ಹಿಂದುತ್ವದ ಶಕ್ತಿ ಮೈಗೂಡಿಸಿಕೊಳ್ಳಬೇಕು: ಕೇಶವಮೂರ್ತಿ
Team Udayavani, Apr 13, 2017, 4:50 PM IST
ಕುಂದಾಪುರ: ಕಳೆದ ಹಲವು ವರ್ಷಗಳಿಂದ ಹಿಂದೂ ಸಮಾಜದ ಮೇಲೆ ನಿರಂತರವಾಗಿ ಅಕ್ರಮಣಗಳು, ಅನ್ಯಾಯ, ದೌರ್ಜನ್ಯ ಹೆಚ್ಚಾಗುತ್ತಿದೆ. ಇದನ್ನು ತಡೆಯಬೇಕಾದರೆ ಹಿಂದುತ್ವದ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡು ಹಿಂದುತ್ವದ ಶಕ್ತಿ ಮೈಗೂಡಿಸಿಕೊಳ್ಳ ಬೇಕು. ಭಾರತದ ಶ್ರೇಷ್ಠತೆ, ಹಿಂದುತ್ವದ ಶ್ರೇಷ್ಠತೆಯನ್ನು ಮನಗಾಣಬೇಕು.
ಹಿಂದುತ್ವದ ಬಗ್ಗೆ ಗೌರವ, ಭಕ್ತಿ ಬಂದಾಗ ನಮ್ಮನ್ನು ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ದೊ. ಕೇಶವಮೂರ್ತಿ ಹೇಳಿದರು.
ಅವರು ಗಂಗೊಳ್ಳಿಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವ ಸ್ಥಾನದ ವಠಾರದಲ್ಲಿ ಜರಗಿದ 505 ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿ ಮಾತನಾಡಿದರು.
ಸ್ವಾತಂತ್ರಾÂನಂತರದ ಹಿಂದುತ್ವವನ್ನು ಅಲುಗಾಡಿಸುವ ಪ್ರಯತ್ನ ನಡೆಯುತ್ತಿದೆ. ಗೋಮಾತೆ ಹಿಂದುಗಳಿಗೆ ಶ್ರದ್ಧೆ. ಅಕ್ರಮ ಗೋಸಾಗಾಟ, ಗೋಹತ್ಯೆ ವಿರುದ್ಧ ಹಿಂದು ಜಾಗರಣ ವೇದಿಕೆ ಹೋರಾಟ ನಡೆಸಲಿದೆ. ಮತಾಂತರದ ಪಿಡುಗು ಹೆಚ್ಚಾಗುತ್ತಿದ್ದು, ಹಿಂದು ಧರ್ಮದ ಅನೇಕರನ್ನು ಈ ಬಲೆಗೆ ಬೀಳಿಸಲಾಗುತ್ತಿದೆ. ಮತಾಂತರ, ಲವ್ ಜಿಹಾದ್, ಅನ್ಯಾಯ, ಆಕ್ರಮಣದ ವಿರುದ್ಧ ಹಿಂದೂ ಜಾಗರಣ ವೇದಿಕೆ ಸದಾ ಹೋರಾಟ ನಡೆಸಲಿದೆ ಎಂದು ಅವರು ಹೇಳಿದರು.
ಆಶೀರ್ವಚನ ನೀಡಿ ಮಾತನಾಡಿದ ಕಾಸರಗೋಡು ಕೊಂಡೆವೂರು ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಧರ್ಮ ಮತ್ತು ದೇಶವನ್ನು ಉಳಿಸಿಕೊಳ್ಳಲು ಹಿಂದು ಸಮಾಜ ಬಾಂಧವರು ಒಗ್ಗಟ್ಟಿನಿಂದ ಪ್ರಯತ್ನಿಸಬೇಕು. ಹಿಂದುತ್ವದ ಜಾಗೃತಿ ಆಗಬೇಕು. ಹಿಂದುತ್ವವನ್ನು ದುರ್ಬಲ ಗೊಳಿಸುವುದರ ಬಗ್ಗೆ ಎಚ್ಚರ ವಹಿಸಬೇಕು. ಸಂಸ್ಕೃತಿ, ಸಂಸ್ಕಾರಗಳನ್ನು ರಕ್ಷಣೆ ಮಾಡಬೇಕು. ದೇಶದಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಶಕ್ತಿ ತುಂಬುವ ವಾತಾವರಣ ನಿರ್ಮಾಣವಾಗಬೇಕು. ಭಗವಂತನ ಆರಾಧನೆ, ನಾಮಸ್ಮರಣೆ ಮಾಡಿದರೆ ಸಮಾಜದಲ್ಲಿ ಶಾಂತಿ ಸಮಾಧಾನ ನೆಲೆಸುತ್ತದೆ ಎಂದು ಹೇಳಿದರು.
ಶಿವಮೊಗ್ಗದ ಉದ್ಯಮಿ ರವೀಂದ್ರ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಟ್ಯಾಕ್ಸಿಮೆನ್ ಅಸೋಸಿಯೇಶನ್‌ನ ಅಧ್ಯಕ್ಷ ಮಹಾಬಲ ಬಿ. ಪೂಜಾರಿ, ಗಂಗೊಳ್ಳಿ ನಿನಾದ ಸಂಸ್ಥೆಯ ಅಧ್ಯಕ್ಷ ಎಂ. ಮುಕುಂದ ಪೈ, ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಸುಂದರ ಜಿ., ಉದ್ಯಮಿ ನಾಗರಾಜ ಪಂಡಿತ್, ಶ್ರೀ ಗುರುಜ್ಯೋತಿ ನ್ಪೋರ್ಟ್ಸ್ ಕ್ಲಬ್‌ನ ಸ್ಥಾಪಕ ಸದಸ್ಯ ವಿಜಯ ಖಾರ್ವಿ, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಅರವಿಂದ ಕೋಟೇಶ್ವರ, ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕು ಅಧ್ಯಕ್ಷ ರವೀಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಗಂಗೊಳ್ಳಿ ಹಿಂಜಾವೇ ಅಧ್ಯಕ್ಷ ಗೋವಿಂದ್ರಾಯ ಶೇರುಗಾರ್ ಸ್ವಾಗತಿಸಿದರು. ಹಿಂಜಾವೇ ಉಡುಪಿ ಜಿಲ್ಲಾ ಸಹಸಂಚಾಲಕ ಟಿ. ವಾಸುದೇವ ದೇವಾಡಿಗ ಪ್ರಾಸ್ತಾವಿಕ ಮಾತುಗಳ ನ್ನಾಡಿದರು. ಯಶವಂತ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.