ಹಾಲಾಡಿ ಅವರನ್ನು ವಿರೋಧಿಸಿದರೆ ಶಿಸ್ತು ಕ್ರಮ: ಬಿ.ಎಸ್‌ವೈ ಎಚ್ಚರಿಕೆ
Team Udayavani, Nov 14, 2017, 8:37 AM IST
ಉಡುಪಿ: ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಜೆಪಿಯ ಕೆಲವು ತಪ್ಪು ನಿರ್ಧಾರಗಳಿಂದ ಪಕ್ಷ ಬಿಟ್ಟು ಹೋಗುವಂತಾಗಿತ್ತು. ಒಂದು ತಿಂಗಳ ಒಳಗಾಗಿ ಅವರು ಮತ್ತೆ ಬಿಜೆಪಿ ಸೇರಿಕೊಳ್ಳಲಿದ್ದಾರೆ. ಬಿಜೆಪಿಗೆ ಸೇರುವುದಕ್ಕೆ ವಿರೋಧ ವ್ಯಕ್ತಪಡಿಸಿದರೆ ಅಂಥವರ ವಿರುದ್ಧ ಪಕ್ಷವೇ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.
ಸೋಮವಾರ ಮಣಿಪಾಲದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಹಾಲಾಡಿ ಶ್ರೀನಿವಾಸ ಶೆಟ್ಟಿ ಸರಳ ಸಜ್ಜನಿಕೆಯ ಪ್ರಭಾವಿ ರಾಜಕಾರಣಿ. ಬಿಜೆಪಿಯ ತಪ್ಪಿನಿಂದಾಗಿ ಅವರು ಪಕ್ಷೇತರನಾಗಿ ಸ್ಪರ್ಧಿಸು ವಂತಾಗಿತ್ತು. ಆದರೆ ಅವರು ಬಿಜೆಪಿಗೆ ಬೆಂಬಲ ನೀಡಿ ದ್ದಾರೆ. ಆಡಳಿತದಲ್ಲಿ ಕ್ಷೇತ್ರದ ಜನತೆಗೆ ಉತ್ತಮ ಸೇವೆ ಸಲ್ಲಿಸಿದ್ದಾರೆ. ನಾವೇ ಅವರನ್ನು ಬಿಜೆಪಿಗೆ ಸೇರು ವಂತೆ ಒತ್ತಾಯಿಸಿದ್ದೇವೆ. ಕೆಲವು ತಾಂತ್ರಿಕ ತೊಂದರೆ ಗಳು ನಿವಾರಣೆಯಾದ ಅನಂತರ ಅವರು ಬಿಜೆಪಿ ಸೇರಿ ಕೊಳ್ಳಲಿದ್ದು, ಡಿಸೆಂಬರ್ ಬಳಿಕ ಪಕ್ಷದ ಎಲ್ಲ ಚಟು ವಟಿಕೆ ಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕೇರಳದಲ್ಲಿ ಹಿಂದೂಗಳ ಹತ್ಯೆ
ಕೇರಳದಲ್ಲಿ ಕ್ಷುಲ್ಲಕ ವಿಚಾರಗಳಿಗೆ ಅಮಾಯಕ ಹಿಂದೂಗಳ ಹತ್ಯೆ ನಡೆಯುತ್ತಿದೆ. ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರಿಗೆ ಅಲ್ಲಿ ರಕ್ಷಣೆ ಇಲ್ಲವಾಗಿದೆ. ಸಿಪಿಎಂ ಬೆಂಬಲದಿಂದಲೇ ಹತ್ಯೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಪಿಎಫ್ಐ, ಎಸ್‌ಡಿಪಿಐ ಸಂಘಟನೆಗಳು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುತ್ತಿವೆ. ಉಡುಪಿ, ಮಂಗಳೂರು, ಕೊಡಗು ಭಾಗದಲ್ಲಿ ಈ ಸಂಘಟನೆಗಳಿಂದಾಗಿ ಅಶಾಂತಿ ಸೃಷ್ಟಿಯಾಗುತ್ತಿದೆ. ಈ ಸಂಘಟನೆಗಳಿಗೆ ಸಿದ್ದರಾಮಯ್ಯ ಬೆಂಬಲ ನೀಡುತ್ತಿದ್ದಾರೆ ಎಂದ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಂಗಳೂರಿ ನಲ್ಲಿ ಎನ್‌ಐಎ ಸ್ಥಾಪಿಸಲಾಗುವುದು ಎಂದರು.ಖಾಸಗಿ ಆಸ್ಪತ್ರೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಕರಾಳ ಮಸೂದೆಯನ್ನು ತಯಾರಿಸಿದೆ. ಇದರಿಂದ ವೈದ್ಯ ರಿಗೆ ಸಮಸ್ಯೆ ಯಾಗಲಿದೆ. ಅಂತಹ ಮಸೂದೆ ಕೈಬಿಡಬೇಕು. ವೈದ್ಯರಿಗೆ ಕಿರುಕುಳ ಆಗು ವಂತಹ ಮಸೂದೆ ಜಾರಿಯಾಗಬಾರದು ಎಂದರು.
ಪ್ರಮೋದ್ ವಿಚಾರ ಗೊತ್ತಿಲ್ಲ
ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಸದ್ಯ ಈ ವಿಚಾರದ ಬಗ್ಗೆ ತಿಳಿದಿಲ್ಲ ಎಂದರು. ಗೋಷ್ಠಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಾಜಿ ಶಾಸಕ ಕೆ. ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಕೆ. ಉದಯ್ ಕುಮಾರ್ ಶೆಟ್ಟಿ, ಯಶ್‌ಪಾಲ್ ಸುವರ್ಣ, ಶ್ರೀಶಾ ನಾಯಕ್, ಶ್ಯಾಮಲಾ ಕುಂದರ್ ಉಪಸ್ಥಿತರಿದ್ದರು.
ಶ್ವೇತಪತ್ರ ಹೊರಡಿಸಿ
ರಾಜ್ಯ ಸರಕಾರದ ಖಜಾನೆ ಖಾಲಿಯಾಗಿದೆ. ವಿವಿಧ ಮೂಲಗಳಿಂದ ಕೋಟಿ ಕೋಟಿ ಹಣ ಸಾಲ ಮಾಡಲಾಗಿದೆ. ಕೇಂದ್ರ ಸರಕಾರ ದೊಡ್ಡ ಮೊತ್ತದ ಹಣವನ್ನು ರಾಜ್ಯಕ್ಕೆ ನೀಡುತ್ತಿದೆ. ಅದರ ಲೆಕ್ಕವೂ ಇಲ್ಲ. ಜನತೆಗೆ ರಾಜ್ಯದ ಆರ್ಥಿಕ ಸ್ಥಿತಿ ತಿಳಿಯಬೇಕು. ಹೀಗಾಗಿ ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ ಹೊರಡಿಸಬೇಕು.
ಬಿ.ಎಸ್. ಯಡಿಯೂರಪ್ಪ , ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.