ಕೃಷಿ ಭೂಮಿಗೆ ಹರಿಯುತ್ತಿಲ್ಲ ಹರಿಯಪ್ಪ ಕೆರೆಯ ನೀರು


Team Udayavani, May 29, 2018, 6:15 AM IST

2405ajke01.jpg

ಅಜೆಕಾರು: ಹಿರ್ಗಾನ ಪಂಚಾಯತು ವ್ಯಾಪ್ತಿಯ ಪ್ರಾಚೀನ ಹರಿಯಪ್ಪ ಕೆರೆಯು ಸೂಕ್ತ ನಿರ್ವಹಣೆಯಿಲ್ಲದೆ ಹೂಳು ತುಂಬಿ ಮೈದಾನದಂತಾಗಿದೆ. ಹಿರ್ಗಾನ ಮೂರೂರಿನ ದುಗ್ಗಣ್ಣರಾಯ ವಠಾರದಲ್ಲಿ ಸುಮಾರು 1 ಎಕ್ರೆ ಜಾಗದಲ್ಲಿರುವ ಈ ಕೆರೆಯು ಶತಶತಮಾನಗಳಿಂದ ಸುತ್ತಲಿನ ಕೃಷಿ ಭೂಮಿಗೆ ನೀರು ಒದಗಿಸುತ್ತಿತ್ತು.

20 ಅಡಿ ಹೂಳು 
ಕೆರೆಯು 25ರಿಂದ 30 ಅಡಿಗಳಷ್ಟು ಆಳ ಹೊಂದಿದೆ ಎಂದು ಸ್ಥಳೀಯರು ಹೇಳುತ್ತಿದ್ದು ಇದೀಗ ಕೇವಲ 5 ಅಡಿಗಳಷ್ಟು ಮಾತ್ರ ಆಳ ಕಾಣುತ್ತಿದ್ದು ಉಳಿದ 20 ಅಡಿಗಳಷ್ಟು ಹೂಳಿನಿಂದ ತುಂಬಿ ಹೋಗಿದೆ. ಇದರಿಂದ ಕೆರೆಯಲ್ಲಿ ನೀರು ಹಿಡಿಯದಂತಾಗಿದ್ದು, ಕೃಷಿ, ನೀರಾವರಿ ಕೆಲಸಕ್ಕೆ ಬಾರದಂತಾಗಿದೆ. 

1975ರ ವರೆಗೆ ಈ ಕೆರೆಯ ನೀರನ್ನೇ ಬಳಸಿ ನೆಲ್ಲಿಕಟ್ಟೆ, ಕಂಬÛಪಲ್ಕೆ, ರಾಜೀವನಗರ, ಬೆದ್ರ್ಮಾರ್‌ ಮುಂತಾದ ಪರಿಸರದಲ್ಲಿ ಭತ್ತ ಬೆಳೆಯಲಾಗುತ್ತಿತ್ತು. ನಂತರದ ದಿನಗಳಲ್ಲಿ ಕೆರೆಯಲ್ಲಿ ಹೂಳು ತುಂಬಿ ನೀರು ನಿಲ್ಲಲು ಅವಕಾಶವಿಲ್ಲದೆ ಜಲಮಟ್ಟ ವರ್ಷದಿಂದ ವರ್ಷಕ್ಕೆ ಕುಸಿದು ಈಗ ಬೇಸಿಗೆಯಲ್ಲಿ ನೀರೆ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕೆರೆಯಲ್ಲಿ ನೀರಿನಾಶ್ರಯ ಇಲ್ಲದೆ ಇರುವುದರಿಂದ ಕೃಷಿಗೆ ಬೇಕಾದ ನೀರಿನ ವ್ಯವಸ್ಥೆ ಇಲ್ಲದೆ ವರ್ಷಕ್ಕೆ 2 ಬೆಳೆ ಬೆಳೆಯುತ್ತಿದ್ದ ಭತ್ತದ ಗದ್ದೆಗಳು ಈಗ ಪಾಳುಬಿದ್ದಿವೆ.

ಕುಡಿಯುವ ನೀರಿಗೆ ಶಾಶ್ವತ ಪರಿಹಾರ
ಈ ಕೆರೆಯ ಹೂಳೆತ್ತಿ ಅಭಿವೃದ್ಧಿಪಡಿಸಿದಲ್ಲಿ ಹಿರ್ಗಾನ ಪಂಚಾಯತ್‌ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಪಂಚಾಯತು ವ್ಯಾಪ್ತಿಯಲ್ಲಿ ಹೊಸದಾಗಿ ತೆರೆದ ಬಾವಿ, ಕೊಳವೆ ಬಾವಿ ನಿರ್ಮಾಣ ಮಾಡುವ ಬದಲಿಗೆ ಜಲಮೂಲವಿರುವ ಪ್ರಾಚೀನ ಕೆರೆಯನ್ನು ಅಭಿವೃದ್ಧಿಪಡಿಸಿದಲ್ಲಿ ಪಂಚಾಯತು ವ್ಯಾಪ್ತಿಗೆ ಬೇಕಾದಷ್ಟು ನೀರು ದೊರೆತು ಕುಡಿಯುವ ನೀರಿನ ಸಮಸ್ಯೆ ನೀಗಲಿದೆ ಎಂಬುದು ಸ್ಥಳೀಯರ ಅಭಿಪ್ರಾಯ.

ವಿಶೇಷ ಅನುದಾನ ಅಗತ್ಯ
ಹೂಳೆತ್ತಿ ಕೆರೆ ಅಭಿವೃದ್ಧಿಪಡಿಸಲು ಬಹಳಷ್ಟು ಅನುದಾನ ಬೇಕಾಗಿದ್ದು ರಾಜ್ಯ ಹಾಗೂ ಕೇಂದ್ರ ಸರಕಾರ ವಿಶೇಷ ಅನುದಾನ ನೀಡಿದಲ್ಲಿ ಕೆರೆ ಅಭಿವೃದ್ಧಿಪಡಿಸಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಶಾಸಕರ ಹಾಗೂ ಸಂಸದರ ಗಮನಸೆಳೆಯಲಾಗುವುದು.
– ಸಂತೋಷ್‌ ಕುಮಾರ್‌ ಶೆಟ್ಟಿ, ಹಿರ್ಗಾನ ಗ್ರಾ.ಪಂ. ಅಧ್ಯಕ್ಷರು

ಪಾಳುಬಿದ್ದ ಕೃಷಿಭೂಮಿ
ಹರಿಯಪ್ಪ ಕೆರೆಯ ನೀರು ಕಾಲುವೆ ಮೂಲಕ ಕೃಷಿ ಭೂಮಿಗೆ ಹರಿದು ಸ್ಥಳೀಯರು ಭತ್ತದ ಬೆಳೆ ಬೆಳೆಯುತ್ತಿದ್ದರು. ಆದರೆ ಕೆರೆಯ ನಿರ್ವಹಣೆಯಿಲ್ಲದೆ ನೀರಿನಮಟ್ಟ ಕುಸಿದು ಕೃಷಿಭೂಮಿ ಪಾಳುಬಿದ್ದಿದೆ. ಕೆರೆ ಅಭಿವೃದ್ಧಿಗೊಂಡಲ್ಲಿ ಬೇಸಗೆಯ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರವಾಗವಹುದು.
– ತಾರಾನಾಥ ಶೆಟ್ಟಿ, ಕೃಷಿಕರು

– ಜಗದೀಶ್‌ ರಾವ್‌ ಅಜೆಕಾರು

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.