ಹಿಜಾಬ್ ವಿವಾದ ಸೃಷ್ಟಿಯಾಗಿದ್ದ ಉಡುಪಿ ಸ. ಬಾಲಕಿಯರ ಪಿಯು ಕಾಲೇಜಿನಲ್ಲಿ ದಾಖಲೆಯ ದಾಖಲಾತಿ
Team Udayavani, Jun 10, 2022, 7:20 AM IST
ಉಡುಪಿ: ಹಿಜಾಬ್ ವಿವಾದ ಸೃಷ್ಟಿಯಾಗಿ ದೇಶಾದ್ಯಂತ ದೊಡ್ಡ ಮಟ್ಟದ ಸುದ್ದಿ ಮಾಡಿರುವ ಉಡುಪಿಯ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು 2022- 23ನೇ ಸಾಲಿನಲ್ಲಿ ದಾಖಲೆಯ ದಾಖಲಾತಿ ಕಾಣುತ್ತಿದೆ.
ನಿಯಮ ಮೀರಿ ಹಿಜಾಬ್ ಧರಿಸಿ ಕೊಂಡು ಬಂದ ವಿದ್ಯಾರ್ಥಿನಿಯರಿಂದ ಸೃಷ್ಟಿಯಾದ ಹಿಜಾಬ್ ವಿವಾದ ಈಗ ಸುಪ್ರೀಂ ಕೋರ್ಟ್‌ನಲ್ಲಿದೆ. ವಿವಾದ ಸೃಷ್ಟಿಯಾದ ಅನಂತರ ರಾಜ್ಯ ಸರಕಾರ ಕೂಡ ಸಮವಸ್ತ್ರಕ್ಕೆ ಸಂಬಂಧಿಸಿದ ನಿಯಮವನ್ನು ಜಾರಿಗೆ ಮಾಡಿದೆ. ಜೂನ್ 15ರ ವರೆಗೂ ದಾಖಲಾತಿ ನಡೆಯಲಿದೆ. ಆದರೆ ಈಗಾಗಲೇ ನಿರೀಕ್ಷೆಗೂ ಮೀರಿ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.
ವಾಣಿಜ್ಯ ವಿಭಾಗಕ್ಕೆ ಬೇಡಿಕೆ :
ಕಲಾ ವಿಭಾಗಕ್ಕೆ 65 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗ ಬಿಜಿನೆಸ್ ಸ್ಟಡೀಸ್, ಅಕೌಂಟೆನ್ಸಿ, ಅರ್ಥಶಾಸ್ತ್ರ ಇತ್ಯಾದಿ ವಿಭಾಗಕ್ಕೆ 68, ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್‌ಗೆ 40, ರಾಜ್ಯಶಾಸ್ತ್ರಕ್ಕೆ 16, ಸಮಾಜ ಶಾಸ್ತ್ರಕ್ಕೆ 20 ಒಟ್ಟಾರೆಯಾಗಿ ವಾಣಿಜ್ಯ ವಿಭಾಗಕ್ಕೆ 144 ಮಂದಿ ದಾಖಲಾಗಿ ದ್ದಾರೆ. ವಿಜ್ಞಾನ ವಿಭಾಗದಲ್ಲಿ 142
ಮಂದಿ ಸೇರಿದಂತೆ ಜೂನ್ 9ರ ವರೆಗೆ ಒಟ್ಟು 354 ಮಂದಿ ದಾಖಲಾಗಿದ್ದಾರೆ. ಇನ್ನೂ ಒಂದು ವಾರ ಕಾಲ ದಾಖಲಾತಿ ಪ್ರಕ್ರಿಯೆ ನಡೆಯುವುದರಿಂದ ವಿದ್ಯಾರ್ಥಿಗಳ ಸಂಖ್ಯೆ 400ಕ್ಕೆ ಏರುವ ನಿರೀಕ್ಷೆಯಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರೊಬ್ಬರು ಮಾಹಿತಿ ನೀಡಿದರು.
ಯಾರನ್ನೂ ನಿರಾಕರಿಸುವಂತಿಲ್ಲ :
ಸರಕಾರಿ ಕಾಲೇಜಾಗಿದ್ದರಿಂದ ಪ್ರವೇಶ ಬಯಸಿ ಯಾರೇ ಬಂದರೂ ನಿರಾಕರಿಸುವಂತಿಲ್ಲ. ಕಳೆದ ವರ್ಷ ಅಂತಿಮವಾಗಿ 340 ವಿದ್ಯಾರ್ಥಿಗಳಿಗೆ ವಿವಿಧ ವಿಭಾಗದಲ್ಲಿ ಅವಕಾಶ ನೀಡಲಾಗಿತ್ತು. ಮೆರಿಟ್ ಆಧಾರದಲ್ಲಿ ಸರಕಾರದ ನಿಯಮದಂತೆ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಾಲೇಜಿನ ಪ್ರಾಧ್ಯಾಪಕರೊಬ್ಬರು ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಂದ ಮುಚ್ಚಳಿಕೆ :
ಎಲ್ಲ ವಿದ್ಯಾರ್ಥಿಗಳು ಮತ್ತು ಪಾಲಕರಿಂದ, “ಯಾವುದೇ ಕಾರಣಕ್ಕೂ ನಿಯಮ ಮೀರಿ ವರ್ತಿಸುವುದಿಲ್ಲ ಹಾಗೂ ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸುತ್ತೇವೆ’ ಎಂದು ಮುಚ್ಚಳಿಕೆ ಪಡೆದುಕೊಳ್ಳಲಾಗುತ್ತಿದೆ.
ನಮ್ಮ ಕಾಲೇಜು ಸೇರಲು ವಿದ್ಯಾರ್ಥಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. 350ಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ದಾಖಲಾತಿ ಪಡೆದಿದ್ದಾರೆ. ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡುವ ಬಗ್ಗೆ ದಾಖಲಾತಿಯ ಸಂದರ್ಭದಲ್ಲೇ ಸೂಚನೆ ನೀಡುತ್ತಿದ್ದೇವೆ.– ರುದ್ರೇಗೌಡ, ಪ್ರಾಂಶುಪಾಲ, ಬಾಲಕಿಯರ ಪಿಯು ಕಾಲೇಜು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.