪುರ ಪೊಲೀಸರು, ವಾರದೊಳಗೆ ಆರೋಪಿಯನ್ನು ಸಿದ್ದಾಪುರದ ಪೆಟ್ರೋಲ್ ಬಂಕ್ ಸಮೀಪದಿಂದ ಬಂಧಿಸಿದ್ದಾರೆ. ಆತ ಪರಾರಿಯಾಗಲು ಬಳಸಿದ್ದ ಕಾರನ್ನು ಕೂಡ ವಶಪಡಿಸಿಕೊಂಡಿದ್ದಾರೆ.
ಸಾಲ ತೀರಿಸಲು ಚಿನ್ನ ಕೇಳಿದ್ದ
ಆರೋಪಿಯು ಗುಲಾಬಿಯ ಮನೆ ಸಮೀಪ ಗೇರುಬೀಜ ಕಾರ್ಖಾನೆಯಲ್ಲಿ ಕೆಲಸಗಾರರಿಗೆ ಕೊಡುವ ಮನೆಯಲ್ಲಿ ವಾಸಿಸುತ್ತಿದ್ದ. ಆತ ಒಂದು ಕಾರು ಹೊಂದಿದ್ದ, ಆದರೆ ಸರಿಯಾದ ಉದ್ಯೋಗ ಇರಲಿಲ್ಲ. ಈತನ ಪತ್ನಿ ಈ ಕಾರ್ಖಾನೆಯ ಕಾರ್ಮಿಕೆಯಾಗಿದ್ದಾರೆ. ರವಿರಾಜ್ ಹಾಗೂ ಗುಲಾಬಿ 2008ರಿಂದಲೂ ಪರಿಚಿತರಾಗಿದ್ದು, ಇವರಿಬ್ಬರ ಮಧ್ಯೆ ಹಣಕಾಸಿನ ವ್ಯವಹಾರವಿತ್ತು. ಫೆ. 28ರಂದು ರಾತ್ರಿ ಗುಲಾಬಿ ಮನೆಗೆ ಬಂದ ರವಿರಾಜ್, ಸಾಲ ತೀರಿಸಲು ಗುಲಾಬಿಯ ಚಿನ್ನಾಭರಣವನ್ನು ಕೇಳಿದ್ದ. ಇದಕ್ಕೆ ಒಪ್ಪದಿದ್ದಾಗ ಟವೆಲ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಆಕೆಯ ಮೈಮೇಲಿದ್ದ 1 ಲ. ರೂ. ಮೌಲ್ಯದ 28 ಗ್ರಾಂನ ಚಿನ್ನದ ಸರ, 30 ಸಾ. ರೂ. ಮೌಲ್ಯದ 8 ಗ್ರಾಂ. ತೂಕದ ಚಿನ್ನದ ಬೆಂಡೋಲೆ 1 ಜತೆ, 15 ಸಾ. ರೂ. ಮೌಲ್ಯದ 4 ಗ್ರಾಂ. ತೂಕದ ಚಿನ್ನದ ಉಂಗುರ ಸಹಿತ ಒಟ್ಟು 1.45 ಲ. ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಚಿನ್ನಾ ಭರಣಗಳನ್ನು ಬೆಂಗಳೂರು ಹಾಗೂ ಸಿದ್ದಾಪುರದಲ್ಲಿ ಅಡವಿರಿಸಿದ್ದಾನೆ ಎಂದು ಹೆಚ್ಚುವರಿ ಎಸ್‌ಪಿ ಕುಮಾರಚಂದ್ರ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ತೆ ಹಚ್ಚಿದ ವಿಶೇಷ ತಂಡ
ಆರೋಪಿ ಪತ್ತೆಗೆ ಎಸ್‌ಪಿ ನಿಶಾ ಜೇಮ್ಸ್ ಹಾಗೂ ಹೆಚ್ಚುವರಿ ಎಸ್‌ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಬಿ.ಪಿ. ದಿನೇಶ್ ಕುಮಾರ್ ನಿರ್ದೇಶನದಂತೆ ಕುಂದಾಪುರ ಸಿಐ ಮಂಜಪ್ಪ ಡಿ.ಆರ್. ನೇತೃತ್ವದಲ್ಲಿ ಅಪರಾಧ ಪತ್ತೆ ದಳದ ಸಿಬಂದಿಯ ವಿಶೇಷ ತಂಡ ರಚಿಸಲಾಗಿತ್ತು.
ಪೊಲೀಸ್ ಕಸ್ಟಡಿ
ಆರೋಪಿಯನ್ನು ಸೋಮವಾರ ಕುಂದಾಪುರದ ಹೆಚ್ಚುವರಿ ಜೆಎಂ ಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಧೀಶ ಶ್ರೀಕಾಂತ ಎನ್.ಎ. ಅವರು 5 ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಧಿಸಿದ್ದಾರೆ. ಪ್ರಾಸಿಕ್ಯೂಶನ್ ಪರ ಸಹಾಯಕ ಸರಕಾರಿ ಅಭಿಯೋಜಕಿ ಸುಮಂಗಲಾ ನಾಯ್ಕ ವಾದಿಸಿದ್ದಾರೆ.
ಆರೋಪಿ ಪತ್ನಿಗೆ ಹಲ್ಲೆ
ಆರೋಪಿಯನ್ನು ಸೋಮವಾರ ಮಧ್ಯಾಹ್ನ ಸ್ಥಳ ಮಹಜರು ನಡೆಸಲು ಮೃತರ ಮನೆಗೆ ಕರೆ ತಂದಾಗ ಅಲ್ಲಿಗೆ ಬಂದಿದ್ದ ಆರೋಪಿ ಪತ್ನಿ ಮೇಲೆ ಗುಲಾಬಿ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ. ಬಳಿಕ ಪೊಲೀಸರು ಹಾಗೂ ಸ್ಥಳೀಯರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.