ಪೇಜಾವರಶ್ರೀ v/s ಮುತಾಲಿಕ್; ಇಫ್ತಾರ್ ನಿಂದ ಹಿಂದೂ ಸಮಾಜಕ್ಕೆ ಅವಮಾನ!
Team Udayavani, Jun 26, 2017, 4:14 PM IST
ಉಡುಪಿ: ಶ್ರೀಕೃಷ್ಣ ಮಠದ ಆವರಣದಲ್ಲಿ ಈದ್ ಹಬ್ಬದ ಪ್ರಯುಕ್ತ ಇಫ್ತಾರ್ ಕೂಟ ನಡೆಸಿದ್ದಕ್ಕೆ ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏತನ್ಮಧ್ಯೆ ಮುತಾಲಿಕ್ ಹೇಳಿಕೆಗೆ ತಿರುಗೇಟು ನೀಡಿರುವ ಪೇಜಾವರಶ್ರೀಗಳು, ಜನರ ಮನಸ್ಸನ್ನು ಕದಡುವ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ.
ಕಳೆದ ಶನಿವಾರ ಪೇಜಾವರ ಮಠದ ಆವರಣದಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದರು. ಆದರೆ ಗೋ ಹಂತಕರನ್ನು ಶ್ರೀಕೃಷ್ಣ ಮಠಕ್ಕೆ ಕರೆಯಿಸಿ ಇಫ್ತಾರ್ ಕೂಟ ಆಯೋಜಿಸಿರುವ ಕ್ರಮ ಸರಿಯಲ್ಲ ಎಂಬುದು ಮುತಾಲಿಕ್ ಆರೋಪ.
ಇಫ್ತಾರ್ ಕೂಟ ನಡೆಸುವ ಮೂಲಕ ಪೇಜಾವರಶ್ರೀಗಳು ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ. ಮುಸ್ಲಿಮರ ಮಸೀದಿಯೊಳಗಡೆ ಗಣೇಶೋತ್ಸವ, ಯುಗಾದಿ ಉತ್ಸವ ಆಚರಿಸಿದ್ದು ಇದೆಯೇ? ನೂರಾರು ವರ್ಷಗಳಿಂದ ನಾವೇ ಸೌಹಾರ್ದತೆ ತೋರುತ್ತಾ ಬಂದಿದ್ದೇವೆ ವಿನಃ, ಮುಸ್ಲಿಮರು ಆ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದಾರೆಯೇ ಎಂಬುದು ಮುತಾಲಿಕ್ ಪ್ರಶ್ನೆ.
ಹಿಂದೂ ಧರ್ಮದ ಬಗ್ಗೆ ಅವರಿಗಿಂತ ಚೆನ್ನಾಗಿ ಗೊತ್ತು: ಪೇಜಾವರಶ್ರೀ
ಇಫ್ತಾರ್ ಕೂಟ ನಡೆಸಿದ್ದನ್ನು ವಿರೋಧಿಸಿರುವ ಮುತಾಲಿಕ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಪೇಜಾವರಶ್ರೀಗಳು, ನಾನು ಮೊದಲಿನಿಂದಲೂ ಕೋಮು ಸಾಮರಸ್ಯ ಬೆಳೆಸುವ ಹಾದಿಯಲ್ಲಿದ್ದೇನೆ. ಹಾಗಾಗಿ ನಾನು ಹಿಂದೂ ಧರ್ಮಕ್ಕೆ ಯಾವುದೇ ಹಾನಿ ಮಾಡಿಲ್ಲ. ನನ್ನದು ಸ್ವತಂತ್ರ ವ್ಯಕ್ತಿತ್ವ. ಹಿಂದೂ ಧರ್ಮದ ಬಗ್ಗೆ ಅವರಿಗಿಂತ ಚೆನ್ನಾಗಿ ನನಗೆ ಗೊತ್ತು. ಮುಸ್ಲಿಮರ ಜೊತೆ ಉತ್ತಮ ಬಾಂಧವ್ಯ ಇರಿಸಿಕೊಳ್ಳಲಾಗಿದೆ. ಇದೊಂದು ಸಹಜ ಕಾರ್ಯಕ್ರಮ ದೊಡ್ಡ ವಿಷಯವೇನಲ್ಲ. ಇಫ್ತಾರ್ ಕೂಟದಿಂದ ಹಿಂದೂಗಳು ಉದಾರಿಗಳೆಂಬ ಸಂದೇಶ ರವಾನಿಸಿದಂತಾಗಿದೆ ಎಂದು ವಿಶ್ವೇಶತೀರ್ಥ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.
ಜುಲೈ 2ರಂದು ರಾಜ್ಯಾದ್ಯಂತ ಪ್ರತಿಭಟನೆ:
ಶ್ರೀಕೃಷ್ಣ ಮಠದ ಆವರಣದಲ್ಲಿ ಇಫ್ತಾರ್ ಕೂಟ ಆಯೋಜಿಸುವ ಮೂಲಕ ಪೇಜಾವರಶ್ರೀಗಳು ತಪ್ಪು ಸಂದೇಶ ರವಾನಿಸಿದ್ದಾರೆ. ಹಾಗಾಗಿ ಜುಲೈ 2ರಂದು ರಾಜ್ಯಾದ್ಯಂತ ಶ್ರೀರಾಮಸೇನೆಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಮುತಾಲಿಕ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ
Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್ ಶೆಟ್ಟಿ
Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.