![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Mar 16, 2022, 12:28 PM IST
ಕಾಪು: ತರಗತಿಯಲ್ಲಿ ಹಿಜಾಬ್ ಧರಿಸುವುದಕ್ಕೆ ಅವಕಾಶವಿಲ್ಲ ಎಂಬ ಹೈಕೋರ್ಟ್ ಆದೇಶದ ಬಳಿಕವೂ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿದಿದೆ.
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 9 ಮಂದಿ ವಿದ್ಯಾರ್ಥಿನಿಯರು ಬುಧವಾರ ಬೆಳಗ್ಗೆ ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಆಗಮಿಸಿದ್ದು ಪ್ರಾಂಶುಪಾಲರು ಹಿಜಾಬ್ ಸಹಿತವಾಗಿ ತರಗತಿ ಪ್ರವೇಶಿಸಲು ಅವಕಾಶವಿಲ್ಲ ಎಂದು ತಿಳಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿನಿಂದ ಹಿಂತೆರಳಿದ್ದಾರೆ.
ಹಿಜಾಬ್ ವಿವಾದದ ಬಳಿಕ ಒಂದು ತಿಂಗಳಿನಿಂದ ತರಗತಿ ಮಿಸ್ ಮಾಡಿಕೊಂಡಿದ್ದ ವಿದ್ಯಾರ್ಥಿನಿಯರು ಬುಧವಾರ ಬೆಳಗ್ಗೆ ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಆಗಮಿಸಿದ್ದರು. ಆದರೆ ಹಿಜಾಬ್ ಧರಿಸಿಕೊಂಡು ಪ್ರವೇಶಕ್ಕೆ ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗದೇ ಹಿಂತೆರಳಿದ್ದಾರೆ.
ಇದನ್ನೂ ಓದಿ: ಹಿಜಾಬ್ ವಿವಾದ: ಚಿಕ್ಕಮಗಳೂರಿನಲ್ಲಿ 22ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕಾರ
ಕಾಲೇಜಿನಲ್ಲಿ 17 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿದ್ದು ಇವರ ಪೈಕಿ ನಾಲ್ಕು ಮಂದಿ ಹಿಜಾಬ್ ತೆಗೆದು ತರಗತಿಗೆ ಹಾಜರಾಗಿದ್ದು, 9 ಮಂದಿ ಹಿಜಾಬ್ ತೆಗೆಯಲು ನಿರಾಕರಿಸಿ, ತರಗತಿ ಬಹಿಷ್ಕರಿಸಿ ಹಿಂದೆ ತೆರಳಿದ್ದಾರೆ.
ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರನ್ನು ಮನವೊಲಿಸಲು ಪ್ರಯತ್ನಿಸಲಾಯಿತಾದರೂ, ಯಾವುದಕ್ಕೂ ಒಪ್ಪದ ಕಾರಣ ಅವರಿಗೆ ತರಗತಿ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಅನಿಲ್ ಕುಮಾರ್ ತಿಳಿಸಿದ್ದಾರೆ.
ಹಿಜಾಬ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಪರೀಕ್ಷೆಯೂ ಬೇಕು, ಹಿಜಾಬ್ ಕೂಡಾ ಬೇಕು. ಹಿಜಾಬ್ ಬಗ್ಗೆ ಹಿಂದಿನಿಂದ ಇರದ ಸಮಸ್ಯೆ ಈಗ ಕಾಣಿಸಿಕೊಂಡಿರುವುದು ಬೇಸರ ಮೂಡಿಸಿದೆ. ಪ್ರಾಂಶುಪಾಲರು ನಮಗೆ ನ್ಯಾಯ ದೊರಕಿಸಿಕೊಡುತ್ತಾರೆಂಬ ನಿರೀಕ್ಷೆಯಲ್ಲಿದ್ದೇವೆ ಎಂದು ವಿದ್ಯಾರ್ಥಿನಿಯರಾದ ರಿಜಾನಾ ಮತ್ತು ಶೆಹನಾಜ್ ತಿಳಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.