ನಿವೇಶನ ರಹಿತರ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ವಸಂತ ಆಚಾರಿ
Team Udayavani, Apr 25, 2017, 3:44 PM IST
ಮಹಾನಗರ: ಪಾಲಿಕೆ ವ್ಯಾಪ್ತಿಯ ನಿವೇಶನ ರಹಿತರು ನಿವೇಶನಕ್ಕಾಗಿ ಶಾಂತಿಯುತ ಹೋರಾಟ ಮಾಡುತ್ತಿದ್ದರೂ ಸಂಬಂಧಪಟ್ಟ ಶಾಸಕರು ಅದಕ್ಕೆ ಸ್ಪಂದಿಸದೆ ನಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದು, ಕೂಡಲೇ ನಮ್ಮ ಬೇಡಿಕೆಗಳನ್ನುಈಡೇರದಿದ್ದರೆ ಉಗ್ರ ಹೋರಾಟ ಅನಿವಾರ್ಯ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಎಚ್ಚರಿಸಿದರು.
ನಿವೇಶನ ರಹಿತರ ಹೋರಾಟ ಸಮಿತಿ ವತಿಯಿಂದ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾಲಿಕೆ ಮುಂಭಾಧಿಗಧಿದಲ್ಲಿ ಸೋಮವಾರದಿಂದ ಆರಂಭಗೊಂಡ ಅಹೋರಾತ್ರಿ ಅನಿರ್ದಿಷ್ಟಾವಧಿ ಚಳವಳಿಯನ್ನುದ್ದೇಶಿಸಿ ಮಾತನಾಡಿದರು.
ಪಾಲಿಕೆಯು ಹಲವು ಕಾರಣಗಳನ್ನು ನೀಡಿ ನಿವೇಶನ ರಹಿತರಿಂದ ಎರಡೆರಡು ಬಾರಿ ಅರ್ಜಿ ಸ್ವೀಕರಿಸಿದೆ. ಆದರೆ ಪಾಲಿಕೆಯ ನಿವೇಶನ ರಹಿತರ ಪಟ್ಟಿ ನೋಡಿದರೆ ಅದರಲ್ಲಿ ಅನರ್ಹರನ್ನು ಕೂಡ ಸೇರಿಸಲಾಗಿದೆ. ಶಾಸಕರು ಅವರಿಗೆ ಬೇಕಾದವರ ಹೆಸರನ್ನು ಸೇರಿಸಿಕೊಂಡಿದ್ದು, ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದರು.
ನಿವೇಶನ ಸಿಕ್ಕಿಲ್ಲ
ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಶಕ್ತಿನಗರ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಿತಿ ವತಿಯಿಂದ 2014ರಿಂದ ಮನವಿ ನೀಡಿ ಹೋರಾಟ ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಕುರಿತು ಬೆಂಗಳೂರು ಚಲೋ, ಸುರತ್ಕಲ್ ಚಲೋವನ್ನೂ ಮಾಡಿದ್ದೇವೆ. 2015ರಲ್ಲಿ ಶಾಸಕರ ಕಚೇರಿಗೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ 18 ತಿಂಗಳಲ್ಲಿ ನಿವೇಶನ ಕೊಡುತ್ತೇವೆ ಎಂದು ಭರಧಿವಸೆ ನೀಡಿದ್ದರು. ಆದರೆ ಈತನಕ ನಿವೇಶನ ಸಿಕ್ಕಿಲ್ಲ.
ಶಕ್ತಿನಗರ, ಇಡ್ಯಾದಲ್ಲಿ ಮೀಸಲಿಟ್ಟ ಜಾಗದಲ್ಲಿ ಮನೆ ನಿರ್ಮಿಸುವ ದಿನಾಂಕವನ್ನು ಲಿಖೀತ ರೂಪದಲ್ಲಿ ನೀಡಬೇಕು. ನಿವೇಶನ ರಹಿತರ ಪಟ್ಟಿಯ 2000 ಮಂದಿಯಲ್ಲಿ ಅನರ್ಹರನ್ನು ಕೈಬಿಡಬೇಕು. ಕಣ್ಣಗುಡ್ಡೆಯ 11.25 ಎಕರೆ ಜಾಗಕ್ಕೆ ಅರ್ಹರನ್ನು ಶೀಘ್ರ ಆಯ್ಕೆ ಮಾಡಬೇಕು. ಸಮಿತಿಯ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿದರು. ಮುಷ್ಕರದಲ್ಲಿ ಸಿಪಿಐಎಂನ ನಗರ ದಕ್ಷಿಣ ಸಮಿತಿ ಕಾರ್ಯದರ್ಶಿ ಸುನೀಲ್‌ಕುಮಾರ್ ಬಜಾಲ್, ನಗರ ಉತ್ತರ ಸಮಿತಿ ಕಾರ್ಯದರ್ಶಿ ಕೃಷ್ಣಪ್ಪ ಕೊಂಚಾಡಿ, ಹೋರಾಟ ಸಮಿತಿ ಅಧ್ಯಕ್ಷ ಪ್ರೇಮನಾಥ ಜಲ್ಲಿಗುಡ್ಡೆ, ಖಜಾಂಚಿ ಪ್ರಭಾವತಿ ಬೋಳೂರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.