ಕ್ಷೇತ್ರದ ಪ್ರಗತಿಗೆ ಸೇವೆ ಸಲ್ಲಿಸುತ್ತೇನೆ: ಸುಕುಮಾರ ಶೆಟ್ಟಿ
Team Udayavani, Jun 8, 2018, 6:30 AM IST
ಬೈಂದೂರು: ಕ್ಷೇತ್ರದ ಪ್ರಗತಿಯ ಮೂಲಕ ಬದಲಾವಣೆ ತರುವ ಕನಸು ನನ್ನಲ್ಲಿದೆ. ಜನರ ಸೇವಕನಾಗಿ ಕೆಲಸ ಮಾಡುತ್ತೇನೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದ್ದಾರೆ.
ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿ ಬೈಂದೂರು ಗ್ರಾಮೀಣ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಗ್ರಾಮೀಣ ಸಾರಿಗೆಯ ನರ್ಮ್ ಬಸ್ಸುಗಳ ಸಂಚಾರ ಸ್ಥಗಿತಗೊಂಡಿದೆ.ಇದರಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ.
ಈ ಕುರಿತು ಕೆ.ಎಸ್.ಆರ್.ಟಿ.ಸಿ ಡಿಸಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ.ಇವತ್ತು ಸಮರ್ಪಕ ವ್ಯವಸ್ಥೆ ಕಲ್ಪಿಸದಿದ್ದರೆ ಬೈಂದೂರಿನಲ್ಲಿ ಜನರೊಂದಿಗೆ ಬೀದಿಗಿಳಿದು ಹೋರಾಟ ಮಾಡುತ್ತೇನೆ. ಯಾವುದೇ ರೀತಿಯಲ್ಲೂ ಖಾಸಗಿ ಲಾಬಿಗೆ ಒಳಗಾಗದಂತೆ ಸ್ಪಷ್ಟ ನಿರ್ದೇಶನ ನೀಡುವ ಜತೆಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡುತ್ತೇನೆ ಎಂದರು.
ಚತುಷ್ಪಥ ಕಾಮಗಾರಿ ಅವ್ಯವಸ್ಥೆ ಗಂಭೀರವಾಗಿ ಪರಿಗಣನೆ ಕಳೆದ ಮೂರು ವರ್ಷಗಳಿಂದ ಬೈಂದೂರು ಕ್ಷೇತ್ರದಲ್ಲಿ ಚತುಷ್ಪಥ ಕಾಮಗಾರಿ ನಡೆಸುವ ಐ.ಆರ್.ಬಿ ಕಂಪೆನಿಯ ಅಸಮರ್ಪಕ ಕೆಲಸದಿಂದ ನೂರಾರು ಎಕರೆ ಕೃಷಿ ಭೂಮಿ ಜೇಡಿ ಮಣ್ಣಿನಿಂದ ತುಂಬಿದೆ.ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೆ ಮಳೆಗಾಲದಲ್ಲಿ ಸಾರ್ವಜನಿಕರು ತೀವೃ ತೊಂದರೆ ಅನುಭವಿಸುತ್ತಿದ್ದಾರೆ.ಒತ್ತಿನೆಣೆ ಗುಡ್ಡ ದ ಸ್ಲೋಪ್ ಪ್ರೊಟೆಕ್ಷನ್ ವಾಲ್ ಕುಸಿಯುವ ಭೀತಿಯಿದೆ.ತಲ್ಲೂರು, ಹೆಮ್ಮಾಡಿ, ಜಾಲಾಡಿಗಳಲ್ಲಿ ಜನರಿಗೆ ತೊಂದರೆಯಾಗಿದೆ.ಈ ಕುರಿತು ಮೇಲಾಧಿಕಾರಿಗಳ ಜೊತೆ ಮಾತನಾಡಿದ್ದೇನೆ.ಮಳೆಗಾಲದಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ,ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರ,
ಜಿ.ಪಂ ಸದಸ್ಯ ಬಾಬು ಶೆಟ್ಟಿ,ಶಂಕರ ಪೂಜಾರಿ,ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಚಿತ್ತರಂಜನ ಹೆಗ್ಡೆ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
MUST WATCH
ಹೊಸ ಸೇರ್ಪಡೆ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.