ಸಸ್ಯಜನ್ಯ ಆಹಾರದಲ್ಲಿ ರೋಗನಿರೋಧಕ ಶಕ್ತಿ
Team Udayavani, Aug 8, 2017, 8:40 AM IST
ಕುಂದಾಪುರ : ಆಹಾರ ಕ್ರಮದ ಬಗ್ಗೆ ಅರಿವು ಮುಖ್ಯ. ಮಳೆಗಾಲದಲ್ಲಿ ನಮ್ಮ ಪರಿಸರದಲ್ಲೇ ಲಭಿಸುವ ಸಸ್ಯಗಳು
ಹಾಗೂ ಅವುಗಳಿಂದ ತಯಾರಿಸುವ ಆಹಾರಗಳು ರೋಗನಿರೋಧಕ ಶಕ್ತಿ ಹೊಂದಿದ್ದು, ಬಹುತೇಕ ಕಾಯಿಲೆಗಳಿಗೆ ರಾಮಬಾಣ. ಆಹಾರ ಸಮತೋಲನ ಕಾಯ್ದುಕೊಳ್ಳುವ ಮೂಲಕ ಹಾಗೂ ಹಿತ-ಮಿತ ಆಹಾರ ಸೇವನೆ ಕ್ರಮದಿಂದ ಆರೋಗ್ಯ ಭಾಗ್ಯ ಪಡೆಯಬಹುದು ಎಂದು ವೈದ್ಯೆ ಡಾ| ಅಪೇûಾ ರಾವ್ ಹೇಳಿದರು.
ಅವರು ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆಯಲ್ಲಿ ನಡೆದ 5ನೇ ವರ್ಷದ ಸಸ್ಯಾಮೃತ ವಿಶಿಷ್ಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಋತುಗಳಿಗನುಸಾರವಾಗಿ ಮನುಷ್ಯನ ದೇಹ ಹಾಗೂ ಆರೋಗ್ಯದಲ್ಲಿ ಏರುಪೇರಾಗುವುದು ಸಾಮಾನ್ಯ. ಅದಕ್ಕಾಗಿ ಆಯಾ ಋತುಗಳಿಗೆ ತಕ್ಕಂತೆ ಆಹಾರ ಪದ್ಧತಿಯನ್ನು ಅನುಸರಿಸಬೇಕು ಎಂದರು.
ಬಾಂಡ್ಯ ಎಜುಕೇಶನ್ ಟ್ರಸ್ಟ್ ಸಂಸ್ಥಾಪಕ ಬಿ. ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ವೈದ್ಯಕೀಯ ತರಬೇತುದಾರೆ ಜಯಶ್ರೀ ಭಟ್, ಗುರುಕುಲ ಸಂಸ್ಥೆ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ, ಹಾಗೂ ಕೆ. ಸುಭಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.
ರಾಘವೇಂದ್ರ ಅತಿಥಿಗಳನ್ನು ಪರಿಚಯಿಸಿದರು. ಅನುಪಮಾ ಶೆಟ್ಟಿ ಸ್ವಾಗತಿಸಿ, ಸುಮನಾ ಪೈ ವಂದಿಸಿದರು. ಶಿಕ್ಷಕರಾದ ರಾಮಚಂದ್ರ ಹೆಬ್ಟಾರ್ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.