“ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ’ ಮತದಾರರ ಜಾಗೃತಿ
Team Udayavani, Apr 11, 2019, 6:30 AM IST
ಬೈಂದೂರು: ರೋಟರಿ ಕ್ಲಬ್, ಜೆಸಿಐ ಉಪ್ಪುಂದ, ಮಾರಿಕಾಂಬಾ ಯೂತ್ ಕ್ಲಬ್ ಕಳವಾಡಿ,ನಮ್ಮ ಭೂಮಿ ಸಂಸ್ಥೆ,ರಾಷ್ಟ್ರೀಯ ಸೇವಾ ಯೋಜನೆ ಘಟಕ ಸ. ಪ್ರ. ದ. ಕಾಲೇಜು ಬೈಂದೂರು ಹಾಗೂ ರೀಚರ್ಡ್ ಅಲ್ಮೇಡಾ ಮೆಮೋರಿಯಲ್ ಕಾಲೇಜು ನಾವುಂದ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ ಎನ್ನುವ ಸಂದೇಶದೊಂದಿಗೆ ಮತದಾರರ ಜಾಗೃತಿ ಕಾರ್ಯಕ್ರಮದ ಪ್ರಯುಕ್ತ ಬೈಂದೂರಿನಿಂದ ನಾವುಂದದವರೆಗೆ ಬೈಕ್ ರ್ಯಾಲಿ ನಡೆಸಲಾಯಿತು.
ಬೈಂದೂರು ತಹಶೀಲ್ದಾರ ಬಸಪ್ಪ ಪೂಜಾರ್ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿ, ಮತದಾರರು ಸ್ವಯಂ ಜಾಗೃತರಾಗಿ ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು. ಇದುವರೆಗಿನ ಎಲ್ಲ ಗರಿಷ್ಠ ಮತದಾನ ದಾಖಲೆಯನ್ನು ಈ ಬಾರಿ ನಾವು ಮೀರಿಸಬೇಕು ಎಂದರು.
ಸಮಾರೋಪ ಸಮಾರಂಭದಲ್ಲಿ ರೀಚರ್ಡ್ ಅಲ್ಮೇಡಾ ಮೆಮೋರಿಯಲ್ ಕಾಲೇಜಿನ ಯುವ ಮತದಾರ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸಹಾಯಕ ಚುನಾವಣಾಧಿಕಾರಿ ಕುಸುಮಾಧರ ಗೌಡ ಮಾತನಾಡಿದರು.
ನಮ್ಮ ಭೂಮಿ ಸಂಸ್ಥೆಯ ಪ್ರಭಾಕರ, ರೋಟರಿ ಕ್ಲಬ್ ಅಧ್ಯಕ್ಷ ಐ. ನಾರಾಯಣ, ಉಪ್ಪುಂದ ಜೆಸಿಐ ಅಧ್ಯಕ್ಷ ಪುರಂದರ ಖಾರ್ವಿ, ಮಾರಿಕಾಂಬಾ ಯೂತ್ ಕ್ಲಬ್ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ, ನಾವುಂದ ರೀಚರ್ಡ್ ಅಲ್ಮೇಡಾ ಕಾಲೇಜಿನ ಪ್ರಾಂಶುಪಾಲ ಜಿ.ಎಸ್. ಹೆಗಡೆ, ಎನ್ನೆಸ್ಸೆಸ್ ಘಟಕದ ಮುಖ್ಯಸ್ಥೆ ಪೂರ್ಣಿಮಾ, ಮಂಗೇಶ್ ಶ್ಯಾನುಭಾಗ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್ ಇಲ್ಲ!
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.