ಮನೆ ಮನೆಗೆ ಪಿಂಚಣಿ ಯೋಜನೆ ಅಭಿಯಾನಕ್ಕೆ ಚಾಲನೆ
Team Udayavani, Mar 1, 2020, 5:17 AM IST
ಕಾಪು: ಸರಕಾರದ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯಲು ಅರ್ಹರಾಗಿದ್ದೂ ಪಿಂಚಣಿ ಸೌಲಭ್ಯದಿಂದ ವಂಚಿತರಾಗಿರುವ ಅರ್ಹ ಫಲಾನುಭವಿಗಳನ್ನು ಗುರುತಿಸುವ ಮನೆ ಮನೆ ಪಿಂಚಣಿ ಯೋಜನೆ ಈಗ ಕಾಪು ತಾಲೂಕಿನಲ್ಲೂ ಶುರುವಾಗಿದೆ.
ಕಂದಾಯ ಅಧಿಕಾರಿಗಳು ಉಪ ತಹಶೀಲ್ದಾರ್ ನೇತೃತ್ವದಲ್ಲಿ ಮನೆ ಮನೆ ಭೇಟಿ ನೀಡಲಿದ್ದಾರೆ. ತಾಲೂಕಿನ 30 ಗ್ರಾಮಗಳಲ್ಲಿ ಈ ಯೋಜನೆ ನಡೆಯಲಿದೆ. ಗ್ರಾಮ ಕರಣಿಕರು ಮತ್ತು ಗ್ರಾಮ ಸಹಾಯಕರು ಹಾಗೂ ಕಾಪು ಹೋಬಳಿಯ ಕಂದಾಯ ನಿರೀಕ್ಷಕರು ಇದರಲ್ಲಿ ಭಾಗಿಯಾಗಲಿದ್ದಾರೆ.
ಈವರೆಗೆ 75 ಮಂದಿಯನ್ನು ಗುರುತಿಸಲಾಗಿದೆ. ಫೆ.26ರಂದು ಒಂದೇ ದಿನ ಕಾಪು ಪಡುಗ್ರಾಮದ 13 ಮಂದಿಯನ್ನು ಫಲಾನುಭವಿಗಳ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ.
ಬೇಕಾದ ದಾಖಲೆಗಳು
ಅಧಿಕಾರಿಗಳು ಭೇಟಿ ನೀಡುವ ಸಂದರ್ಭದಲ್ಲಿ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಯಸ್ಸಿನ ದಾಖಲೆ, ಪಾಸ್ ಬುಕ್ ಜೆರಾಕ್ಸ್ ಮತ್ತು 3 ಫೊಟೋಗಳನ್ನು ನೀಡಬೇಕಿದೆ.
9,684 ಫಲಾನುಭವಿಗಳು
ಕಾಪು ತಾಲೂಕಿನಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಈವರೆಗೆ 9,684 ಫಲಾನುಭವಿಗಳಿದ್ದಾರೆ. ಸಂಧ್ಯಾ ಸುರಕ್ಷಾ ಯೋಜನೆ – 5,933, ವಿಧವಾ ವೇತನ – 1,833, ಇಂದಿರಾ ಗಾಂಧಿ ಪಿಂಚಣಿ ಯೋಜನೆ (ವೃದ್ಧಾಪ್ಯ ವೇತನ)- 724, ಅಂಗವಿಕಲ ವೇತನ – 375 + 256, ಮನಸ್ವಿನಿ – 563 ಫಲಾನುಭವಿಗಳು ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ.
ಸಮಸ್ಯೆಯಾದರೆ ಕಚೇರಿಗೆ ತೆರಳಬಹುದು
ಆಧಾರ್ ಲಿಂಕ್ ಆಗದೇ ಇರುವುದು, ದಾಖಲೆಗಳ ಸಮಸ್ಯೆ ಇತ್ಯಾದಿ ಕಾರಣ ಪಿಂಚಣಿ ಹಣ ತಲುಪದೇ ಇದ್ದರೆ ಕಚೇರಿಗೆ ಬರಲು ತಹಶೀಲ್ದಾರ್ ನಾಗರಿಕರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ಈವರೆಗೆ 927 ಫಲಾನುಭವಿಗಳ ದಾಖಲೆ ಪರಿಶೀಲಿಸಿ ತಿದ್ದುಪಡಿ ಮಾಡಲಾಗಿದೆ ಎಂದಿದ್ದಾರೆ.
ಸಂಪೂರ್ಣ ಉಚಿತ ಸೇವೆ
ಪಿಂಚಣಿ ಪಡೆಯಲು ಅರ್ಹರಾದವರನ್ನು ಗುರುತಿಸಿ ಅವರ ಓಟಿಸಿ – ರೇಷನ್ ಕಾರ್ಡ್ ಡಾಟಾವನ್ನು ಸಂಗ್ರಹಿಸಿ ಅಟಲ್ ಜೀ ಸೇವಾ ಕೇಂದ್ರದ ಮೂಲಕ ಎಂಟ್ರಿ ಮಾಡಿಸಲಾಗುತ್ತದೆ. ನೇರವಾಗಿ ಮನೆಗೇ ತೆರಳಿ ಎಂಟ್ರಿ ಇತ್ಯಾದಿ ಮಾಡುವುದರಿಂದ ಕನಿಷ್ಠ 10 ದಿನಗಳ ಒಳಗೆ ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರವನ್ನು ನೀಡಲಾಗುತ್ತದೆ. ಈ ಸೇವೆ ಸಂಪೂರ್ಣ ಉಚಿತ.
-ಮಹಮ್ಮದ್ ಇಸಾಕ್,
ತಹಶೀಲ್ದಾರ್, ಕಾಪು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.