ಪ್ರಮೋದ್ ಬರುವುದಾದರೆ ಕಾರ್ಯಕರ್ತನಾಗಿ ಬರಲಿ: ಬಿಜೆಪಿ
Team Udayavani, Mar 24, 2018, 10:10 AM IST
ಉಡುಪಿ: ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಎಲ್ಲರಿಗೂ ಬಿಜೆಪಿ ಬಾಗಿಲು ತೆರೆದಿರುತ್ತದೆ. ಆದರೆ ಅವರು ಕಾರ್ಯಕರ್ತನಾಗಿ ಬರಬೇಕು ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ. ಮಾ. 23ರಂದು ಪಕ್ಷದ ಕಚೇರಿಯಲ್ಲಿ ಶಾಸಕರ ವಿರುದ್ಧದ ‘ಆರೋಪ ಪಟ್ಟಿ’ ಬಿಡುಗಡೆ ಕಾರ್ಯಕ್ರಮದ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಗೇಟ್ ಹಾಕಿಲ್ಲ. ಅವರನ್ನು ನಾನಂತೂ ತಡೆದಿಲ್ಲ. ಅವರು ಬರುವುದಾದರೆ ಜಿಲ್ಲಾಧ್ಯಕ್ಷರಿಗೆ ಅರ್ಜಿ ಹಾಕಲಿ. ಅವರು ಪರಿಶೀಲಿಸುತ್ತಾರೆ. ಬಿಜೆಪಿ ಕಚೇರಿ ಎಲ್ಲರಿಗೂ ತೆರೆದೇ ಇರುತ್ತದೆ. ಹೊಸ ಹೊಸ ಕಾರ್ಯಕರ್ತರು ಸೇರ್ಪಡೆಯಾಗುತ್ತಲೇ ಇದ್ದಾರೆ. ಅಂತೆಯೇ ಪ್ರಮೋದ್ ಮಧ್ವರಾಜ್ ಕೂಡ ಬರಲಿ. ಅವರಿಗೂ ಸ್ವಾಗತ ಎಂದು ಹೇಳಿದರು.
ಸೋಲುವ ಭೀತಿ
ಒಂದು ವೇಳೆ 2,000 ಕೋ.ರೂ. ಅನುದಾನ ತಂದು ನಂ. 1 ಶಾಸಕರಾಗಿರುವುದು ಹೌದಾದರೆ ಇನ್ನೊಂದು ಪಕ್ಷದ ಬಾಗಿಲು ಬಡಿಯುವ ಸ್ಥಿತಿ ಅವರಿಗೆ ಏಕೆ ಬಂತು? ತಾನು ಸೋಲುತ್ತೇನೆ ಎಂಬುದು ಅವರಿಗೆ ಗೊತ್ತಾಗಿದೆ. ಅದಕ್ಕಾಗಿ ಬಾಗಿಲು ಬಡಿಯುತ್ತಿರಬಹುದು. ನಾನು ಅವರನ್ನು ತಡೆದಿಲ್ಲ. ಒಂದು ವೇಳೆ ಮಾಜಿಗಳು ಅವರನ್ನು ತಡೆಯುತ್ತಿದ್ದಾರೆ ಎಂದು ಅವರು ಹೇಳಿಕೆ ನೀಡಿದ್ದರೆ ಮಾಜಿ ಶಾಸಕರಾದ ಯು.ಆರ್. ಸಭಾಪತಿ ಮತ್ತು ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ಮನೋರಮಾ ಮಧ್ವರಾಜ್ ಅವರನ್ನು ಕೇಳಲಿ ಎಂದು ಭಟ್ ಪ್ರತಿಕ್ರಿಯಿಸಿದರು.
ಗೊಂದಲ ಸೃಷ್ಟಿ
ಕಾಂಗ್ರೆಸ್ ಕಾರ್ಯಕರ್ತರ ಬಳಿಯಲ್ಲಿ ಒಂದು ರೀತಿಯ ಹೇಳಿಕೆ, ಮಾಧ್ಯಮದವರ ಬಳಿ ಇನ್ನೊಂದು ರೀತಿಯ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅವರು ಕಾಂಗ್ರೆಸ್, ಬಿಜೆಪಿ ಮತ್ತು ಜನರಿಗೂ ಮೋಸ ಮಾಡುತ್ತಿದ್ದಾರೆ. ಅವರು ಬಿಜೆಪಿಗೆ ಬಂದು ಬಿಜೆಪಿಗೆ ಏನೂ ಆಗಬೇಕಾಗಿಲ್ಲ. ಅವರನ್ನು ಸೋಲಿಸಲು ಬಿಜೆಪಿ ಕಾರ್ಯಕರ್ತರು ಇದ್ದಾರೆ ಎಂದರು.
ತರುವ ಪ್ರಯತ್ನವೂ ಇಲ್ಲ, ತಡೆಯೂ ಇಲ್ಲ
ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರು ಪ್ರತಿಕ್ರಿಯಿಸಿ, ನಾವು ಸಚಿವ ಪ್ರಮೋದ್ ಅವರನ್ನು ಬಿಜೆಪಿಗೆ ಕರೆತರುವ ಪ್ರಯತ್ನವನ್ನೂ ಮಾಡಿಲ್ಲ, ಬರುವುದಾದರೆ ತಡೆಯುವುದೂ ಇಲ್ಲ. ಆದರೆ ಅವರು ಅವರ ಕಾಂಗ್ರೆಸ್ ಪಕ್ಷಕ್ಕೆ ಗರಿಷ್ಠ ನಷ್ಟ ಉಂಟು ಮಾಡುತ್ತಿದ್ದಾರೆ. ನಾನು ಒಂದು ವೇಳೆ ಕೆಪಿಸಿಸಿ ಅಧ್ಯಕ್ಷನಾಗಿದ್ದರೆ ಅವರನ್ನು ಜೀವಿತಾವಧಿ ಕಾಲಕ್ಕೆ ಪಕ್ಷದಿಂದ ತೆಗೆದುಹಾಕುತ್ತಿದ್ದೆ ಎಂದು ಹೇಳಿದರು. ಪಕ್ಷದ ಮುಖಂಡರಾದ ಪ್ರಭಾಕರ ಪೂಜಾರಿ, ಉಪೇಂದ್ರ ನಾಯಕ್, ಶ್ರೀಶ ನಾಯಕ್, ಗಿರೀಶ್ ಅಂಚನ್, ಅಕ್ಷಿತ್ ಶೆಟ್ಟಿ, ಕಪ್ಪೆಟ್ಟು ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi: ರೈಲು ಬಡಿದು ವ್ಯಕ್ತಿ ಸಾವು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
MUST WATCH
ಹೊಸ ಸೇರ್ಪಡೆ
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.