ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳು ಅಗತ್ಯ: ಹೆಗ್ಗಡೆ
Team Udayavani, May 31, 2018, 12:10 PM IST
ಕಾರ್ಕಳ: ವಿದ್ಯಾರ್ಥಿಗಳಿಗೆ ಶ್ರೇಷ್ಠ ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳು ಅಗತ್ಯ. ಹೃದಯವಂತಿಕೆ, ಬದುಕಿನ ಮೌಲ್ಯಗಳನ್ನು ಮಕ್ಕಳಲ್ಲಿ ಸೃಷ್ಟಿಸಬೇಕು. ರೋಬೋಟ್‌ಗಳಂತೆ ಆಗಬಾರದು ಎಂದು ಧರ್ಮಸ್ಥಳದ ಧರ್ಮಾದಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ನೂತನ ವಿದ್ಯಾರ್ಥಿನಿಲಯ ಜ್ಞಾನಗೋಪಾಲ್ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಬುಧವಾರ ಉದ್ಘಾಟಿಸಿ ಅವರು ಮಾತ ನಾಡಿದರು.
ಕೆಲವು ವರ್ಷಗಳ ಹಿಂದೆ ನಗರ ಪ್ರದೇಶದ ವಿದ್ಯಾರ್ಥಿಗಳು ಮಾತ್ರ ಶ್ರೇಷ್ಠರು ಎನ್ನುವ ಭಾವನೆ ಗ್ರಾಮೀಣ ಭಾಗದ ಜನತೆಯಲ್ಲಿತ್ತು. ರ್‍ಯಾಂಕ್‌ಗಳೆಲ್ಲ ಬೆಂಗಳೂರು, ಮೈಸೂರು ಭಾಗದವರಿಗೆ ಸೀಮಿತ ಎನ್ನುವ ಮನೋಭಾವ ನಮ್ಮಲ್ಲಿತ್ತು. ಆದರೆ ಇಂದು ಆ ಮನೋ ಭಾವ ಬದಲಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳೂ ರ್‍ಯಾಂಕ್ ಪಡೆಯುತ್ತಿದ್ದಾರೆ ಎಂದರು.
ಶಿಕ್ಷಣ ಸಂಸ್ಥೆಗಳನ್ನು ಕಟ್ಟುವುದು ಸುಲಭವಲ್ಲ. ತ್ಯಾಗ, ದೂರದೃಷ್ಟಿ ಇರ ಬೇಕು. ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳ ಮನಸ್ಸು ಚಂಚಲವಾಗದೇ ಮನಸ್ಸು ಸ್ಥಿರವಾಗಿಟ್ಟುಕೊಳ್ಳುವ ವ್ಯವಸ್ಥೆ ಗಳು ಶಿಕ್ಷಣ ಸಂಸ್ಥೆಯಲ್ಲಿರಬೇಕು ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಬದುಕನ್ನು ಒಂದು ಚೌಕಟ್ಟಿಗೆ ತಂದು ಶಿಸ್ತು, ಬದ್ಧತೆಯಿಂದ ಜೀವನ ರೂಪಿಸಿ ಕೊಳ್ಳಬೇಕು. ಇಂದಿನ ವಿದ್ಯಾರ್ಥಿಗಳ ಪ್ರತಿಭೆ ಆಶ್ಚರ್ಯ ಹುಟ್ಟಿಸುವಂತಿದೆ. ಇಂದಿನ ಕಾಲವನ್ನು ಅರ್ಥೈಸಿಕೊಂಡು ಹೆಜ್ಜೆ ಇಡಬೇಕಿದೆ. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜತೆಗೆ ಹೋರಾಟದ ಮನೋಭಾವ, ಸೌಹಾರ್ದತೆ, ಸಾಂಸ್ಕೃತಿಕ ಸೌಂದರ್ಯ ಪ್ರಜ್ಞೆಯ ಮನಸ್ಸು, ಸಂಬಂಧಿಕರೊಂದಿಗೆ ಬೆರತುಕೊಳ್ಳು ವುದು ಹೀಗೆ ಎಲ್ಲ ರೀತಿಯ ಮನಸ್ಥಿತಿ ಆವಶ್ಯಕ. ಜ್ಞಾನಸುಧಾ ಕಾಲೇಜು ಕಡಿಮೆ ಅವಧಿಯಲ್ಲಿ ಉತ್ತಮ ಶೈಕ್ಷಣಿಕ ಸಂಸ್ಥೆಯಾಗಿ ಬೆಳೆದಿದೆ ಎಂದರು.
ಟ್ರಸ್ಟಿಗಳಾದ ಕರುಣಾಕರ ಶೆಟ್ಟಿ, ವಿದ್ಯಾ ಸುಧಾಕರ ಶೆಟ್ಟಿ, ರಘುರಾಮ್ ಶೆಟ್ಟಿ ಮತ್ತು ಎಂ.ಜಿ. ಗೌಡ್, ಕೆ. ಪಾಂಡುರಂಗ ರಾವ್, ಪಿಆರ್‌ಒ ಜ್ಯೋತಿ ಪದ್ಮನಾಭ್, ಪ್ರೌಢಶಾಲಾ ಪ್ರಾಂಶು ಪಾಲೆ ಉಷಾ ಉಪಸ್ಥಿತರಿದ್ದರು.
ಅಜೆಕಾರು ಪದ್ಮಗೋಪಾಲ ಎಜು ಕೇಶನ್ ಟ್ರಸ್ಟ್ ಅಧ್ಯಕ್ಷ ಡಾ| ಸುಧಾಕರ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆ ಗೈದರು. ಶಿಕ್ಷಕಿ ಸಂಗೀತಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲ ದಿನೇಶ ಎಂ. ಕೊಡವೂರು ವಂದಿಸಿದರು.
ವಿದ್ಯಾರ್ಥಿ ವೇತನ
ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 30.12 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಿಸಲಾಯಿತು. ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪ್ರತಿಭಾ ಪುರಸ್ಕಾರ ನೀಡ ಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.