Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
ಇನ್ನೋರ್ವ ಆರೋಪಿಗೆ ತೀವ್ರ ಹುಡುಕಾಟ
Team Udayavani, Nov 17, 2024, 12:50 PM IST
ಕಾರ್ಕಳ: ಬೋಳ ಗ್ರಾಮದಲ್ಲಿ ಭಾರಿ ಪ್ರಮಾಣದಲ್ಲಿ ಅಕ್ರಮ ಗೋವಾ ಮದ್ಯ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಪೈಕಿ ಓರ್ವನಾಗಿರುವ ಆದಿ ಉಡುಪಿ ನಿವಾಸಿ ಪ್ರಶಾಂತ್ ಸುವರ್ಣನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಉಡುಪಿಯಿಂದ ಕಾರವಾರಕ್ಕೆ ತೆರಳಿದ ಮಾಹಿತಿ ಸಂಗ್ರಹಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಪೊಲೀಸ್ ಇಲಾಖೆ ಸಹಕಾರದೊಂದಿಗೆ ಕಾರವಾರ ಬಸ್ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೋರ್ವ ಆರೋಪಿ ಬೋಳ ಗ್ರಾಮದ ಅವಿನಾಶ್ ಮಲ್ಲಿಗೆ ಹುಡುಕಾಟ ಮುಂದುವರಿದಿದೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತೆ ಬಿಂದುಶ್ರೀ ತಿಳಿಸಿದ್ದಾರೆ.
ಬೋಳ ಗ್ರಾಮದ ಅಬ್ಬನಡ್ಕದಲ್ಲಿರುವ ಅವನಿ ನಿಲಯದ ಮನೆಯಲ್ಲಿ ಮತ್ತು ಅದೇ ಗ್ರಾಮದ ಮರಿಮಾರು ಗುತ್ತು ಮನೆಯಲ್ಲಿ 272 ಪೆಟ್ಟಿಗೆಯಲ್ಲಿ 2360.850 ಲೀ. ಗೋವಾ ಮದ್ಯವನ್ನು ಗುಪ್ತವಾಗಿ ಬಚ್ಚಿಟ್ಟಿದ್ದರು. ಅಬಕಾರಿ ಇಲಾಖೆ ತಂಡ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳು ಪರಾರಿಯಾಗಿದ್ದರು.
ಇದನ್ನೂ ಓದಿ: Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.