ಉಡುಪಿ: ಬೈಲಕೆರೆಯಲ್ಲಿ ಹಿಜಾಬ್ ಪರ ಗೋಡೆ ಬರಹ: ಪ್ರಕರಣ ದಾಖಲು
Team Udayavani, Mar 17, 2022, 9:32 PM IST
ಉಡುಪಿ: ಹಿಜಾಬ್ ಪರವಾಗಿ ಕೆಲವೊಂದು ಕಿಡಿಗೇಡಿಗಳು ವಿವಾದಾಸ್ಪದವಾದ ಗೋಡೆ ಬರಹವನ್ನು ಮಲ್ಪೆ ಸಮೀಪದ ಬೈಲಕೆರೆ ಎಂಬಲ್ಲಿ ಬರೆದಿರುವುದು ಗುರುವಾರ ಪತ್ತೆಯಾಗಿದ್ದು ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ್ಯಾಯಾಲಯ ಹಿಜಾಬ್ ವಿರುದ್ಧ ಆದೇಶ ನೀಡಿದ ಬೆನ್ನಲ್ಲೇ ಮಲ್ಪೆ ಸಮೀಪದ ಬೈಲಕೆರೆ ಎಂಬಲ್ಲಿ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಹಿಜಾಬ್ ಪರವಾಗಿ ಗೋಡೆ ಬರಹ ಪತ್ತೆಯಾಗಿದ್ದು, ಮಾಹಿತಿ ತಿಳಿದು ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುವವರನ್ನು ಬಂಧಿಸುವಂತೆ ಆಗ್ರಹಿಸಿದರು.
ಸ್ಥಳಕ್ಕೆ ಕೂಡಲೇ ಭೇಟಿ ನೀಡಿದ ವೃತ್ತ ನಿರೀಕ್ಷಕ ಶರಣಬಸವ ಪಾಟೀಲ್ ಹಾಗೂ ಮಲ್ಪೆ ಠಾಣಾಧಿಕಾರಿ ಸಕ್ತಿವೇಲು ಹಿಂದೂ ಕಾರ್ಯಕರ್ತರ ಮನವೊಲಿಸಿ ಸ್ಥಳದಿಂದ ತೆರಳುವಂತೆ ಮನವೊಲಿಸಿದರು.
ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.