“ಹಸಿವು ಮುಕ್ತ ರಾಜ್ಯ’ ರಾಜ್ಯ ಸರಕಾರದ ಸಾಧನೆ’
Team Udayavani, May 11, 2018, 6:05 AM IST
ಉಡುಪಿ: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಯನ್ನು ಪರಿಣಾಮ ಕಾರಿಯಾಗಿ ಜಾರಿಗೆ ತಂದು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿರುವುದು ಕೆಲವರಿಗೆ ನುಂಗಲಾರದ ತುತ್ತಾಗಿದೆ.
ಕಾರ್ಯಕರ್ತರು ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮತವನ್ನಾಗಿ ಪರಿವರ್ತಿಸುವ ಪ್ರಯತ್ನ ಮಾಡಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದರು.
ಪರ್ಕಳ, ಮಣಿಪಾಲ, ಸರಳೆಬೆಟ್ಟು, ಕಡೆಕಾರ್‌ಗಳಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿ, ಜನರ ಬದುಕನ್ನು ಹಸನುಗೊಳಿಸುವ ಯೋಜನೆಗಳನ್ನು ಮುಕ್ತ ಮನಸ್ಸಿನಿಂದ ಕಾರ್ಯಗತಗೊಳಿಸುವುದಕ್ಕೆ ಕಾಂಗ್ರೆಸ್ ಬದ್ಧವಾಗಿದೆ. ರಾಜ್ಯ ಸರಕಾರದ ಜನೋಪ ಯೋಗಿ ಯೋಜನೆಗಳನ್ನು ಉಡುಪಿ ಕ್ಷೇತ್ರದಲ್ಲಿ ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗಿದೆ ಎಂದರು.
ಎಐಸಿಸಿ ಸದಸ್ಯ ಅಮೃತ್ ಶೆಣೈ ಮಾತನಾಡಿ, ಕಳಂಕಿತ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವ ಮೂಲಕ ಭ್ರಷ್ಟಾಚಾರ ಪೋಷಣೆಗೆ ಸ್ವತಃ ಪ್ರಧಾನಿ ಅವರು ಮುಂದಾಗಿರುವುದು, ಕೇಂದ್ರವು ಭ್ರಷ್ಟಾಚಾರವನ್ನು ಪೋಷಿಸುತ್ತಿದೆ ಎನ್ನು ವುದಕ್ಕೆ ಸ್ಪಷ್ಟ ಉದಾಹರಣೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಮತದಾರರಲ್ಲಿ ವಿನಂತಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಪೂರ್, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಮುಖಂಡರಾದ ದಿವಾಕರ ಕುಂದರ್, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಅನಂತ್ ನಾಯ್ಕ, ಜನಾರ್ದನ ಭಂಡಾರ್ಕಾರ್, ಚಂದ್ರಿಕಾ ಶೆಟ್ಟಿ, ಸುಕೇಶ್ ಕುಂದರ್, ಗಣೇಶ್ ನೇರ್ಗಿ, ಶೇಖರ್ ಜಿ. ಕೋಟ್ಯಾನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.