ಹಿರಿಯಡಕ ಬ್ರಹ್ಮಕಲಶೋತ್ಸವ : 1.5 ಲಕ್ಷ ಮಂದಿಗೆ ಅನ್ನಸಂತರ್ಪಣೆ
Team Udayavani, Apr 21, 2018, 8:40 AM IST
ಹಿರಿಯಡಕ: ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಎ.16 ರಿಂದ 25ರತನಕ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಸುಮಾರು 1.5 ಲಕ್ಷ ಜನರಿಗೆ ಅನ್ನ ಸಂತರ್ಪಣೆ ನಡೆಯುತ್ತಿದ್ದು 1,500ಕ್ಕೂ ಮಿಕ್ಕಿ ಸ್ವಯಂ ಸೇವಕರನ್ನೊಳಗೊಂಡು ಅಚ್ಚುಕಟ್ಟಿನ ವ್ಯವಸ್ಥೆ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಊಟೋಪಚಾರ ವ್ಯವಸ್ಥೆಯು ಶ್ರೀನಿವಾಸ ಅವರ ನೇತೃತ್ವದಲ್ಲಿ ಸುಮಾರು 100ಕ್ಕೂ ಮಿಕ್ಕಿ ಬಾಣಸಿಗರ ತಂಡ ಬೆಳಗ್ಗಿನ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಉಪಾಹಾರ, ರಾತ್ರಿ ಊಟದ ವ್ಯವಸ್ಥೆ ನೋಡಿಕೊಳ್ಳುತ್ತಿದ್ದಾರೆ. 10 ದಿನಗಳಲ್ಲಿ ಬರುವ ಭಕ್ತರಿಗೆ ಅನ್ನಸಂತರ್ಪಣೆಗೆ ವಾರ್ಡ್ ವಾರು ತಂಡ ರಚಿಸಲಾಗಿದ್ದು ಪ್ರತಿದಿನ ಸುಮಾರು 10 ಸಾವಿರಕ್ಕೂ ಅಧಿಕ ಮಂದಿಗೆ ಅನ್ನಸಂತರ್ಪಣೆ ನಡೆಯಿತು. ಬ್ರಹ್ಮಕಲಶದ ದಿನ 50 ಸಾವಿರ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು ಭಕ್ತರಿಗೆ ತೊಂದರೆಯಾಗದಂತೆ ಸ್ವಯಂ ಸೇವಕರ ತಂಡ ವಿಶೇಷವಾಗಿ ಶ್ರಮಿಸುತ್ತಿದೆ. ಸಹಸ್ರ ಸಂಖ್ಯೆಯಲ್ಲಿ ಭಕ್ತರು ಅನ್ನಸಂತರ್ಪಣೆಯಲ್ಲಿ ಭಾಗವಹಿಸಿದ್ದರೂ ಎಲ್ಲೂ ಕಸದ ರಾಶಿ ಕಾಣಸಿಗದಿರುವುದು ಇಲ್ಲಿಯ ಸ್ವಚ್ಛತೆ ಬಗೆಗಿನ ಕಾಳಜಿ ಜನರ ಪ್ರಶಂಸೆಗೆ ಕಾರಣವಾಗಿದೆ.
ದಾಖಲೆ ಹೊರೆಕಾಣಿಕೆ
ಕಳೆದ ಎರಡು ತಿಂಗಳ ಮೊದಲೇ ಗ್ರಾಮಸ್ಥರು ತಮ್ಮ ಜಾಗದಲ್ಲಿ ವಿವಿಧ ತರಕಾರಿಗಳನ್ನು ಬೆಳೆಸಿದ್ದು ಹೊರೆಕಾಣಿಕೆ ಮೂಲಕ ಸುಮಾರು 4 ಬ್ರಹ್ಮಕಲಶಗಳಿಗೆ ಸಾಕಾಗುವಷ್ಟು ದಾಖಲೆಯ ತರಕಾರಿ ಸಮರ್ಪಿತವಾಗಿದೆ.
ವಿಶಾಲ ಅನ್ನಸಂತರ್ಪಣೆ ಚಪ್ಪರ
ಭಕ್ತರಿಗೆ ತೊಂದರೆಯಾಗದಂತೆ ನೂಕುನುಗ್ಗಲು ತಡೆಯಲು ಏಕಕಾಲದಲ್ಲಿ 3 ಸಾವಿರ ಮಂದಿ ಕುಳಿತು ಊಟಮಾಡುವ ಟೇಬಲ್ ವ್ಯವಸ್ಥೆ ಹಾಗೂ 6 ಸಾವಿರ ಜನರಿಗಾಗುವಷ್ಟು ಬಫೆ ಕೌಂಟರ್, ಊಟದ ವ್ಯವಸ್ಥೆ ಮಾಡಲಾಗಿದೆ. ಎರಡು ಹೊತ್ತು ಉಪಾಹಾರದ ವ್ಯವಸ್ಥೆ ಮಾಡಲಾಗಿದ್ದು, ಇಡ್ಲಿ, ಸಜ್ಜಿಗೆ, ಅವಲಕ್ಕಿ, ಕಡ್ಲೆ ಅವಲಕ್ಕಿ, ಶಾವಿಗೆ ಚಬಾತ್, ಹಲ್ವ ಹಾಗೂ ಸಿಹಿತಿಂಡಿ ವ್ಯವಸ್ಥೆ ಮಾಡಲಾಗಿದೆ. ದಿನಕ್ಕೆ ಎರಡು ಬಾರಿ ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆಯಲ್ಲಿ ಅನ್ನ ಸಾರು, ಸಾಂಬಾರು, ಮೆಣಸಿನಕಾಯಿ, ಪಾಯಸ, 2 ಬಗೆಯ ಸಿಹಿ ತಿಂಡಿ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.