ಹಿರ್ಗಾನ: ಹರಿಯಪ್ಪ ಕೆರೆಯ ಹೂಳೆತ್ತುವ ಕಾಮಗಾರಿ ಆರಂಭ
Team Udayavani, Jun 7, 2019, 6:10 AM IST
ಹೆಬ್ರಿ: ಪುರಾತನ ಹರಿಯಪ್ಪ ಕೆರೆಯು ಸೂಕ್ತ ನಿರ್ವಹಣೆಯಿಲ್ಲದೆ ಹಲವು ದಶಕಗಳಿಂದ ಹೂಳು ತುಂಬಿ ನೀರು ನಿಲ್ಲದಂತಹ ಸ್ಥಿತಿ ನಿರ್ಮಾಣವಾಗಿತ್ತು. ಸುಮಾರು 25 ಅಡಿಗಳಷ್ಟು ಆಳವಾಗಿರುವ ಈ ಕೆರೆಯಲ್ಲಿ ಸಂಪೂರ್ಣ ಹೂಳು ತುಂಬಿದ್ದು ಈ ಬೇಸಗೆಯಲ್ಲಿ ಹನಿ ನೀರು ಇಲ್ಲದಂತಾಗಿತ್ತು.
ಹಿಂದೆ ಹಿರ್ಗಾನ ಪರಿಸರದ ಭತ್ತದ ಗದ್ದೆಗಳಿಗೆ ನೀರು ಒದಗಿಸುತ್ತಿದ್ದ ಈ ಕೆರೆಯಲ್ಲಿ ಹೂಳು ತುಂಬಿರುವ ಹಾಗೂ ಕೆರೆ ಅಭಿವೃದ್ಧಿಪಡಿಸಿದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದೆಂಬ ಬಗ್ಗೆ ಪತ್ರಿಕೆಯು ನಿರಂತರ ಸಚಿತ್ರ ವರದಿ ಪ್ರಕಟಿಸಿತ್ತು.
1 ಎಕ್ರೆ ಜಾಗದ ವಿಸ್ತೀರ್ಣದಲ್ಲಿರುವ ಈ ಕೆರೆಯು ಸಂಪೂರ್ಣ ಅಭಿವೃದ್ಧಿಗೊಂಡಲ್ಲಿ ಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗುವ ಜತೆಗೆ ಪರಿಸರದ ಕೃಷಿಕರಿಗೂ ಹೆಚ್ಚಿನ ಅನುಕೂಲವಾಗಲಿದೆ. ಇದೀಗ 1 ಲಕ್ಷ ರೂ. ವೆಚ್ಚದಲ್ಲಿ ಅಲ್ಪ ಪ್ರಮಾಣದಲ್ಲಿ ಹೂಳನ್ನೆತ್ತಲಾಗುತ್ತಿದ್ದು ಕೆರೆಯ ಸಂಪೂರ್ಣ ಹೂಳೆತ್ತಲು ಸುಮಾರು 50 ಲಕ್ಷಕ್ಕೂ ಅಧಿಕ ಅನುದಾನದ ಅಗತ್ಯವಿದೆ.
ಪಂಚಾಯತ್ ವ್ಯಾಪ್ತಿಯ ಮಂಗೀಲಾರು, ನೆಲ್ಲಿಕಟ್ಟೆ, ಶಿವನಗರಗಳಲ್ಲಿ ಪ್ರತಿ ವರ್ಷ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತಿದ್ದು ಈ ಕೆರೆ ಅಭಿವೃದ್ಧಿಯಿಂದ ಈ ಭಾಗದ ಬೇಸಿಗೆಯ ಕುಡಿಯುವ ನೀರಿನ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಬಹುದಾಗಿದೆ. ಪಂಚಾಯತ್ ವ್ಯಾಪ್ತಿಯಲ್ಲಿ ಹರಿಯಪ್ಪ ಕೆರೆ ಬಿಟ್ಟರೆ ಬೇರೆ ಯಾವುದೇ ರೀತಿಯ ನೀರಿನ ಮೂಲಗಳಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.