ಹಿರಿಯಡಕ : ಎ. 16-25: ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ
Team Udayavani, Mar 23, 2018, 7:05 AM IST
ಹೆಬ್ರಿ: ಹಿರಿಯಡಕ ಮಹತೋಭಾರ ಶ್ರೀ ವೀರಭದ್ರಸ್ವಾಮಿ ದೇಗುಲವು 25 ಕೋ. ರೂ. ವೆಚ್ಚದಲ್ಲಿಜೀರ್ಣೋದ್ಧಾರಗೊಂಡಿದ್ದು, ಎ. 16 ರಿಂದ 25ರವರೆಗೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ನಡೆಯಲಿದೆ ಎಂದು ಕಾರ್ಯಾಧ್ಯಕ್ಷ ಮಾಂಬೆಟ್ಟು ಗೋವರ್ಧನದಾಸ್ ಹೆಗ್ಡೆ ಹೇಳಿದರು. ಅವರು ಮಾ. 21ರಂದು ಹಿರಿಯಡಕ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜೀರ್ಣೋದ್ಧಾರ ಸಮಿತಿಯ ಸಂಘಟನ ಕಾರ್ಯದರ್ಶಿ ನಟರಾಜ್ ಹೆಗ್ಡೆ ಕಾರ್ಯ ಕ್ರಮದ ವಿವರ ನೀಡಿದರು. ಎ. 20ರಂದು ಬೆಳಿಗ್ಗೆ ಬ್ರಹ್ಮಲಿಂಗೇಶ್ವರ ದೇವರ ಪ್ರತಿಷ್ಠೆ, ಸಪರಿವಾರ ವೀರಭದ್ರ ದೇವರ ಪ್ರತಿಷ್ಠೆ, ನಾಗದೇವರ ಪ್ರತಿಷ್ಠೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದು ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಜರಗಲಿದೆ. ಎ. 22ರಂದು
ಬ್ರಹ್ಮಲಿಂಗೇಶ್ವರ ದೇವರಿಗೆ ಹಾಗೂ ವೀರಭದ್ರ ದೇವರಿಗೆ ಬ್ರಹ್ಮ ಕಲಶಾಭಿಷೇಕ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಲಿದೆ.
ಎ. 16ರಂದು ಸಂಜೆ ಹೊರೆಕಾಣಿಕೆ ಭವ್ಯ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಎ. 16ರಿಂದ 25ರವರೆಗೆ ಪ್ರತಿದಿನ ಸಂಜೆ 6ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಎ. 19ರಂದು ‘ತರಂಗ’ ವಾರ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಎಸ್. ಪೈ ಅವರ ಅಧ್ಯಕ್ಷತೆಯಲ್ಲಿ ಮಾತೃ ಸಂಗಮ, ಎ. 20ರಂದು ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಸಂತ ಸಂಗಮ, ಎ. 21ರಂದು ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಆಶೀರ್ವಚನದೊಂದಿಗೆ ನಿಟ್ಟೆ ವಿ.ವಿ. ಕುಲಪತಿ ಎನ್. ವಿನಯ್ ಹೆಗ್ಡೆ ಅಧ್ಯಕ್ಷತೆಯಲ್ಲಿ ರಾಜಧರ್ಮ ಸಭೆ, ಎ. 22ರಂದು ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿ ಅಧ್ಯಕ್ಷತೆಯಲ್ಲಿ ಸುಧರ್ಮ ಸಭೆ, ಧಾರ್ಮಿಕ ಸಭಾ ಕಾರ್ಯಕ್ರಮಗಳು ನಡೆಯಲಿವೆ. ಎ. 25ರಂದು ಶ್ರೀ ಕ್ಷೇತ್ರ
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಆಗಮಿಸಿ ಶುಭ ಹಾರೈಸಲಿದ್ದಾರೆ ಎಂದರು.
ಜೀರ್ಣೋದ್ಧಾರಗೊಂಡ ಕ್ಷೇತ್ರದಲ್ಲಿ ಕಲ್ಲಿನ ಕೆತ್ತನೆ, ಆಕರ್ಷಕ ವಾಸ್ತು, ಕಾಷ್ಠಶಿಲ್ಪಗಳು ವಿಶೇಷ ಆಕರ್ಷಣೆಯಾಗಿವೆ ಎಂದು ಪ್ರಾಜೆಕ್ಟ್ ಕನ್ಸಲ್ಟೆಂಟ್ ಕುತ್ಯಾರು ಪ್ರಸಾದ್ ಶೆಟ್ಟಿ ಹೇಳಿದರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಅಂಜಾರು ಬೀಡು ಸುಭಾಶ್ಚಂದ್ರ ಹೆಗ್ಡೆ, ಪಡ್ಡಂಬೀಡು ಹರ್ಷವರ್ಧನ ಹೆಗ್ಡೆ, ಕಾರ್ಯದರ್ಶಿ ಪರೀಕ ಅರಮನೆ ಸೋಮನಾಥ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
MUST WATCH
ಹೊಸ ಸೇರ್ಪಡೆ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.