ಹಿರ್ಗಾನ: ಅಭಿವೃದ್ಧಿ ಕಾಣದ ಹರಿಯಪ್ಪ ಕೆರೆ
Team Udayavani, Mar 12, 2019, 1:00 AM IST
ಅಜೆಕಾರು: ಹಿರ್ಗಾನ ಗಾ.ಪಂ. ವ್ಯಾಪ್ತಿಯ ಪ್ರಾಚೀನ ಹರಿಯಪ್ಪ ಕೆರೆಯು ಸೂಕ್ತ ನಿರ್ವಹಣೆಯಿಲ್ಲದೆ ಹೂಳು ತುಂಬಿ ಮೈದಾನದಂತಾಗಿದೆ.
ಹಿಂದೆ ಬೇಸಗೆಯಲ್ಲಿಯೂ ಸಮೃದ್ಧ ನೀರಿನಿಂದ ತುಂಬಿರುತ್ತಿದ ಕೆರೆ ಇತ್ತೀಚಿನ ವರ್ಷಗಳಲ್ಲಿ ಬೇಸಗೆಗೂ ಮುನ್ನವೇ ನೀರು ಬರಿದಾಗಿ ಆಟದ ಮೈದಾನದಂತಾಗುತ್ತಿದೆ.
ಕೆರೆಯಲ್ಲಿ ತುಂಬಿ ಹೋಗಿರುವ ಹೂಳನ್ನು ತೆಗೆದಲ್ಲಿ ಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಆಗುವ ಜತೆಗೆ ಪರಿಸರದ ಕೃಕರಿಗೂ ಅನುಕೂಲವಾಗಲಿದೆ.
ಪಂಚಾಯತ್ ವ್ಯಾಪ್ತಿಯ ಮಂಗೀ ಲಾರು, ನೆಲ್ಲಿಕಟ್ಟೆ, ಶಿವನಗರಗಳಲ್ಲಿ ಪ್ರತಿ ವರ್ಷ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತಿದ್ದು ನೀರು ಒದಗಿಸಲು ಪಂಚಾಯತ್ ಆಡಳಿತ ಹರಸಾಹಸ ಪಡುವಂತಾಗಿದೆ.
ಪಂಚಾಯತ್ ವ್ಯಾಪ್ತಿಯಲ್ಲಿ ಹರಿಯಪ್ಪ ಕೆರೆ ಬಿಟ್ಟರೆ ಬೇರೆ ಯಾವುದೇ ರೀತಿಯ ನೀರಿನ ಮೂಲಗಳಿಲ್ಲ.
ಕುಡಿಯುವ ನೀರು ಒದಗಿಸಲು ಕೊಳವೆ ಬಾಯನ್ನೇ ಅವಲಂಬಿಸಲಾಗಿದ್ದು ಈಗ ಅದರಲ್ಲಿಯೂ ನೀರಿನ ಮಟ್ಟ ತೀವ್ರ ಕುಸಿತಗೊಂಡಿದ್ದು ಬೇಸಗೆಯಲ್ಲಿ ಕುಡಿಯುವ ನೀರು ಒದಗಿಸುವುದು ಪಂಚಾಯತ್‌ಗೆ ಸವಾಲಾಗಿ ಪರಿಣಮಿಸಿದೆ.
ಹಿರ್ಗಾನ ಮೂರೂರಿನ ದುಗ್ಗಣ್ಣ ರಾಯ ವಠಾರದಲ್ಲಿ ಸುಮಾರು 1 ಎಕ್ರೆ ಜಾಗದಲ್ಲಿರುವ ಈ ಕೆರೆಯು ಶತಶತಮಾನಗಳಿಂದ ಸುತ್ತಲಿನ ಕೃ ಭೂುಗೆ ನೀರು ಒದಗಿಸುತ್ತಿತ್ತು.
ಜಲಮಟ್ಟ ವರ್ಷದಿಂದ ವರ್ಷಕ್ಕೆ ಕುಸಿತ
1975ರ ವರೆಗೆ ಈ ಕೆರೆಯ ನೀರನ್ನೇ ಬಳಸಿ ನೆಲ್ಲಿಕಟ್ಟೆ, ಕಂಬÛಪಲ್ಕೆ, ರಾಜೀವನಗರ, ಬೆದ್ರ್ ಮಾರ್ ಮುಂತಾದ ಪರಿಸರದಲ್ಲಿ ಭತ್ತ ಬೆಳೆಯಲಾಗುತ್ತಿತ್ತು. ಅನಂತರದ ದಿನಗಳಲ್ಲಿ ಕೆರೆಯಲ್ಲಿ ಹೂಳು ತುಂಬಿ ನೀರು ನಿಲ್ಲಲು ಅವಕಾಶವಿಲ್ಲದೆ ಜಲಮಟ್ಟ ವರ್ಷದಿಂದ ವರ್ಷಕ್ಕೆ ಕುಸಿದು ಈಗ ಬೇಸಗೆಯಲ್ಲಿ ನೀರೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕೆರೆಯಲ್ಲಿ ನೀರಿನಾಶ್ರಯ ಇಲ್ಲದೆ ಇರುವುದರಿಂದ ಕೃಷಿಗೆ ಬೇಕಾದ ನೀರಿನ ವ್ಯವಸ್ಥೆ ಇಲ್ಲದೆ ವರ್ಷಕ್ಕೆ 2 ಬೆಳೆ ಬೆಳೆಯುತ್ತಿದ್ದ ಭತ್ತದ ಗದ್ದೆಗಳು ಈಗ ಪಾಳುಬಿದ್ದಿವೆ.
ಪಂಚಾಯತ್ ವ್ಯಾಪ್ತಿಯಲ್ಲಿ ಹೊಸದಾಗಿ ತೆರೆದ ಬಾವಿ, ಕೊಳವೆ ಬಾವಿ ನಿರ್ಮಾಣ ಮಾಡುವ ಬದಲಿಗೆ ಜಲಮೂಲವಿರುವ ಪ್ರಾಚೀನ ಕೆರೆಯನ್ನು ಅಭಿವೃದ್ಧಿಪಡಿಸಿದಲ್ಲಿ ಪಂಚಾಯತ್ ವ್ಯಾಪ್ತಿಗೆ ಬೇಕಾದಷ್ಟು ನೀರು ದೊರೆತು ಕುಡಿಯುವ ನೀರಿನ ಸಮಸ್ಯೆ ನೀಗಲಿದೆ ಎಂಬುದು ಸ್ಥಳೀಯರ ಅಭಿಪ್ರಾಯ.
ಈ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸಿ ಸರಕಾರದ ಧ ಯೋಜನೆಗಳ ಮೂಲಕ ಕೆರೆ ಅಭಿವೃದ್ಧಿ ಪಡಿಸಬೇಕು ಎಂದು ಸ್ಥಳಿಯರು ಮನ ಮಾಡಿದ್ದಾರೆ.
ಅಭಿವೃದ್ಧಿಗೆ ಚಿಂತನೆ
ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಯೋಗ ಖಾತರಿ ಯೋಜನೆಯಡಿ ಮಾಡಬೇಕು ಎಂಬ ಸರಕಾರದ ಸೂಚನೆ ಇರುವುದರಿಂದ ಈ ಕೆರೆ ಅಭಿವೃದ್ಧಿ ಪಡಿಸಲು ಸಾಧ್ಯವೇ ಎಂಬ ಬಗ್ಗೆ ಚಿಂತನೆ ಮಾಡಲಾಗುವುದು.
-ಸಂಧ್ಯಾ ಶೆಟ್ಟಿ, ಪಿಡಿಒ, ಹಿರ್ಗಾ ನ ಗ್ರಾ.ಪಂ.
ಹೆಚ್ಚಿನ ಅನುದಾನ ಅಗತ್ಯ
ಪಂಚಾಯತ್‌ನ ಸೀಮಿತ ಅನುದಾನದಲ್ಲಿ ಕೆರೆಯನ್ನು ಅಭಿವೃದ್ಧಿಪಡಿಸಲು ಅಸಾಧ್ಯವಾಗಿದೆ. ರಾಜ್ಯ ಹಾಗೂ ಕೇಂದ್ರ ಸರಕಾರಗಳು ವಿಶೇಷ ಅನುದಾನ ಒದಗಿಸಿದಲ್ಲಿ ಕೆರೆ ಅಭಿವೃದ್ಧಿಪಡಿಸಿ ಕುಡಿಯುವ ನೀರಿನ ಸಮಸ್ಯೆ ಮುಕ್ತಿಗೊಳಿಸಬಹುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳ ಗಮನ ಸೆಳೆಯಲಾಗಿದೆ.
– ಸಂತೋಷ್ ಕುಮಾರ್ ಶೆಟ್ಟಿ, ಅಧ್ಯಕ್ಷರು, ಹಿರ್ಗಾನ ಗ್ರಾ.ಪಂ.
– ಜಗದೀಶ್ ರಾವ್ ಅಂಡಾರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.