ಬಾಳೆಬರೆ ಘಾಟಿ ಅಭಿವೃದ್ಧಿಗೆ ಚಾಲನೆ; 3 ಕೋ.ರೂ. ವೆಚ್ಚ; ಬೇಕಿದೆ ಇನ್ನಷ್ಟು ಅನುದಾನ

1 ಕಿ.ಮೀ. ಅಭಿವೃದ್ಧಿ ಕಾಮಗಾರಿ ಆರಂಭ

Team Udayavani, Nov 26, 2022, 7:53 AM IST

ಬಾಳೆಬರೆ ಘಾಟಿ ಅಭಿವೃದ್ಧಿಗೆ ಚಾಲನೆ; 3 ಕೋ.ರೂ. ವೆಚ್ಚ; ಬೇಕಿದೆ ಇನ್ನಷ್ಟು ಅನುದಾನ

ಕುಂದಾಪುರ: ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾದ ಬಾಳೆಬರೆ (ಹುಲಿಕಲ್‌) ಘಾಟಿ ಅಭಿವೃದ್ಧಿಗೆ ಯೋಜನೆ ಸಿದ್ಧಗೊಂಡಿದ್ದು, ವಿಸ್ತರಣೆಗೆ ಚಾಲನೆ ನೀಡಲಾಗಿದೆ. ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ 3 ಕೋ.ರೂ. ವೆಚ್ಚದಲ್ಲಿ 1 ಕಿ.ಮೀ. ದೂರದವರೆಗೆ ಅಭಿವೃದ್ಧಿಯಾಗಲಿದೆ. ಬಾಕಿ ಉಳಿದ 3.5 ಕಿ.ಮೀ. ಕಾಂಕ್ರೀಟಿಕರಣಕ್ಕೆ ಇನ್ನಷ್ಟು ಅನುದಾನದ ಅಗತ್ಯವಿದೆ.

ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳನ್ನು ಬೆಸೆಯುವ ಬಾಳೆಬರೆ ಘಾಟಿಯು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ 8 ಕಿ.ಮೀ. ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 6.5 ಕಿ.ಮೀ. ಉದ್ದವಿದೆ. ಒಟ್ಟಾರೆ ಇಡೀ ಹುಲಿಕಲ್‌ ಚೆಕ್‌ಪೋಸ್ಟ್‌ನಿಂದ ಹೊಸಂಗಡಿ ಘಾಟಿಯ ಬುಡದವರೆಗೆ 14.5 ಕಿ.ಮೀ. ದೂರವಿದೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ 8 ಕಿ.ಮೀ. ರಸ್ತೆಯು ಈಗಾಗಲೇ ಸಂಪೂರ್ಣ ಕಾಂಕ್ರೀಟಿಕರಣಗೊಂಡಿದೆ. ಉಡುಪಿ ಜಿಲ್ಲೆಯ 6.5 ಕಿ.ಮೀ. ರಸ್ತೆಯ ಪೈಕಿ 2 ಕಿ.ಮೀ. ಈಗಾಗಲೇ ಕಾಂಕ್ರೀಟಿಕರಣಗೊಂಡಿದೆ.

ಪ್ರಮುಖ ಘಾಟಿ
ಶಿರಾಡಿ, ಚಾರ್ಮಾಡಿ ಘಾಟಿಗಳಂತೆಯೇ ಅತ್ಯಂತ ಹೆಚ್ಚಿನ ವಾಹನಗಳ ಒತ್ತಡವಿರುವ ಬಾಳೆಬರೆ ಘಾಟಿಯು ಹಲವು ಕಡಿದಾದ ತಿರುವು, ಒಂದು ಹೇರ್‌ ಪಿನ್‌ ಮಾದರಿ ಅಪಾಯಕಾರಿ ತಿರುವನ್ನು ಹೊಂದಿದೆ. ಆಗಾಗ ಅಪಘಾತ, ಮಳೆಗಾಲದಲ್ಲಿ ತಡೆಗೋಡೆ ಕುಸಿತ ಸಾಮಾನ್ಯ. ಮಂಗಳೂರು, ಉಡುಪಿ, ಕುಂದಾಪುರ ಭಾಗದಿಂದ ಬೆಂಗಳೂರು, ದಾವಣಗೆರೆ, ಬಳ್ಳಾರಿ, ಶಿವಮೊಗ್ಗ, ಹೈದರಾಬಾದ್‌ ಮೊದಲಾದೆಡೆಗೆ ಇದೇ ಘಾಟಿ ಮೂಲಕ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಶಿರಾಡಿ, ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡರೆ ಈ ಘಾಟಿಯೇ ಕರಾವಳಿಯಿಂದ ರಾಜಧಾನಿಗೆ ಪ್ರಮುಖ ಸಂಪರ್ಕ ಸೇತುವಾಗಿದೆ. 2020ರ ವಾಹನ ಗಣತಿ ಪ್ರಕಾರ ಈ ಘಾಟಿಯಲ್ಲಿ ದಿನಕ್ಕೆ ಸರಾಸರಿ 4,935 ವಾಹನಗಳು ಸಂಚರಿಸುತ್ತವೆ.

ಪ್ರಸ್ತುತ ಲೋಕೋಪ ಯೋಗಿ ಇಲಾಖೆ ಯಿಂದ 3 ಕೋ.ರೂ. ಮಂಜೂರಾಗಿದ್ದು, ಅದರಡಿ 870 ಮೀ. ಕಾಂಕ್ರೀಟಿಕರಣ, 7 ಮೀ. ವಿಸ್ತರಣೆ, ಚರಂಡಿ, ಕುಸಿಯುವ ಭೀತಿ ಇರುವಲ್ಲಿ ರಕ್ಷಣ ಗೋಡೆಗಳ ನಿರ್ಮಾಣವಾಗಲಿದೆ. ಇನ್ನು ಶಿವಮೊಗ್ಗ ವ್ಯಾಪ್ತಿ ಯಲ್ಲಿ 10 ಕೋ.ರೂ. ಮಂಜೂರಾಗಿದ್ದು ವಿಸ್ತರಣೆ, ತಡೆಗೋಡೆ ಸಹಿತ ಇನ್ನಿತರ ಕಾಮಗಾರಿ ನಡೆಯಲಿದೆ. ಘಾಟಿಯುದ್ದಕ್ಕೂ ಮರು ಡಾಮರೀಕರಣ ಕಾಮಗಾರಿ ನಿರ್ವಹಣ ವೆಚ್ಚದಲ್ಲಿ ಆಗಲಿದೆ. ಬಾಕಿ ಉಳಿದ 3.5 ಕಿ.ಮೀ. ರಸ್ತೆ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು.
– ದುರ್ಗಾದಾಸ್‌,
ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ ಕುಂದಾಪುರ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.