ಹಿರ್ಗಾನ: ಸಂಪೂರ್ಣ ಹದಗೆಟ್ಟ ನೆಲ್ಲಿಕಟ್ಟೆ ಮಂಗಿಲಾರು ರಸ್ತೆ
Team Udayavani, Feb 20, 2019, 1:00 AM IST
ಅಜೆಕಾರು: ಹಿರ್ಗಾನ ಗ್ರಾ.ಪಂ. ವ್ಯಾಪ್ತಿಯ ನೆಲ್ಲಿಕಟ್ಟೆ ಮಂಗಿಲಾರು ಸಂಪರ್ಕ ರಸ್ತೆಯು ಸಂಪೂರ್ಣ ಹದ ಗೆಟ್ಟಿದ್ದು, ಸಂಚಾರ ದುಸ್ತರವಾಗಿದೆ.
ನೆಲ್ಲಿಕಟ್ಟೆಯಿಂದ ಸುಮಾರು ಅರ್ಧ ಕಿ.ಮೀ.ಯಷ್ಟು ಭಾಗದ ರಸ್ತೆಯನ್ನು ಮಾತ್ರ ಮರುಡಾಮರೀಕರಣ ಮಾಡಿ ಅಭಿವೃದ್ಧಿಗೊಳಿಸಲಾಗಿದ್ದು ಉಳಿದ 3 ಕಿ.ಮೀ.ಯಷ್ಟು ರಸ್ತೆ ಸಂಪೂರ್ಣ ಹಾನಿಗೊಂಡಿದೆ.
ರಸ್ತೆಯಲ್ಲಿ ಬೃಹತ್ ಗಾತ್ರದ ಹೊಂಡಗುಂಡಿಗಳು ನಿರ್ಮಾಣವಾಗಿ ಜಲ್ಲಿಕಲ್ಲುಗಳು ರಸ್ತೆ ಮೇಲೆ ಹರಡಿಕೊಂಡಿವೆ.
ಈ ರಸ್ತೆಯು ಹಾಡಿ ಮಾಯಂದಾಲ ಗರಡಿ ಮತ್ತು ಮಂಗಿಲಾರು ವಾಸುದೇವ ದೇವಸ್ಥಾನ ಸಂಪರ್ಕಿಸಲು ಇರುವ ಏಕೈಕ ರಸ್ತೆಯಾಗಿದ್ದು, ನಿತ್ಯ ನೂರಾರು ಜನರು ಸಂಚಾರ ಮಾಡುತ್ತಾರೆ.
ರಸ್ತೆಯ ಇಕ್ಕೆಲಗಳಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಮಳೆಗಾಲದಲ್ಲಿ ನೀರು ರಸ್ತೆಯಲ್ಲಿಯೇ ಹರಿದು ರಸ್ತೆ ಸಂಪೂರ್ಣವಾಗಿ ಹಾನಿಗೊಳಗಾಗುತ್ತಿದ್ದು ಶೀಘ್ರವಾಗಿ ಅಭಿವೃದ್ಧಿಪಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.