‘ವೃದ್ಧರು, ಅಂಗವಿಕಲರ ನಿರ್ಲಕ್ಷ್ಯವೂ ಮಾನವ ಹಕ್ಕಿನ ಉಲ್ಲಂಘನೆ’

Team Udayavani, Dec 11, 2018, 2:15 AM IST

manava-hakkugala-dina-10-12.jpg

ಉಡುಪಿ: ವೃದ್ಧ ಪೋಷಕರನ್ನು ಮಕ್ಕಳು ನಿರ್ಲಕ್ಷ್ಯ ಮಾಡುವುದು, ಅಂಗವಿಕಲ ಮಕ್ಕಳನ್ನು ಪೋಷಕರು ತಿರಸ್ಕಾರದಿಂದ ಕಾಣುವುದು ಸಹ ಮಾನವ ಹಕ್ಕಿನ ಉಲ್ಲಂಘನೆ ಆಗಲಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ್‌ ನಾಯ್ಕ ಟಿ. ಅವರು ಹೇಳಿದ್ದಾರೆ. ಸೋಮವಾರ ಉಡುಪಿ ವಕೀಲರ ಸಂಘದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅಭಿಯೋಗ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಸಹಯೋಗದಲ್ಲಿ ನಡೆದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ತಡೆಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.

ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಗೌರವಾನ್ವಿತನಾಗಿ ಆತ್ಮ ಗೌರವದಿಂದ ಜೀವನ ನಡೆಸಲು ಹಕ್ಕು ಉಳ್ಳವನಾಗಿದ್ದು, ಇದಕ್ಕೆ ಚ್ಯುತಿ ಬಂದಲ್ಲಿ ಮಾನವ ಹಕ್ಕಿನ ಉಲ್ಲಂಘನೆ ಆಗಲಿದೆ. ಸಮಾಜದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದ್ದು, ಅಸಮಾನತೆ ವಿರುದ್ಧ ಎಸ್‌ಸಿ, ಎಸ್ಟಿ ಕಾಯಿದೆ ಜಾರಿಗೆ ತಂದಿದ್ದರೂ ಸಹ ಇನ್ನೂ ಇದರ ಉಲ್ಲಂಘನೆ ನಡೆಯುತ್ತಿದೆ. ಮಾನವ ಹಕ್ಕುಗಳ ಕುರಿತು ಪ್ರತಿಯೊಬ್ಬರೂ ಅರಿವು ಹೊಂದಿದ್ದು, ಅವುಗಳನ್ನು ಗೌರವಿಸಿ, ರಕ್ಷಿಸುವುದು  ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು ಎಂದು ಜಿಲ್ಲಾ ನ್ಯಾಯಾಧೀಶರು ಹೇಳಿದರು.

ವ್ಯಾಪಕ ಮಾನವ ಹಕ್ಕುಗಳ ಉಲ್ಲಂಘನೆ
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ| ಪ್ರಕಾಶ್‌ ಕಣಿವೆ, ಪ್ರತಿಯೊಬ್ಬ ವ್ಯಕ್ತಿಗೂ ಹುಟ್ಟಿನಿಂದಲೇ ಮಾನವ ಹಕ್ಕುಗಳು ದೊರೆಯುತ್ತವೆ. ಇವುಗಳ ರಕ್ಷಣೆ ಸರಕಾರಗಳ ಕರ್ತವ್ಯ. 1 ಮತ್ತು 2ನೇ ಮಹಾಯುದ್ದದಲ್ಲಿ ವ್ಯಾಪಕ ಮಾನವ ಹಕ್ಕುಗಳ ಉಲ್ಲಂಘನೆ ನಡೆದಿದ್ದು, 1948ರ ಡಿಸೆಂಬರ್‌ 10 ರಂದು ವಿಶ್ವ ಸಂಸ್ಥೆ ಮಾನವ ಹಕ್ಕುಗಳ ರಕ್ಷಣೆಗೆ ಕರೆ ನೀಡಿದೆ. ಭಾರತ ಸಂವಿಧಾನದಲ್ಲೂ ಸಹ ಮಾನವ ಹಕ್ಕುಗಳನ್ನು ಅಳವಡಿಸಲಾಗಿದೆ. ಆದರೆ  ಭಾರತದಲ್ಲಿ ತುರ್ತು ಪರಿಸ್ಥಿತಿಯ ವೇಳೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾನವ ಹಕ್ಕು ಉಲ್ಲಂಘನೆ ನಡೆಯಿತು. ಮಾನವ ಹಕ್ಕುಗಳನ್ನು ಗೌರವಿಸುವ ಉದ್ದೇಶದಿಂದಲೇ ಯಾವುದೇ ಅಪರಾಧಿಯನ್ನೂ ಸಹ ಸೂಕ್ತ ಕಾಲಾವಕಾಶ ನೀಡಿ, ವಿಚಾರಣೆ ಅನಂತರವೇ ಶಿಕ್ಷೆಗೆ ಒಳಪಡಿಸಲಾಗುತ್ತಿದೆ. ಇದಕ್ಕೆ ಮುಂಬೈ ದಾಳಿಯ ಆರೋಪಿ ಕಸಬ್‌ನ ವಿಚಾರಣೆಯೆ ಸಾಕ್ಷಿ. ಯಾವುದೇ ವ್ಯಕ್ತಿ ಸಮಾಜದಲ್ಲಿ ಗೌರವದಿಂದ ಜೀವಿಸುವ ವಾತಾವರಣ ನಿರ್ಮಾಣ ಮಾಡಬೇಕು ಎಂದು ಹೇಳಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶೆ, ಜಿಲ್ಲಾ  ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ, ಸರಕಾರಿ ಅಭಿಯೋಜಕಿ ಶಾಂತಾ ಬಾಯಿ ಉಪಸ್ಥಿತರಿದ್ದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಶ್ರೀಪತಿ ಆಚಾರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಉಪಾಧ್ಯಕ್ಷ ಪೃಥ್ವಿರಾಜ ಹೆಗ್ಡೆ ಸ್ವಾಗತಿಸಿದರು. ವಕೀಲ ಶ್ರೀಶ ಆಚಾರ್ಯ ನಿರೂಪಿಸಿದರು.

ಟಾಪ್ ನ್ಯೂಸ್

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.