ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರು ಒಪ್ಪಿದ್ರು…ಆದರೆ..; ಶ್ರೀ
Team Udayavani, Jun 29, 2017, 6:24 PM IST
ಉಡುಪಿ:ಹಿಂದೂಗಳಲ್ಲೂ ಕೆಲವರು ಗೋಮಾಂಸ ಭಕ್ಷಣೆ ಮಾಡುತ್ತಾರೆ. ಹಿಂದೂಗಳು ಗೋ ಭಕ್ಷಣೆ ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಈ ಬಗ್ಗೆ ಹೆಚ್ಚಿಗೆ ಏನೂ ಹೇಳಲ್ಲ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಗುರುವಾರ ಟೀಕಾಕಾರಿಗೆ ತಿರುಗೇಟು ನೀಡಿದ್ದಾರೆ.
ಉಡುಪಿಯ ಶ್ರೀಕೃಷ್ಣ ಮಠದ ಆವರಣದಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಮುಸ್ಲಿಮರು ಕೃಷ್ಣ ಮಠದ ಆವರಣದಲ್ಲಿ ನಮಾಜ್ ಮಾಡಿಲ್ಲ. ಮುಸ್ಲಿಮರು ಪ್ರಾರ್ಥನೆ ಮಾಡಿದರೆ ಹಿಂದೂ ನಿಂದನೆಯಾಗುತ್ತಾ? ಎಂದು ಪ್ರಶ್ನಿಸಿದ್ದಾರೆ.
ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ನಡೆಸುವ ಪ್ರತಿಭಟನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಮತ್ತೊಮ್ಮೆ ಪುನರುಚ್ಚರಿಸಿದರು.
ರಾಮಮಂದಿರದ ವಿಚಾರದಲ್ಲಿ ನನ್ನ ಸಂಧಾನ ಪ್ರಯತ್ನ ವಿಫಲವಾಗಿದೆ. ರಾಮಮಂದಿರ ನಿರ್ಮಾಣದ ಬಗ್ಗೆ ದಶಕದ ಹಿಂದೆ ಮುಸ್ಲಿಮರು ಒಪ್ಪಿದ್ದರು. ಸಂಘ ಪರಿವಾರದವರು ನನ್ನ ಸಂಪರ್ಕಿಸಿದ್ದರು. ವಾರದಲ್ಲಿ ಒಂದು ದಿನ ಮುಸ್ಲಿಮರಿಗೆ ನಮಾಜ್ ಮಾಡಲು ಅವಕಾಶ ನೀಡುವ ಬಗ್ಗೆ ಮಾತುಕತೆಯಾಗಿತ್ತು. ಅದು ತಪ್ಪಲ್ಲ ಎಂದ ಮೇಲೆ ನನ್ನ ಪ್ರಯತ್ನಕ್ಕೆ ವಿರೋಧ ಯಾಕೆ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.