ಐಸ್‌ಕ್ಯಾಂಡಿ ಪ್ರಕರಣ: ಕೇಸು ದಾಖಲಿಸಲು ಡಿಸಿ ಸೂಚನೆ
Team Udayavani, Jul 12, 2019, 5:36 AM IST
ಕುಂದಾಪುರ: ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದ್ದ ಐಸ್‌ಕ್ಯಾಂಡಿ ತಿಂದ ಮಕ್ಕಳ ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಸೂಚಿಸಿದರು.
ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲಾ ಮಟ್ಟದ ಆಹಾರ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಂದಾಪುರ, ಉಡುಪಿ ಹಾಗೂ ಕಾರ್ಕಳ ತಾಲೂಕಿನಲ್ಲಿ ಕೆಲ ತಿಂಗಳ ಹಿಂದೆ ಕಲುಷಿತ ನೀರಿನಿಂದ ತಯಾರಿಸಿದ ಐಸ್‌ಕ್ಯಾಂಡಿ ಸೇವಿಸಿ ನೂರಾರು ಮಕ್ಕಳು ಅಸ್ವಸ್ಥರಾಗಿದ್ದರು. ಮನೆ ಮನೆಗೆ ತಂದು ಐಸ್ ಕ್ಯಾಂಡಿ ಮಾರಾಟ ಮಾಡಿದ್ದನ್ನು ಖರೀದಿಸಿ ತಿಂದದ್ದೇ ಈ ಅವಾಂತರಕ್ಕೆ ಕಾರಣವಾಗಿತ್ತು.
ಪೊಲೀಸರು ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸಿದ್ದರೂ ತಯಾರಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ತಾಂತ್ರಿಕ ಅಡಚಣೆಗಳಿದ್ದವು. ಪ್ರಯೋಗಾಲಯ ವರದಿ ಬರದೇ ಪ್ರಕರಣ ದಾಖಲಿಸುವಂತಿರಲಿಲ್ಲ. ಹಾಗಿದ್ದರೂ ಪೊಲೀಸರು ಐಸ್‌ಕ್ಯಾಂಡಿ ತಯಾರಕ ಸಂಸ್ಥೆಯನ್ನು ಪತ್ತೆ ಹಚ್ಚಿದ್ದರು. ಆದರೆ ಈ ಕುರಿತು ಆಹಾರ ಸುರಕ್ಷತಾ ಇಲಾಖೆ ಯಾವುದೇ ಪ್ರಕರಣ ದಾಖಲಿಸಿರಲಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮಹತ್ವ ಪಡೆದಿದೆ. ಘಟನೆ ನಡೆದ ಸಂದರ್ಭ ಆರೋಗ್ಯ ಇಲಾಖೆ ಹಾಗೂ ಪೊಲೀಸರು ಕೈಗೊಂಡ ಸಕಾಲಿಕ ಕ್ರಮ ವ್ಯಾಪಕ ಮೆಚ್ಚುಗೆಗೆ ಕಾರಣವಾಗಿತ್ತು.
ಜಿಲ್ಲೆಯಲ್ಲಿ ಕಲುಷಿತ ನೀರಿನಿಂದ ತಯಾರಿಸಿದ ಐಸ್‌ಕ್ಯಾಂಡಿ ಸೇವಿಸಿ ಸುಮಾರು 78 ಮಕ್ಕಳು ಅಸ್ವಸ್ಥಗೊಂಡಿದ್ದು, ಈ ಕುರಿತಂತೆ ಐಸ್‌ಕ್ಯಾಂಡಿ ತಯಾರಕರ ವಿರುದ್ಧ ಇದುವರೆಗೆ ಸೂಕ್ತ ಕ್ರಮ ಕೈಗೊಳ್ಳದ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಈ ಕುರಿತಂತೆ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ, ಇದು ಕಲುಷಿತ ಆಹಾರ ಉತ್ಪನ್ನ ತಯಾರಿಕರಿಗೆ ಎಚ್ಚರಿಕೆ ನೀಡಿದಂತಾಗುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆಹಾರ ತಯಾರಿಕಾ ಘಟಕಗಳಿಗೆ ಸುರಕ್ಷತಾ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ಅಲ್ಲಿನ ಶುಚಿತ್ವ ಸೇರಿದಂತೆ, ಆಹಾರ ತಯಾರಿಕೆಗೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು, ಈ ಕುರಿತು ಪ್ರತಿ ತಿಂಗಳು ವೇಳಾಪಟ್ಟಿ ಸಿದ್ಧಪಡಿಸಿಕೊಂಡು ಕಾರ್ಯನಿರ್ವಹಿಸಿ ಎಂದರು.
ಜಿಲ್ಲೆಯ ಪ್ರವಾಸಿ ತಾಣಗಳು ಮತ್ತು ಬೀಚ್ ಪ್ರದೇಶದಲ್ಲಿನ ಗೂಡಂಗಡಿಗಳಲ್ಲಿ ತಯಾರಿಸುವ ಆಹಾರದ ಗುಣಮಟ್ಟ ಪರಿಶೀಲಿಸಿ ಮತ್ತು ಅಲ್ಲಿ ಐಸ್ ಕ್ರೀಂ ಮತ್ತು ಇತರ ಆಹಾರ ಸ್ವೀಕರಿಸಲು ಪ್ಲಾಸ್ಟಿಕ್ ಚಮಚ ಮತ್ತು ಇತರೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸುತ್ತಿರುವ ಕುರಿತಂತೆ ದೂರುಗಳಿದ್ದು, ಸಂಬಂಧಪಟ್ಟ ನಗರಸಭೆ ಮತ್ತು ಪುರಸಭೆಯ ಅಧಿಕಾರಿಗಳು ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದಾರೆ.
ಜಿಲ್ಲೆಯ ಮೀನುಗಳಲ್ಲಿ ಫಾರ್ಮಾಲಿನ್ ಸಿಂಪಡಣೆ ಕುರಿತಂತೆ ಪರಿಶೀಲಿಸಲಾಗಿ ನೆಗೆಟಿವ್ ವರದಿ ಬಂದಿದೆ, 68 ಮೀನು ಸಾಗಾಟ ವಾಹನಗಳಿಗೆ ಆಹಾರ ಸುರಕ್ಷತಾ ಪರವಾನಗಿ ನೀಡಲಾಗಿದೆ.
ಜಿಲ್ಲೆಯಲ್ಲಿ 15 ಕುಡಿಯುವ ನೀರು ಘಟಕಗಳಿದ್ದು, ಯಾವುದೇ ಅನಧಿಕೃತ ಘಟಕಗಳು ಇಲ್ಲ ಎಂದು ಜಿಲ್ಲಾ ಸವೇಕ್ಷಣಾಧಿಕಾರಿ ಡಾ| ವಾಸುದೇವ್ ಮಾಹಿತಿ ನೀಡಿದರು.
ಸಭೆಯಲ್ಲಿ ಎಎಸ್ಪಿ ಕುಮಾರಚಂದ್ರ, ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ. ಜಿ. ರಾಮ, ಜಿಲ್ಲಾ ಸರ್ಜನ್ ಡಾ| ಮಧುಸೂದನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್ ಇಲ್ಲ!
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.